270 Km ರೇಂಜ್.. ಸುಜುಕಿ ವಿಷನ್ ಇ-ಸ್ಕೈ ಅನಾವರಣ, ಇದೇ ಎಲೆಕ್ಟ್ರಿಕ್ ವ್ಯಾಗನ್ಆರ್.. ಬೆಲೆಯೂ ಅಗ್ಗ!

ಮಾರುತಿ ಸುಜುಕಿ ಇಂಡಿಯಾದ ಮಾತೃ ಸಂಸ್ಥೆ ಸುಜುಕಿ ಮೋಟಾರ್ ಕಾರ್ಪೊರೇಷನ್ (Suzuki Motor Corporation), ಟೋಕಿಯೋದಲ್ಲಿ ಆಯೋಜಿಸಿದ್ದ 2025ರ ಜಪಾನ್ ಮೊಬಿಲಿಟಿ ಶೋನಲ್ಲಿ ಹಲವು ಕಾರುಗಳನ್ನು ಪ್ರದರ್ಶಿಸಿದೆ. ವಿಶೇಷವಾಗಿ ವಿಷನ್ ಇ-ಸ್ಕೈ (Vision e-Sky) ಕಾನ್ಸೆಪ್ಟ್ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌ನ್ನು ಅನಾವರಣಗೊಳಿಸಿದೆ. ಈ ಕಾರು ವಾಹನ ಪ್ರಿಯರ ಕಣ್ಮನವನ್ನು ಸೆಳೆಯುವಲ್ಲಿಯೂ ಯಶಸ್ವಿಯಾಗಿದೆ. ಇದನ್ನು ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ವ್ಯಾಗನ್ಆರ್ ಇವಿ (Maruti WagonR EV) ಹೆಸರಿನಲ್ಲಿ ಪರಿಚಯಿಸಬಹುದು ಎನ್ನಲಾಗಿದೆ.

ಹೊಚ್ಚ ಹೊಸ ಸುಜುಕಿ ವಿಷನ್ ಇ-ಸ್ಕೈ (Suzuki Vision e-Sky) ಹ್ಯಾಚ್‌ಬ್ಯಾಕ್ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಸಿ ಆಕಾರದ ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್‌ಲೈಟ್‌ಗಳು, ಫ್ಲಶ್-ಡೋರ್ ಹ್ಯಾಂಡಲ್‌ಗಳು, ಫ್ಲಾಟ್ ಬಂಪರ್ ಮತ್ತು ಸ್ಪಾಯ್ಲರ್-ಮೌಂಟೆಡ್ ಸ್ಟಾಪ್ ಲ್ಯಾಂಪ್‌ಗಳನ್ನು ಹೊಂದಿದೆ.

Suzuki Vision E-Sky Revealed It Maruti Suzuki WagonR Electric Car Details

ಈ ಕಾರು ನಗರ ಪ್ರದೇಶದ ಚಾಲನೆಗೆ ಹೇಳಿ ಮಾಡಿಸಿದ ರೀತಿಯಲ್ಲಿದೆ. 3,395 ಮಿಮೀ ಉದ್ದ, 1,475 ಮಿಮೀ ಅಗಲ ಹಾಗೂ 1,625 ಮಿಮೀ ಎತ್ತರವಿದೆ. 'ಮಾರುತಿ ಸುಜುಕಿ ಎಸ್-ಪ್ರೆಸ್ಸೊ'ಗೆ ಹೋಲಿಕೆ ಮಾಡಿದರೆ, ಚಿಕ್ಕದಾಗಿದೆ. ಆದರೂ ಅದಕ್ಕಿಂತ ಎತ್ತರವಾಗಿದೆ.

ನೂತನ ಸುಜುಕಿ ವಿಷನ್ ಇ-ಸ್ಕೈ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಸ್ಕ್ರೀನ್ ಸೆಟಪ್, ಅತ್ಯಾಕರ್ಷಕವಾದ ಸ್ಟೀರಿಂಗ್ ವೀಲ್ ಮತ್ತು ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಹಾಗೆಯೇ 5 ಆಸನಗಳನ್ನು ಹೊಂದಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು.

Suzuki Vision E-Sky Revealed It Maruti Suzuki WagonR Electric Car Details

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿರಲಿದೆ. 20 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 25 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಎರಡು ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ. ಭರ್ತಿ ಚಾರ್ಜ್‌ನಲ್ಲಿ 270 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುವ ನಿರೀಕ್ಷೆಯಿದೆ.

ಮುಂದಿನ ವರ್ಷ (2026) ಹೊಸ 'ಸುಜುಕಿ ವಿಷನ್ ಇ-ಸ್ಕೈ' ಕಾನ್ಸೆಪ್ಟ್ ಎಲೆಕ್ಟ್ರಿಕ್ ಕಾರಿನ ಉತ್ಪಾದನಾ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ. ಮೊದಲಿಗೆ ಜಪಾನ್ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಆ ಬಳಿಕ ಭಾರತದಲ್ಲಿ 'ಮಾರುತಿ ವ್ಯಾಗನ್ಆರ್ ಇವಿ' ರೂಪದಲ್ಲಿ ಮಾರಾಟಕ್ಕೆ ಬರುವ ಸಾಧ್ಯತೆಯಿದೆ. ರೂ.8.50 ಲಕ್ಷ ಆರಂಭಿಕ ದರವನ್ನು ಪಡೆದಿರಬಹುದು ಎನ್ನಲಾಗಿದೆ.

Suzuki Vision E-Sky Revealed It Maruti Suzuki WagonR Electric Car Details

ಸ್ಟ್ಯಾಂಡರ್ಡ್ 'ಮಾರುತಿ ಸುಜುಕಿ ವ್ಯಾಗನ್ಆರ್' ವಿಶೇಷತೆಗಳೇನು:

ಈ ಹ್ಯಾಚ್‌ಬ್ಯಾಕ್ ಕನಿಷ್ಠ ರೂ.4.99 ಲಕ್ಷ ಹಾಗೂ ಗರಿಷ್ಠ ರೂ.6.95 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಸಾಲಿಡ್ ವೈಟ್, ಪೂಲ್‌ಸೈಡ್ ಬ್ಲೂ, ಸಿಲ್ಕಿ ಸಿಲ್ವರ್, ಮಿಡ್‌ನೈಟ್ ಬ್ಲ್ಯಾಕ್ ಮತ್ತು ಪ್ರೈಮ್ ಗ್ಯಾಲಂಟ್ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 165 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,435 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಇದು 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀಟರ್ ಪೆಟ್ರೋಲ್+ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಹೊಂದಿದೆ. 23 ರಿಂದ 34 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 13.58 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಹೊಸ 'ವ್ಯಾಗನ್ಆರ್' 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಮ್ಯೂಸಿಕ್ ಸಿಸ್ಟಮ್, ಕೀಲೆಸ್ ಎಂಟ್ರಿ, ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಹಾಗೂ ಸ್ಟೀರಿಂಗ್ ಮೌಂಟೆಡ್ ಕಂಟೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Friday, October 31, 2025, 11:17 [IST]
English summary
Suzuki vision e sky revealed it maruti suzuki wagonr electric car details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+