TATA: 26 ಕಿ.ಮೀ ಮೈಲೇಜ್.. 6 ಲಕ್ಷ, ಈ ಜನಪ್ರಿಯ ಟಾಟಾ ಕಾರಿಗೆ ಫುಲ್ ಡಿಮ್ಯಾಂಡ್.. ಬಿಸಿ ದೋಸೆಯಂತೆ ಮಾರಾಟ!

ಟಾಟಾ ಆಲ್ಟ್ರೋಜ್ (Tata Altroz) ಜಗಮೆಚ್ಚಿದ ಹ್ಯಾಚ್‌ಬ್ಯಾಕ್‌ ಎಂದೇ ಹೆಸರುವಾಸಿಯಾಗಿದೆ. ಇದು ಅತ್ಯಾಧುನಿಕವಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಅದಕ್ಕೆ ತಕ್ಕಂತೆ ಈ ಸೆಪ್ಟೆಂಬರ್ ತಿಂಗಳಲ್ಲೂ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 12,032 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 9,233 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 30.32% ಪ್ರಗತಿಯಾಗಿದೆ.

ಟಾಟಾ ಆಲ್ಟ್ರೋಜ್ ವಿಶೇಷತೆಗಳೇನು?

ಈ ಹ್ಯಾಚ್‌ಬ್ಯಾಕ್‌ ಅತಿ ಕಡಿಮೆ ಬೆಲೆಯಲ್ಲಿ ಲಭ್ಯವಿದೆ. ಕನಿಷ್ಠ ರೂ.6.30 ಲಕ್ಷ ಹಾಗೂ ಗರಿಷ್ಠ ರೂ.10.51 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರಿಗೂ ಸುಲಭವಾಗಿ ಕೈಗೆಟುಕುತ್ತದೆ. ಸ್ಮಾರ್ಟ್, ಪ್ಯೂರ್, ಪ್ಯೂರ್ ಎಸ್, ಕ್ರಿಯೇಟಿವ್, ಕ್ರಿಯೇಟಿವ್ ಎಸ್, ಅಕಾಂಪ್ಲಿಶ್ಡ್ ಎಸ್ ಹಾಗೂ ಅಕಾಂಪ್ಲಿಶ್ಡ್ ಪ್ಲಸ್ ಎಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Tata Altroz September 2025 Sales Details

ಇದು ಪ್ರೀಮಿಯಂ ಲುಕ್ ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫ್ಲಶ್- ಡೋರ್ ಹ್ಯಾಂಡಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು ಹಾಗೂ 16-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಪ್ಯೂರ್ ಗ್ರೇ, ರಾಯಲ್ ಬ್ಲೂ, ಎಂಬರ್ ಗ್ಲೋ ಮತ್ತು ಡ್ಯೂನ್ ಗ್ಲೋ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಆಲ್ಟ್ರೋಜ್' ಹೆಚ್ಚು ವಿಶಾಲವಾಗಿದೆ. 3,990 ಮಿ.ಮೀ ಉದ್ದ, 1,755 ಮಿ.ಮೀ ಅಗಲ ಮತ್ತು 1,523 ಎಂಎಂ ಎತ್ತರವಿದೆ. 165 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,501 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. 1,150 ಕೆಜಿ ತೂಕವಿದೆ.

Tata Altroz September 2025 Sales Details

ಈ ಕಾರು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌, 88 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 115 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ & 6-ಸ್ಪೀಡ್ (ಡುಯಲ್-ಕ್ಲಚ್ ಆಟೋಮೆಟಿಕ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಇನ್ನೊಂದು 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ + ಸಿಎನ್‌ಜಿ ಎಂಜಿನ್‌, 73.5 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 103 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

Tata Altroz September 2025 Sales Details

ಮತ್ತೊಂದು 1.5-ಲೀ. ಡೀಸೆಲ್ ಎಂಜಿನ್, 90 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 200 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಈ ಕಾರು ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 19 ರಿಂದ 26 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 165 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 12 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಹೊಸ 'ಆಲ್ಟ್ರೋಜ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 345 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (10.25 ಇಂಚು), ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, 4 -ಸ್ಪೀಕರ್ ಸೆಟಪ್‌, ಸನ್‌ರೂಫ್ ಮತ್ತು ಯುಎಸ್‌‍ಬಿ ಸಿ ಚಾರ್ಜಿಂಗ್ ಪೋರ್ಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದುವಲ್ಲಿಯೂ ಯಶಸ್ವಿಯಾಗಿದೆ. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಕ್ರೂಸ್ ಕಂಟ್ರೋಲ್ & 360 ಡಿಗ್ರಿ ಕ್ಯಾಮೆರಾದಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Saturday, October 18, 2025, 8:39 [IST]
English summary
Tata altroz september 2025 sales details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+