Tata: ದುಬಾರಿ ಬೆಲೆ ಎಸ್‌ಯುವಿಗಳಿಗೆ ಸವಾಲು.. ಟಾಟಾದ ಮತ್ತೊಂದು ಕಾರಿನ ಪ್ರದರ್ಶನ, ಯಾವುದು?

ಟಾಟಾ ಮೋಟಾರ್ಸ್ (Tata Motors), ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿದೆ. ಟಿಯಾಗೊ ಇವಿ, ಟಿಗೊರ್ ಇವಿ, ಪಂಚ್ ಇವಿ, ನೆಕ್ಸಾನ್ ಇವಿ ಹಾಗೂ ಕರ್ವ್ ಇವಿಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ನವದೆಹಲಿಯ ಭಾರತ್ ಮಂಟಪದಲ್ಲಿ ಅದ್ದೂರಿಯಾಗಿ ಆಯೋಜಿಸಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ-2025 ಕಾರ್ಯಕ್ರಮದಲ್ಲಿ ಕಂಪನಿಯು ಹೊಚ್ಚ ಹೊಸ 'ಅವಿನ್ಯಾ' ಕಾನ್ಸೆಪ್ಟ್ ಕಾರನ್ನು ಪ್ರದರ್ಶಿಸಿದೆ. ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ ಎನ್ನಲಾಗಿದ್ದು, ಹೆಚ್ಚು ಆಕರ್ಷಕವಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ವಿನ್ಯಾಸ (Design): ನೂತನ ಟಾಟಾ ಅವಿನ್ಯಾ ಕಾನ್ಸೆಪ್ಟ್ ಎಲೆಕ್ಟ್ರಿಕ್ ಎಸ್‌ಯುವಿ, ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಹೊಸದಾಗಿರುವ ಎಲ್‌ಇಡಿ ಹೆಡ್‌ಲೈಟ್‌ಗಳು, ಟಿ-ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್‌ಇಡಿ ಡಿಆರ್‌ಎಲ್‌ಗಳು, ಬ್ಲ್ಯಾಂಕೆಡ್-ಆಫ್ ಗ್ರಿಲ್‌ನ್ನು ಪಡೆದಿದೆ. ಅದೇ ರೀತಿಯಲ್ಲಿ ಎಲ್‌ಇಡಿ ಡಿಆರ್‌ಎಲ್‌ಗಳಂತೆಯೇ ಟೈಲ್ ಲೈಟ್‌ಗಳನ್ನು ಹೊಂದಿದೆ. ಜೊತೆಗೆ ಒಳಭಾಗದಲ್ಲಿ ಡುಯಲ್-ಟೋನ್ ಕ್ಯಾಬಿನ್ ಥೀಮ್‍ನ್ನು ತನ್ನದಾಗಿಸಿಕೊಂಡಿದೆ.

Tata Avinya Concept Showcased At Auto Expo 2025 Details

ಕಾರ್ಯಕ್ಷಮತೆ (Performance): ಸದ್ಯ, ಈ ಕಾರನ್ನು ಪ್ರದರ್ಶಿಸಲಾಗಿದೆಯೇ ಹೊರತು, ಕಾರ್ಯಕ್ಷಮತೆಯ ಕುರಿತಂತೆ ಯಾವುದೇ ವಿವರಗಳನ್ನು ಕಂಪನಿಯು ಬಹಿರಂಗಪಡಿಸಿಲ್ಲ. ಈ ಕಾರು ಬೃಹತ್ ಗಾತ್ರದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿರಲಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ.

ವೈಶಿಷ್ಟ್ಯಗಳು (Features): ಹೊಸ ಟಾಟಾ ಅವಿನ್ಯಾ ಕಾನ್ಸೆಪ್ಟ್ ಎಲೆಕ್ಟ್ರಿಕ್ ಕಾರು ಹಲವು ಅತ್ಯುತ್ತಮ ವೈಶಿಷ್ಟ್ಯಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ. ಪ್ರಮುಖವಾಗಿ ದೊಡ್ಡದಾಗಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಪಡೆದಿರುವುದು ಬಹುತೇಕ ಖಚಿತವಾಗಿದೆ. ಇದರೊಟ್ಟಿಗೆ ಡಿಜಿಟಲ್-ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಎಸಿ, 6-ವೇ ಪವರ್ ಡ್ರೈವರ್ ಸೀಟ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿರುವ ನಿರೀಕ್ಷೆಯಿದೆ.

Tata Avinya Concept Showcased At Auto Expo 2025 Details

ಸುರಕ್ಷತಾ ವೈಶಿಷ್ಟ್ಯಗಳು (Safety Features): ಈ ಎಲೆಕ್ಟ್ರಿಕ್ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುವ ಸಾಧ್ಯತೆಯಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಹಿಲ್-ಹೋಲ್ಡ್, ಹಿಲ್-ಡಿಸೆಂಟ್ ಕಂಟ್ರೋಲ್ ಹಾಗೂ 360-ಡಿಗ್ರಿ ಕ್ಯಾಮೆರಾಗಳನ್ನು ಒಳಗೊಂಡಿರಬಹುದು ಎನ್ನಲಾಗಿದೆ.

ಬೆಲೆ (Price): ನೂತನ ಟಾಟಾ ಅವಿನ್ಯಾ ಕಾನ್ಸೆಪ್ಟ್ ಎಲೆಕ್ಟ್ರಿಕ್ ಎಸ್‌ಯುವಿ ಕೊಂಚ ಹೆಚ್ಚಿನ ದರವನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಬರೋಬ್ಬರಿ ರೂ.30 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. 2026ರಲ್ಲಿ ಈ ಕಾರು ಅದ್ದೂರಿಯಾಗಿ ಮಾರಾಟ ಬರುವ ನೀರಿಕ್ಷೆಯಿದೆ.

Tata Avinya Concept Showcased At Auto Expo 2025 Details

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, January 17, 2025, 13:50 [IST]
English summary
Tata avinya concept showcased at auto expo 2025 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+