ಬಡವರ ಅಂಬಾರಿ: 26 ಕಿ.ಮೀ ಮೈಲೇಜ್.. 6 ಲಕ್ಷ, ಈ TATA ಕಾರಿಗೆ ಫುಲ್ ಡಿಮ್ಯಾಂಡ್, ಜನ ಮುಗಿಬಿದ್ದು ಖರೀದಿ!
ಟಾಟಾ ಆಲ್ಟ್ರೋಜ್ (Tata Altroz) ಜನಮೆಚ್ಚಿದ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಇದು ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸ ಹಾಗೂ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಈ ಆಗಸ್ಟ್ ತಿಂಗಳು 'ಆಲ್ಟ್ರೋಜ್' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 3,959 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 3,031ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 3,062 ಪ್ರಗತಿಯಾಗಿದೆ.
ಟಾಟಾ ಆಲ್ಟ್ರೋಜ್ ವಿಶೇಷತೆಗಳೇನು:
ಪ್ರಸ್ತುತ ಈ ಹ್ಯಾಚ್‌ಬ್ಯಾಕ್ ಕನಿಷ್ಠ ರೂ.6.89 ಲಕ್ಷ ಹಾಗೂ ಗರಿಷ್ಠ ರೂ.11.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಕೇಂದ್ರ ಸರ್ಕಾರವು ಕಾರುಗಳ ಮೇಲಿನ ಜಿಎಸ್‌ಟಿ ಪ್ರಮಾಣವನ್ನು ದೊಡ್ಡ ಮಟ್ಟದಲ್ಲಿ ಕಡಿತಗೊಳಿಸಿದೆ. ಅದರ ಸಂಪೂರ್ಣ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲು 'ಟಾಟಾ ಮೋಟಾರ್ಸ್' ನಿರ್ಧರಿಸಿದೆ. ಹೀಗಾಗಿ 'ಆಲ್ಟ್ರೋಜ್' ಬೆಲೆಯನ್ನು ರೂ.1.10 ಲಕ್ಷವರೆಗೆ ಇಳಿಸಿದೆ. ನೂತನ ದರಗಳು ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿದೆ.

ಇದು ಸ್ಮಾರ್ಟ್, ಪ್ಯೂರ್, ಪ್ಯೂರ್ ಎಸ್, ಕ್ರಿಯೇಟಿವ್ ಎಸ್ ಹಾಗೂ ಅಕಂಪ್ಲೀಶ್ಡ್ ಪ್ಲಸ್ ಎಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಐಬ್ರೋ ಸ್ಟೈಲ್ ಎಲ್ಇಡಿ ಡಿಆರ್‌ಎಲ್‌ಗಳು, 'ಟಿ' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಟೈಲ್‌ಲೈಟ್‌ಗಳು, ಫ್ಲಶ್ ಡೋರ್ ಹ್ಯಾಂಡಲ್‌ಗಳು ಹಾಗೂ 16 ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.
ನೂತನ ಆಲ್ಟ್ರೋಜ್ ಹ್ಯಾಚ್‌ಬ್ಯಾಕ್ ಎಂಬರ್ ಗ್ಲೋ, ಪ್ರಿಸ್ಟೈನ್ ವೈಟ್, ಪ್ಯೂರ್ ಗ್ರೇ, ಡ್ಯೂನ್ ಗ್ಲೋ ಹಾಗೂ ರಾಯಲ್ ಬ್ಲೂ ಎಂಬ ಬಣ್ಣಗೊಂದಿಗೂ ದೊರೆಯುತ್ತದೆ. 3,990 ಎಂಎಂ ಉದ್ದ, 1,755 ಎಂಎಂ ಅಗಲ ಮತ್ತು 1,523 ಎಂಎಂ ಎತ್ತರ ಸಹ ಇದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,501 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 1,150 ಕೆಜಿ ತೂಕವಿದೆ.

ಈ ಕಾರು ಹೆಚ್ಚು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀ. ಸಿಎನ್‌ಜಿ ಹಾಗೂ 1.5-ಲೀ. ಟರ್ಬೋ ಚಾರ್ಜ್ಡ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ & 6-ಸ್ಪೀಡ್ (ಡುಯಲ್-ಕ್ಲಚ್ ಆಟೋಮೆಟಿಕ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ.
ಇದು ಗರಿಷ್ಠ ಇಂಧನ ದಕ್ಷತೆಯಿಂದಲೂ ಮನೆ ಮಾತಾಗಿದೆ. 19 ರಿಂದ 26.2 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 37 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 165 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 12 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಹೊಸ ಆಲ್ಟ್ರೋಜ್ ಹ್ಯಾಚ್‌ಬ್ಯಾಕ್ ಕ್ಯಾಬಿನ್ ವಿನ್ಯಾಸವು ಅತ್ಯಾಧುನಿಕವಾಗಿದೆ. 5 ಆಸನಗಳನ್ನು ಒಳಗೊಂಡಿದೆ. 345 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟೂ-ಸ್ಪೋಕ್ ಸ್ಟೀರಿಂಗ್ ವೀಲ್, 4-ಸ್ಪೀಕರ್ ಸೆಟಪ್, ಕೋಲ್ಡ್ ಗ್ಲೋವ್‌ಬಾಕ್ಸ್, ರೇರ್ ಎಸಿ ವೆಂಟ್‌ಗಳು, ಯುಎಸ್‌ಬಿ-ಸಿ ಚಾರ್ಜಿಂಗ್ ಪೋರ್ಟ್‌ಗಳು ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಈ ಕಾರು ಸುರಕ್ಷತೆಗೂ ಹೆಸರುವಾಸಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ವಿಂಡ್‌ಶೀಲ್ಡ್ ವೈಪರ್‌ಗಳು, ಕ್ರೂಸ್ ಕಂಟ್ರೋಲ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








