6.89 ಲಕ್ಷ.. 5-ಸೀಟರ್, ಲಕ್ಸುರಿ ಫೀಚರ್ಸ್.. ಹೊಸ Tata Altroz Facelift ಕಾರಿಗಾಗಿ ಬುಕ್ಕಿಂಗ್ ಶುರು!
ನೂತನ 2025ರ ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್ (Tata Altroz Facelift) ಕಾರನ್ನು ಈಚೆಗೆ ಬಿಡುಗಡೆಗೊಳಿಸಲಾಯಿತು. ಇದೊಂದು ಹ್ಯಾಚ್‌ಬ್ಯಾಕ್ ಆಗಿದ್ದು, ಹೆಚ್ಚು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಾಗುತ್ತದೆ. ಹಾಗೆಯೇ ಈ ಕಾರು, ಮಾರುತಿ ಸುಜುಕಿ ಬಲೆನೊ ಹಾಗೂ ಟೊಯೋಟಾ ಗ್ಲ್ಯಾನ್ಜಾ ಹ್ಯಾಚ್‌ಬ್ಯಾಕ್‌ಗಳಿಗೆ ಪ್ರಬಲವಾದ ಸ್ಪರ್ಧೆಯೊಡ್ಡಬಲ್ಲದು. ಸದ್ಯ, ಇದೇ ಕಾರಿಗಾಗಿ ಕಂಪನಿಯು ಬುಕ್ಕಿಂಗ್ ಪಡೆಯುವುದಕ್ಕೆ ಶುರು ಮಾಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಹೊಚ್ಚ ಹೊಸ ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್ ಕಾರನ್ನು ಕೊಂಡುಕೊಳ್ಳಲು ಬಯಸುವ ಗ್ರಾಹಕರು, ಕಂಪನಿಯ ಅಧಿಕೃತ ವೆಬ್‌ಸೈಟ್ ಅಥವಾ ಸಮೀಪದ ಡೀಲರ್‌ಶಿಪ್‌ಗೆ ಭೇಟಿ ನೀಡುವ ಬುಕ್ಕಿಂಗ್ ಮಾಡಬಹುದು. ಇದಕ್ಕಾಗಿ ರೂ. 21,000 ಮುಂಗಡ ಹಣವನ್ನು ಪಾವತಿಸಬೇಕಾಗಿದ್ದು, ಅತಿ ಶೀಘ್ರದಲ್ಲೇ ವಿತರಣೆಯು ಸಹ ಆರಂಭವಾಗುವ ನಿರೀಕ್ಷೆಯಿದೆ.

ಈ ಕಾರು ಅತಿ ಕಡಿಮೆ ಬೆಲೆಯಲ್ಲಿಯೂ ಖರೀದಿದಾರರಿಗೆ ದೊರೆಯುತ್ತದೆ. ಇದು ರೂ.6.89 ಲಕ್ಷದಿಂದ ರೂ.11.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಸ್ಮಾರ್ಟ್, ಪ್ಯೂರ್, ಪ್ಯೂರ್ ಎಸ್, ಕ್ರಿಯೇಟಿವ್, ಕ್ರಿಯೇಟಿವ್ ಎಸ್, ಅಕಂಪ್ಲೀಶ್ಡ್ ಎಸ್ ಮತ್ತು ಅಕಂಪ್ಲೀಶ್ಡ್ ಪ್ಲಸ್ ಎಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ನೂತನ ಹ್ಯಾಚ್‌ಬ್ಯಾಕ್ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಐಬ್ರೋ-ಸ್ಟೈಲ್ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ರಿವರ್ಸಿಂಗ್ ಲೈಟ್ ಮತ್ತು 16-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಜೊತೆಗೆ ಹಲವು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,501 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ಹೊಸ ಆಲ್ಟ್ರೋಜ್ ಫೇಸ್‌ಲಿಫ್ಟ್ ಕಾರು ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀ. ಸಿಎನ್‌ಜಿ ಹಾಗೂ 1.5-ಲೀ. ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 19 ರಿಂದ 26 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.
ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಒಳಭಾಗದ ಕ್ಯಾಬಿನ್ ಕೂಡ ತುಂಬಾ ಚೆನ್ನಾಗಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (10.25 - ಇಂಚು) ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ (10.25 - ಇಂಚು), ಟೂ-ಸ್ಪೋಕ್ ಸ್ಟೀರಿಂಗ್ ವೀಲ್, 4 ಸ್ಪೀಕರ್ ಸೆಟಪ್, ರೇರ್ ಎಸಿ ವೆಂಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಮತ್ತು ಯುಎಸ್‌ಬಿ-ಸಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಈ ಕಾರು ಹತ್ತಾರು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ 6 - ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications