Suzuki Jimny: ಬಿಗ್ ಶಾಕ್.. ಇಲ್ಲಿ ಜನಮೆಚ್ಚಿದ ಸುಜುಕಿ ಜಿಮ್ನಿ ಡೆಲಿವರಿ ಸ್ಥಗಿತ!

ಮಾರುತಿ ಸುಜುಕಿ ಜಿಮ್ನಿ 5-ಡೋರ್ (Maruti Suzuki Jimny 5-Door) ಪ್ರಮುಖ ಆಫ್-ರೋಡ್ ಎಸ್‌ಯುವಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಆಸ್ಟ್ರೇಲಿಯಾದಲ್ಲಿ ಇದೇ ಕಾರು ಸುಜುಕಿ ಜಿಮ್ನಿ ಎಕ್ಸ್ಎಲ್ (Suzuki Jimny XL) ಹೆಸರಿನಲ್ಲಿ ಖರೀದಿಗೆ ಲಭ್ಯವಿದೆ. ಸದ್ಯ ಆ ದೇಶದಲ್ಲಿ ಸ್ಟಾಕ್‌ಯಾರ್ಡ್ ಯುನಿಟ್‌ಗಳ ಸಮಸ್ಯೆಯಿಂದ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಆದರೆ, ಈ ಕುರಿತಂತೆ 'ಸುಜುಕಿ ಆಸ್ಟ್ರೇಲಿಯಾ' ಯಾವುದೇ ನಿಖರವಾದ ಕಾರಣವನ್ನು ಬಹಿರಂಗಪಡಿಸಿಲ್ಲ. ಜೊತೆಗೆ 'ಜಿಮ್ನಿ ಎಕ್ಸ್ಎಲ್'ನ್ನು ಗ್ರಾಹಕರು ಬುಕ್ಕಿಂಗ್ ಮಾಡುವಾಗ ಪಾವತಿಸಿರುವ ಮೊತ್ತವನ್ನು ಹಿಂದಿರುಗಿಸುವಂತೆ ಅಧಿಕೃತ ಡೀಲರ್‌ಶಿಪ್‌ಗಳಿಗೆ ಕಂಪನಿಯು ತಿಳಿಸಿದೆ ಎಂಬ ವಿವರಗಳು ಲಭ್ಯವಾಗಿವೆ.

ಭಾರತದಲ್ಲಿ ತಯಾರಿಸಿದ ಮಾರುತಿ ಸುಜುಕಿ ಜಿಮ್ನಿ 5-ಡೋರ್ ಎಸ್‌ಯುವಿಯನ್ನು ಆಸ್ಟ್ರೇಲಿಯಾ ಮಾತ್ರವಲ್ಲದೆ ಜಪಾನ್, ದಕ್ಷಿಣ ಆಫ್ರಿಕಾ ಹಾಗೂ ಲ್ಯಾಟಿನ್ ಅಮೆರಿಕದ ಕೆಲವು ಭಾಗಗಳಿಗೂ ರಫ್ತು ಮಾಡಲಾಗುತ್ತದೆ. ದೇಶ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಯಶಸ್ವಿಯಾಗಿ ಮಾರಾಟಗೊಳ್ಳುವ 'ಜಿಮ್ನಿ'ಯು ಅಷ್ಟಾಗಿ ಯಾವುದೇ ವ್ಯತ್ಯಾಸವನ್ನು ಹೊಂದಿಲ್ಲ. ಸ್ವಲ್ಪ ಮಟ್ಟಿಗೆ ಬಣ್ಣದಲ್ಲಿ ಮಾತ್ರ ಬದಲಾವಣೆಗಳಿವೆ.

Suzuki Jimny Deliveries Temporarily Halted In Australia Details

ಮಾರುತಿ ಸುಜುಕಿ ಜಿಮ್ನಿ 5-ಡೋರ್ ವಿಶೇಷತೆಗಳೇನು:

ದೇಶೀಯವಾಗಿ ಲಭ್ಯವಿರುವ ಈ ಎಸ್‌ಯುವಿಯು ರೂ.12.76 ಲಕ್ಷದಿಂದ ರೂ.14.96 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಆಲ್ಫಾ ಹಾಗೂ ಡೆಲ್ಟಾ ಎಂಬ ಎರಡು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಹೊರಭಾಗದಲ್ಲೂ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ಪ್ರೊಜೆಕ್ಟರ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.

ಈ ಕಾರು ಬ್ಲ್ಯೂಯಿಸ್ ಬ್ಲ್ಯಾಕ್, ಗ್ರಾನೈಟ್ ಗ್ರೇ, ಸಿಜ್ಲಿಂಗ್ ರೆಡ್, ನೆಕ್ಸಾ ಬ್ಲ್ಯೂ ಹಾಗೂ ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 3985 ಎಂಎಂ ಉದ್ದ, 1645 ಎಂಎಂ ಅಗಲ ಮತ್ತು 1720 ಎಂಎಂ ಎತ್ತರ ಕೂಡ ಇದೆ. ಜೊತೆಗೆ 210 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2590 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 40 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.

Suzuki Jimny Deliveries Temporarily Halted In Australia Details

ನೂತನ ಜಿಮ್ನಿ ಬಲಿಷ್ಠವಾದ 1.5-ಲೀಟರ್ 4-ಸಿಲಿಂಡರ್ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಹೊಂದಿದೆ. 105 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 134 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಹಾಗೂ 4-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಹಾಗೆಯೇ ಸಾಮಾನ್ಯ ಕಾರಿನಂತೆ 16 ರಿಂದ 17 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ಇದು 155 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 4.5 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 4 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 208 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

Suzuki Jimny Deliveries Temporarily Halted In Australia Details

ಈ ಎಸ್‌ಯುವಿಯ ಕ್ಯಾಬಿನ್ ವಿನ್ಯಾಸವು ತುಂಬಾ ಅಚ್ಚುಕಟ್ಟಾಗಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಮಲ್ಟಿಫಂಕ್ಷನ್ ಸ್ಟೀರಿಂಗ್ ವೀಲ್, ಕ್ರೂಸ್ ಕಂಟ್ರೋಲ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಟೋ ಎಸಿ ಹಾಗೂ ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಹೊಸ ಜಿಮ್ನಿ ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್ಸ್, ಹಿಲ್ ಹೋಲ್ಡ್ ಕಂಟ್ರೋಲ್ ಹಾಗೂ 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಒಳಗೊಂಡಿದೆ. ಇದಕ್ಕೆ ಮಹೀಂದ್ರಾ ಥಾರ್ ರಾಕ್ಸ್ ಹಾಗೂ ಫೋರ್ಸ್ ಗೂರ್ಖಾ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

Article Published On: Thursday, August 28, 2025, 15:51 [IST]
English summary
Suzuki jimny deliveries temporarily halted in australia details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+