ಟಾಟಾದ ಶಕ್ತಿಗೆ ತಲೆಬಾಗಲೇಬೇಕು.. 6 ಲಕ್ಷದ ಈ ಹೊಸ ಕಾರು ಬಲು ಗಟ್ಟಿ, 5-ಸ್ಟಾರ್ ಸೇಫ್ಟಿ ರೇಟಿಂಗ್‌ ಸಿಕ್ತು!

ಇದೇ ಮೇನಲ್ಲಿ ಹೊಚ್ಚ ಹೊಸ ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್ (Tata Altroz Facelift) ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ್ನು ಅದ್ದೂರಿಯಾಗಿ ಮಾರಾಟಕ್ಕೆ ತರಲಾಗಿತ್ತು. ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಸದ್ಯ, ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಭಾರತ್ ಎನ್‌ಸಿಎಪಿ (Bharat NCAP) 'ಆಲ್ಟ್ರೋಜ್'ನ್ನು ಅತ್ಯಂತ ಸುರಕ್ಷಿತ ಕಾರೆಂದು ನಿರ್ಣಯಿಸಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ನೂತನ 'ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್' ಹ್ಯಾಚ್‌ಬ್ಯಾಕ್‌ನ್ನು ವಿವಿಧ ಸುರಕ್ಷತಾ ಮಾನದಂಡಗಳ ಅನ್ವಯ ಪರೀಕ್ಷೆಗೆ ಒಳಪಡಿಸಲಾಯಿತು. ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 29.65 ಅಂಕಗಳನ್ನು ಗಳಿಸಿದೆ. ಅದೇ ರೀತಿಯಲ್ಲಿ ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 44.90 ಅಂಕಗಳನ್ನು ಪಡೆದಿದೆ. ಇದರೊಂದಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದುವಲ್ಲಿ ಯಶಸ್ವಿಯಾಗಿದೆ.

Tata Altroz Facelift Achieve 5 Star Safety Rating In Bharat Ncap Details

ಈ 'ಆಲ್ಟ್ರೋಜ್' ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸಿತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಐಎಸ್ಒಎಫ್ಐಎಕ್ಸ್ ಚೈಲ್ಡ್ ಸೀಟ್ ಮೌಂಟ್‌ಗಳು, ಸೀಟ್‌ಬೆಲ್ಟ್ ರಿಮೈಂಡರ್‌ಗಳು, ಕ್ರೂಸ್ ಕಂಟ್ರೋಲ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಇದು ರೂ.6.89 ಲಕ್ಷದಿಂದ ರೂ.11.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಕೇಂದ್ರ ಸರ್ಕಾರ ಕಾರುಗಳ ಮೇಲಿನ 'ಜಿಎಸ್‌ಟಿ'ಯನ್ನು ಕಡಿತಗೊಳಿಸಿದೆ. ನೂತನ ದರಗಳು ಸೆ.22ರಿಂದ ಜಾರಿಗೆ ಬರಲಿದೆ. 'ಆಲ್ಟ್ರೋಜ್' ದರವು ರೂ.1.10 ಲಕ್ಷವರೆಗೆ ಇಳಿಕೆಯಾಗಿದೆ. ಈ ಕಾರು ಸ್ಮಾರ್ಟ್, ಪ್ಯೂರ್, ಪ್ಯೂರ್ ಎಸ್, ಕ್ರಿಯೇಟಿವ್ ಎಸ್ ಮತ್ತು ಅಕಂಪ್ಲೀಶ್ಡ್ ಪ್ಲಸ್ ಎಸ್ ರೂಪಾಂತರಗಳೊಂದಿಗೂ ದೊರೆಯುತ್ತದೆ.

Tata Altroz Facelift Achieve 5 Star Safety Rating In Bharat Ncap Details

ನೂತನ ಆಲ್ಟ್ರೋಜ್ ಹ್ಯಾಚ್‌ಬ್ಯಾಕ್ ಉತ್ತಮವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಐಬ್ರೋ ಸ್ಟೈಲ್ ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು, ಫ್ಲಶ್ ಡೋರ್ ಹ್ಯಾಂಡಲ್‌ಗಳು ಮತ್ತು 16 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಪ್ರಿಸ್ಟೈನ್ ವೈಟ್, ಪ್ಯೂರ್ ಗ್ರೇ ಮತ್ತು ಡ್ಯೂನ್ ಗ್ಲೋ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ವಿಶಾಲ ಗಾತ್ರದಲ್ಲಿದೆ. 3,990 ಎಂಎಂ ಉದ್ದ, 1,755 ಎಂಎಂ ಅಗಲ ಹಾಗೂ 1,523 ಎಂಎಂ ಎತ್ತರವಿದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,501 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. 1,150 ಕೆಜಿ ತೂಕ ಕೂಡ ಇದೆ. 37 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ.

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀಟರ್ ಸಿಎನ್‌ಜಿ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ಆಟೋಮೆಟಿಕ್ ಮತ್ತು 6-ಸ್ಪೀಡ್ (ಡುಯಲ್-ಕ್ಲಚ್ ಆಟೋಮೆಟಿಕ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 19 ರಿಂದ 26.2 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 165 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 12 ಸೆಕೆಂಡುಗಳಲ್ಲಿಯೇ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಇದರ ಕ್ಯಾಬಿನ್ ಕೂಡ ಉತ್ತಮವಾಗಿದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 345 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, 4 ಸ್ಪೀಕರ್ ಸೆಟಪ್‌, ಸನ್‌ರೂಫ್ ರೇರ್ ಎಸಿ ವೆಂಟ್‌ಗಳು ಹಾಗೂ ಯುಎಸ್‌‍ಬಿ ಸಿ ಚಾರ್ಜಿಂಗ್ ಪೋರ್ಟ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

More from DriveSpark

Article Published On: Wednesday, September 17, 2025, 21:16 [IST]
English summary
Tata altroz facelift achieve 5 star safety rating in bharat ncap details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+