TATA: ಶೋರೂಂ ಮುಂದೆ ಸಾಲು ಕಟ್ಟಿದ ಗ್ರಾಹಕರು.. ಟಾಟಾ ಕಾರುಗಳಿಗೆ ಫುಲ್ ಡಿಮ್ಯಾಂಡ್, ಈ ಅಗ್ಗದ SUV ಆಯ್ತು ಹೀರೋ!
ಟಾಟಾ ಮೋಟಾರ್ಸ್ ಪ್ಯಾಸೆಂಜರ್ ವೆಹಿಕಲ್ಸ್ ಲಿಮಿಟೆಡ್ (Tata Motors Passenger Vehicles Ltd), ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಈ ಅಕ್ಟೋಬರ್ ತಿಂಗಳು 61,134 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 48,423 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 27% ಪ್ರಗತಿಯಾಗಿದೆ.
ಅಕ್ಟೋಬರ್‌ನಲ್ಲಿ ಟಾಟಾ ಕಂಪನಿಯು ಈ ಪರಿಪ್ರಮಾಣದಲ್ಲಿ ಬೆಳವಣಿಗೆ ಸಾಧಿಸಲು ಎಸ್‌ಯುವಿಗಳು (ಸ್ಪೋರ್ಟ್ ಯುಟಿಲಿಟಿ ವೆಹಿಕಲ್ಸ್) ಬಹುಮುಖ್ಯ ಕಾರಣವಾಗಿವೆ. ಸರಿ ಸುಮಾರು 47,000 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಒಟ್ಟಾರೆ ಮಾರಾಟದಲ್ಲಿ ಶೇಕಡ 77% ಪಾಲನ್ನು ಹೊಂದಿವೆ. ಇವಿ (ಎಲೆಕ್ಟ್ರಿಕ್ ವೆಹಿಕಲ್) ಮಾರಾಟದಲ್ಲೂ ಸಾರ್ವಕಾಲಿಕ ದಾಖಲೆ ಸೃಷ್ಟಿಯಾಗಿದೆ. ಬರೋಬ್ಬರಿ 9,286 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಈ ಮೂಲಕ ಮಾರಾಟ ಸಂಖ್ಯೆಯು ಹಿಂದಿನ ವರ್ಷಕ್ಕೆ ಹೋಲಿಕೆ ಮಾಡಿದರೆ, ಶೇಕಡ 73% ಬೆಳವಣಿಗೆಯಾಗಿದೆ.

ವಿಶೇಷವಾಗಿ ಟಾಟಾ ನೆಕ್ಸಾನ್ (TATA Nexon) ಗೇಮ್ ಚೇಂಜರ್ ಕಾರಾಗಿಯೂ ಹೊರಹೊಮ್ಮಿದ್ದು, ಭಾರೀ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 50% ಹೆಚ್ಚಳಗೊಂಡಿವೆ. ಹ್ಯಾರಿಯರ್ ಮತ್ತು ಸಫಾರಿ ಕಾರುಗಳಿಗೂ ವ್ಯಾಪಕವಾದ ಬೇಡಿಕೆಯಿದ್ದು, 7,000 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.
ಟಾಟಾ ನೆಕ್ಸಾನ್ ವಿಶೇಷತೆಗಳೇನು:
ಇದು ಕನಿಷ್ಠ ರೂ.7.32 ಲಕ್ಷ ಹಾಗೂ ಗರಿಷ್ಠ ರೂ.14.05 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಮಾರ್ಟ್, ಪ್ಯೂರ್, ಪ್ಯೂರ್ ಪ್ಲಸ್, ಕ್ರಿಯೇಟಿವ್, ಕ್ರಿಯೇಟಿವ್ ಪ್ಲಸ್, ಕ್ರಿಯೇಟಿವ್ ಎಸ್, ಫಿಯರ್‌ಲೆಸ್, ಫಿಯರ್‌ಲೆಸ್ ಪ್ಲಸ್ ಹಾಗೂ ಫಿಯರ್‌ಲೆಸ್ ಎಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಡೇಟೋನಾ ಗ್ರೇ, ಪ್ರಿಸ್ಟೈನ್ ವೈಟ್, ಕಾರ್ಬನ್ ಬ್ಲ್ಯಾಕ್, ರಾಯಲ್ ಬ್ಲೂ ಹಾಗೂ ಓಷನ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ನೂತನ 'ನೆಕ್ಸಾನ್' 5 ಆಸನಗಳನ್ನು ಹೊಂದಿದೆ. 350 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 17 ರಿಂದ 24 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಟಾಟಾ ನೆಕ್ಸಾನ್ ಇವಿಯೂ ಲಭ್ಯ:
ಈ ಎಲೆಕ್ಟ್ರಿಕ್ ಎಸ್‌ಯುವಿಯು ರೂ.12.49 ಲಕ್ಷದಿಂದ ರೂ.17.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 30 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 275 ರಿಂದ 489 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.
ಹೊಸ ಟಾಟಾ ಸಿಯೆರಾ (Tata Sierra) ಎಸ್‌ಯುವಿ ಬಿಡುಗಡೆಗೂ ದಿನಗಣನೆ:
ಇದು ನವೆಂಬರ್ 25 ರಂದು ಮಾರಾಟಕ್ಕೆ ಬರಲಿದೆ. ಐಸಿಇ (ಪೆಟ್ರೋಲ್/ ಡೀಸೆಲ್) ಹಾಗೂ ಎಲೆಕ್ಟ್ರಿಕ್ ಚಾಲಿತ ಪವರ್‌ಟ್ರೇನ್ ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ರೂ.11 ಲಕ್ಷದಿಂದ ರೂ.ರೂ.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿರಲಿದೆ.
ಹೊಸ 'ಸಿಯೆರಾ' 14.5 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪವರ್ ವಿಂಡೋಗಳು, 10 ಸ್ಪೀಕರ್ ಸೌಂಡ್ ಸಿಸ್ಟಮ್ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡರಲಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿರುವ ಸಾಧ್ಯತೆಯಿದೆ.


Click it and Unblock the Notifications








