Tata Altroz Facelift: ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್ ಕನ್ನಡ ವಿಡಿಯೋ ರಿವ್ಯೂ!
ಇತ್ತೀಚೆಗೆ ಹೊಚ್ಚ ಹೊಸ 2025ರ ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್ (Tata Altroz Facelift) ಹ್ಯಾಚ್‌ಬ್ಯಾಕ್‌ನ್ನು ಬಿಡುಗಡೆಗೊಳಿಸಲಾಯಿತು. ಇದು ರೂ.6.89 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದ್ದು, ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ನಮ್ಮ 'ಡ್ರೈವ್‌ಸ್ಪಾರ್ಕ್' ತಂಡಕ್ಕೆ ಈ ಕಾರಿನ ಟೆಸ್ಟ್ ಡ್ರೈವ್ ನಡೆಸುವ ಅವಕಾಶ ಕೂಡ ಲಭ್ಯವಾಗಿತು. ನಿಮಗಾಗಿ, ನೂತನ 'ಆಲ್ಟ್ರೋಜ್' ಕಾರು ಹೇಗಿದೆ ಎಂಬುದರ ಕುರಿತಂತೆ ಸಂಪೂರ್ಣವಾದ ವಿಡಿಯೋ ರಿವ್ಯೂ..
ಈ ಕಾರು ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಐಬ್ರೋ-ಸ್ಟೈಲ್ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, 'ಟಿ' ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಟೈಲ್‌ಲೈಟ್‌ಗಳು, ರಿವರ್ಸಿಂಗ್ ಲೈಟ್, 16-ಇಂಚಿನ ಅಲಾಯ್ ವೀಲ್‌ಗಳು ಹಾಗೂ ಫ್ಲಶ್ ಡೋರ್ ಹ್ಯಾಂಡಲ್‌ಗಳನ್ನು ಪಡೆದಿದೆ.

ನೂತನ ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್ ಹ್ಯಾಚ್‌ಬ್ಯಾಕ್, 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣ ಮಾಡಬಹುದು. ದೂರದ ಊರುಗಳಿಗೆ ತೆರಳುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 345 ಲೀಟರ್ & 210 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಹೊಸ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀಟರ್ ಸಿಎನ್‌ಜಿ ಮತ್ತು 1.5-ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಹಾಗೂ 6-ಸ್ಪೀಡ್ (ಡುಯಲ್-ಕ್ಲಚ್ ಆಟೋಮೆಟಿಕ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಹೊಂದಿದೆ.
ಈ ಹ್ಯಾಚ್‌ಬ್ಯಾಕ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 10.25-ಇಂಚಿನ ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟೂ-ಸ್ಪೋಕ್ ಸ್ಟೀರಿಂಗ್ ವೀಲ್, 4-ಸ್ಪೀಕರ್ ಸೆಟಪ್, ರೇರ್ ಎಸಿ ವೆಂಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಹಾಗೂ ಯುಎಸ್‌ಬಿ-ಸಿ ಚಾರ್ಜಿಂಗ್ ಪೋರ್ಟ್‌ಗಳನ್ನು ಪಡೆದಿದೆ.
ನೂತನ ಆಲ್ಟ್ರೋಜ್ ಫೇಸ್‌ಲಿಫ್ಟ್ ಹ್ಯಾಚ್‌ಬ್ಯಾಕ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications