TATA: ಟಾಟಾ ಹೊಸ ಕಾರಿನ ಬಿಡುಗಡೆಗೆ ದಿನಾಂಕ ನಿಗದಿ.. ಅತಿ ಕಡಿಮೆ ಬೆಲೆಗೆ ಮಾರಾಟಕ್ಕೆ?

ಟಾಟಾ ಮೋಟಾರ್ಸ್ (Tata Motors) ನಂಬಿಕಾರ್ಹ ಸ್ವದೇಶಿ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಟಿಯಾಗೊ, ಟಿಗೂರ್, ಪಂಚ್, ನೆಕ್ಸಾನ್‌, ಕರ್ವ್, ಸಫಾರಿ ಹಾಗೂ ಹ್ಯಾರಿಯರ್ ಕಾರಿಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಸದ್ಯ, ಕಂಪನಿಯು 'ಆಲ್ಟ್ರೋಜ್' ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಫೇಸ್‌ಲಿಫ್ಟ್ ಅಂದರೆ, ನವೀಕರಿಸಿದ ಮಾಡೆಲ್‌ನ್ನು ಅತಿ ಶೀಘ್ರದಲ್ಲಿ ಬಿಡುಗಡೆಗೊಳಿಸಲಿದೆ. ಅದಕ್ಕಾಗಿ ಭರದಿಂದ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ನೂತನ ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್ (Tata Altroz Facelift) ಹ್ಯಾಚ್‌ಬ್ಯಾಕ್‌, ಇದೇ ಮೇ 21ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಕಾರು ಬಜೆಟ್ ಬೆಲೆಯಲ್ಲಿಯೂ ಸಿಗಲಿದ್ದು, ರೂ.6 ಲಕ್ಷದಿಂದ ರೂ.11 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ.

Tata Altroz Facelift Car Likely Launch On May 21 Expected Price Mileage And Features Details

ಹೊಸ ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿರುವ ಸಾಧ್ಯತೆಯಿದೆ.ಹೊಸದಾಗಿರುವ ಗ್ರಿಲ್, ಮರುವಿನ್ಯಾಸಗೊಳಿಸಿರುವ ಬಂಪರ್, ಆಕರ್ಷಕವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫಾಗ್ ಲ್ಯಾಂಪ್‌ಗಳು, ಫ್ಲಶ್-ಟೈಪ್ ಡೋರ್ ಹ್ಯಾಂಡಲ್‌ಗಳು ಮತ್ತು 16-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದುಕೊಂಡಿರಬಹುದು ಎನ್ನಲಾಗಿದೆ.

ಈ ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್ ಹ್ಯಾಚ್‌ಬ್ಯಾಕ್‌ನ ಪವರ್‌ಟ್ರೇನ್‌ನಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಹೇಳಲಾಗಿದ್ದು, ಪ್ರಸ್ತುತವಿರುವ ಮಾಡೆಲ್‌ನಂತೆಯೇ ಇರಲಿದೆ. ಈಗಿರುವ ಆಲ್ಟ್ರೋಜ್ ಕಾರು, 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 88 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 115 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಡಿಸಿಟಿ (ಡುಯಲ್-ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

Tata Altroz Facelift Car Likely Launch On May 21 Expected Price Mileage And Features Details

ಇನ್ನೊಂದು 1.5-ಲೀಟರ್ ಡೀಸೆಲ್ ಎಂಜಿನ್, 90 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 200 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದೆ. ಮತ್ತೊಂದು 1.2-ಲೀಟರ್ ಸಿಎನ್‌ಜಿ ಎಂಜಿನ್, 73.5 ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 103 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಇದು ಕೂಡ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಮಾತ್ರ ಹೊಂದಿದೆ.

ನೂತನ ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್ ಕಾರು 19 ರಿಂದ 26 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ. ಇದರಲ್ಲಿಯೂ 5 ಆಸನಗಳಿರಲಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 345 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿರುವ ನಿರೀಕ್ಷೆಯೂ ಇದೆ.

ಈ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್, ಸಿಂಗಲ್-ಪೇನ್ ಸನ್‌ರೂಫ್, ಆಟೋ ಎಸಿ ಹಾಗೂ 8-ಸ್ಪೀಕರ್ ಸೌಂಡ್ ಸಿಸ್ಟಮ್‌ನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ರೇರ್ ಪಾರ್ಕಿಂಗ್ ಸೆನ್ಸರ್ಸ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರಬಹುದು ಎನ್ನಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, April 28, 2025, 18:20 [IST]
English summary
Tata altroz facelift car likely launch on may 21 expected price mileage and features details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+