5-ಸೀಟರ್.. 6 ಲಕ್ಷ, ಸನ್‌ರೂಫ್.. ಹೊಸ 'ಟಾಟಾ' ಕಾರು ಡೀಲರ್‌ಶಿಪ್‌ಗಳಿಗೆ ಬಂದೇ ಬಿಡ್ತು, ವಿಶೇಷತೆಗಳೇನು?
ಇತ್ತೀಚೆಗೆ 2025ರ ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್ (Tata Altroz Facelift) ಕಾರನ್ನು ಮಾರಾಟಕ್ಕೆ ತರಲಾಯಿತು. ಇದು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದ್ದು, ಹಲವು ಹೊಸತನಗಳಿಗೆ ಸಾಕ್ಷಿಯಾಗಿದೆ. ಈ ತಿಂಗಳಾರಂಭದಲ್ಲಿ ನೂತನ ಕಾರಿಗಾಗಿ ಬುಕ್ಕಿಂಗ್ ತೆಗೆದುಕೊಳ್ಳುವ ಪ್ರಕ್ರಿಯೆಗೂ ಕಂಪನಿ ಚಾಲನೆ ನೀಡಿತ್ತು. ಆಸಕ್ತ ಖರೀದಿದಾರರು ಅಧಿಕೃತ ವೆಬ್‌ಸೈಟ್ ಅಥವಾ ಹತ್ತಿರದ ಡೀಲರ್‌ಶಿಪ್‌ಗೆ ಭೇಟಿ ನೀಡಿ, ರೂ. 21,000 ಮುಂಗಡ ಹಣ ಪಾವತಿಸಿ ಕಾಯ್ದಿರಬಹುದಾಗಿದೆ.
ಸದ್ಯ, ದೇಶಾದ್ಯಂತ ವಿವಿಧ ಡೀಲರ್‌ಶಿಪ್‌ಗಳಿಗೆ ಹೊಚ್ಚ ಹೊಸ 'ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್'ನ್ನು ತಲುಪಿಸಲಾಗುತ್ತಿದೆ. ಅದಕ್ಕೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಎಲ್ಲವು ಅಂದುಕೊಂಡಂತೆ ನಡೆದರೆ, ಕೆಲವೇ ದಿನಗಳಲ್ಲಿ ಈ ಕಾರಿನ ವಿತರಣೆಗಳು ಕೂಡ ಆರಂಭವಾಗಲಿವೆ.

ನೂತನ ಹ್ಯಾಚ್‌ಬ್ಯಾಕ್ ಬಜೆಟ್ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ. ಕನಿಷ್ಠ ರೂ.6.89 ಲಕ್ಷ ಮತ್ತು ಗರಿಷ್ಠ ರೂ.11.49 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ ರೂಪಾಂತರಗಳನ್ನು (ವೇರಿಯೆಂಟ್) ಅವಲಂಭಿಸಿ 210 ರಿಂದ 345 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಈ ಕಾರು ಸ್ಮಾರ್ಟ್, ಪ್ಯೂರ್, ಪ್ಯೂರ್ ಎಸ್, ಕ್ರಿಯೇಟಿವ್ ಎಸ್ ಮತ್ತು ಅಕಂಪ್ಲೀಶ್ಡ್ ಪ್ಲಸ್ ಎಸ್ ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಹೊರಭಾಗದಲ್ಲಿ ನೋಡುಗರ ಕಣ್ಣು ಕುಕ್ಕುವಂತಹ ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ರಿವರ್ಸಿಂಗ್ ಲೈಟ್ ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.

ಹೊಸ ಹ್ಯಾಚ್‌ಬ್ಯಾಕ್ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀಟರ್ ಸಿಎನ್‌ಜಿ ಮತ್ತು 1.5-ಲೀಟರ್ ಟರ್ಬೋ ಚಾರ್ಜ್ಡ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಹಾಗೂ 6-ಸ್ಪೀಡ್ (ಡುಯಲ್-ಕ್ಲಚ್ ಆಟೋಮೆಟಿಕ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಹೊಂದಿದೆ. ಜೊತೆಗೆ ಯಾವ ಬೈಕ್‌ಗೂ ಕಡಿಮೆಯಿಲ್ಲದ ರೀತಿಯಲ್ಲಿ 19 ರಿಂದ 26 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡಬಹುದು ಎಂದು ಹೇಳಲಾಗಿದೆ.
ನೂತನ ಆಲ್ಟ್ರೋಜ್ ಫೇಸ್‌ಲಿಫ್ಟ್ ಕಾರು ಹಲವು ಆಕರ್ಷಕ ಬಣ್ಣಗಳೊಂದಿಗೂ ಸಿಗುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟೂ ಸ್ಪೋಕ್ ಸ್ಟೀರಿಂಗ್ ವೀಲ್, 4 - ಸ್ಪೀಕರ್ ಸೆಟಪ್, ರೇರ್ ಎಸಿ ವೆಂಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಹಾಗೂ ಯುಎಸ್‌ಬಿ-ಸಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸುತ್ತದೆ. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications