'ಐರಾವತ' ರೀತಿಯಲ್ಲಿರುವ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸಲು ಟಾಟಾ ತಯಾರಿ.. ಬೆಲೆ ಎಷ್ಟಿರಲಿದೆ?

ಟಾಟಾ ಮೋಟಾರ್ಸ್ (Tata Motors), ಎಲೆಕ್ಟ್ರಿಕ್ ಕಾರುಗಳ ತಯಾರಿಕೆಯಲ್ಲಿ ಅಗ್ರ ಸ್ಥಾನದಲ್ಲಿದೆ. ದೇಶೀಯ ಮಾರುಕಟ್ಟೆಯಲ್ಲಿ ಹಲವು ವಿದ್ಯುತ್ ಚಾಲಿತ ಕಾರುಗಳನ್ನು ಬಿಡುಗಡೆಗೊಳಿಸಲು ಸಿದ್ಧತೆಯನ್ನು ನಡೆಸುತ್ತಿದೆ. ಇತ್ತೀಚೆಗೆ ಯಶಸ್ವಿಯಾಗಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಅವಿನ್ಯಾ ಎಕ್ಸ್ (Avinya X) ಕಾನ್ಸೆಪ್ಟ್ ಎಲೆಕ್ಟ್ರಿಕ್ ಎಸ್‌ಯುವಿ ಪ್ರದರ್ಶನ ಮಾಡಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಅತಿ ಶೀಘ್ರದಲ್ಲಿಯೇ ಈ ಕಾರು ಬಿಡುಗಡೆಯಾಗಿವ ನಿರೀಕ್ಷೆಯಿದೆ. ಬನ್ನಿ.. ನೂತನ ಟಾಟಾ ಅವಿನ್ಯಾ ಎಕ್ಸ್ ಎಸ್‌ಯುವಿಯ ನಿರೀಕ್ಷಿತ ಬೆಲೆ ಹಾಗೂ ವಿಶೇಷತೆ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.

ಭಾರತ್ ಮೊಬಿಲಿಟಿ ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾದ ನೂತನ ಟಾಟಾ ಅವಿನ್ಯಾ ಎಕ್ಸ್ (Tata Avinya X) ಎಲೆಕ್ಟ್ರಿಕ್ ಎಸ್‌ಯುವಿ ಹೊರಭಾಗದಲ್ಲಿ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ವಿನೂತನವಾಗಿರುವ ಎಲ್‌ಇಡಿ ಹೆಡ್‌ಲೈಟ್‌ಗಳು, 'ಟಿ' ಅಕ್ಷರದ ರೀತಿಯಲ್ಲಿರುವ ಎಲ್‌ಇಡಿ ಡಿಆರ್‌ಎಲ್‌ಗಳು, ಬ್ಲ್ಯಾಂಕೆಡ್-ಆಫ್ ಗ್ರಿಲ್‌ ಹಾಗೂ ಟೈಲ್ ಲೈಟ್‌ಗಳನ್ನು ಒಳಗೊಂಡಿದೆ.

Tata Avinya Electric Suv Launch Soon Expected Price Range And Features Details

ಸದ್ಯಕ್ಕೆ ನೂತನ ಟಾಟಾ ಅವಿನ್ಯಾ ಎಕ್ಸ್ ಎಲೆಕ್ಟ್ರಿಕ್ ಎಸ್‌ಯುವಿ ಪವರ್‌ಟ್ರೇನ್‌ ಬಗ್ಗೆ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ. ಈ ಕಾರು ಶಕ್ತಿಯುತವಾದ ಬ್ಯಾಟರಿ ಪ್ಯಾಕ್ ಹೊಂದಿರುವ ನಿರೀಕ್ಷೆಯಿದೆ. ಭರ್ತಿ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ವರೆಗೂ ಅಧಿಕ ರೇಂಜ್ (ಮೈಲೇಜ್) ಕೊಡಬಹುದು ಎಂದು ಹೇಳಬಹುದು.

ಹೊಸ ಟಾಟಾ ಅವಿನ್ಯಾ ಎಕ್ಸ್ ಕಾರು, ಒಳಭಾಗದಲ್ಲಿ ಉತ್ತಮವಾಗಿರುವ ವಿನ್ಯಾಸವನ್ನು ಹೊಂದಿರುವ ನಿರೀಕ್ಷೆ ಕೂಡ ಇದೆ. ಜೊತೆಗೆ ವಿವಿಧ ಆಕರ್ಷಕ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿರಲಿದೆ. ಈ ಕಾರು, ಬೃಹತ್ ಗಾತ್ರದ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹೊಂದಿರುವುದು ಬಹುತೇಕ ದೃಢಪಟ್ಟಿದೆ. ಇದು ಮಾತ್ರವಲ್ಲದೆ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಒಳಗೊಂಡಿರಬಹುದು ಎನ್ನಲಾಗಿದೆ.

Tata Avinya Electric Suv Launch Soon Expected Price Range And Features Details

ಈ ಎಸ್‌ಯುವಿ ಗರಿಷ್ಠ ಸುರಕ್ಷತೆಯನ್ನು ಒದಗಿಸುತ್ತದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾಗಳನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ.

ನೂತನ ಟಾಟಾ ಅವಿನ್ಯಾ ಎಕ್ಸ್ (Tata Avinya X) ಎಲೆಕ್ಟ್ರಿಕ್ ಕಾರು, ಸ್ವಲ್ಪ ಹೆಚ್ಚಿನ ಬೆಲೆಯನ್ನು ಒಳಗೊಂಡಿರಬಹುದು ಎನ್ನಲಾಗಿದೆ. ಇದು ರೂ.30 ಲಕ್ಷವರೆಗೆ (ಎಕ್ಸ್-ಶೋರೂಂ) ದರವನ್ನು ಹೊಂದಿರಬಹುದು ಎಂದು ಮಾರುಕಟ್ಟೆ ತಜ್ಞರು ಅಂದಾಜಿಸಿದ್ದಾರೆ. ಮುಂಬರುವ ಕೆಲವೇ ತಿಂಗಳಲ್ಲಿ ಈ ನೂತನ ಕಾರು ಬಿಡುಗಡೆಯಾಗುವ ಸಾಧ್ಯತೆಯಿದೆ.

Tata Avinya Electric Suv Launch Soon Expected Price Range And Features Details

ಇನ್ನು ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ 'ಟಾಟಾ ಅವಿನ್ಯಾ ಎಕ್ಸ್' ಎಲೆಕ್ಟ್ರಿಕ್ ಎಸ್‌ಯುವಿ, ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದು ಮಾರಾಟಕ್ಕೆ ಬರುವುದು ಬಹುತೇಕ ನಿಶ್ಚಿತವಾಗಿದೆ. ಈ ಕಾರು, ಹಲವರ ಆಯ್ಕೆಯ ಕುಟುಂಬದ ವಾಹನವಾಗಿವುದರಲ್ಲಿ ಎರಡು ಮಾತಿಲ್ಲ. ನೂತನ ಅವಿನ್ಯಾ ಎಸ್‌ಯುವಿ ಬಿಡುಗಡೆಯಾದ ಮೇಲೆ ದೇಶೀಯ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಲಿದೆ ಎನ್ನಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, January 25, 2025, 10:00 [IST]
English summary
Tata avinya electric suv launch soon expected price range and features details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+