Tata: ಎದುರಾಳಿಗಳಿಗೆ ಶುರುವಾಯ್ತು ನಡುಕ.. ಟಾಟಾದಿಂದ ಹೊಸ ಸಿಎನ್‌ಜಿ ಕಾರು ಬಿಡುಗಡೆಗೆ ತಯಾರಿ, ಯಾವುದು?

ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿದೆ. ಈ ವರ್ಷ ದೇಶೀಯ ಮಾರುಕಟ್ಟೆಯಲ್ಲಿ ಹಲವು ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ತಯಾರಿ ಮಾಡಿಕೊಳ್ಳುತ್ತಿದೆ. ಆದರಲ್ಲೂ ಕರ್ವ್ ಕೂಪೆ ಎಸ್‌ಯುವಿಯ 'ಡಾರ್ಕ್ ಎಡಿಷನ್'ನ್ನು ಶೀಘ್ರದಲ್ಲೇ ಮಾರಾಟಕ್ಕೆ ತರಲಿದೆ. ಈ ಕಾರನ್ನು ವಿವಿಧ ಡೀಲರ್‌ಶಿಪ್‌ಗಳಿಗೂ ತಲುಪಿಸುವ ಕಾರ್ಯಕ್ಕೂ ಕಂಪನಿಯೂ ಚಾಲನೆ ನೀಡಿದೆ. ಸದ್ಯ, ಇದೇ 'ಟಾಟಾ ಕರ್ವ್' ಕೂಪೆ ಎಸ್‌ಯುವಿ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿಯೂ ಅತಿ ಶೀಘ್ರದಲ್ಲೇ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ.

ಇತ್ತೀಚೆಗೆ ಟಾಟಾ ಕರ್ವ್ ಸಿಎನ್‌ಜಿ (Tata Curvv CNG) ಎನ್ನಲಾದ ಕಾರೊಂದು ಪರೀಕ್ಷಾರ್ಥ ಸಂಚಾರವನ್ನು ನಡೆಸುವಾಗ ಕಾಣಿಸಿಕೊಂಡಿದೆ. ಅದರ ಸ್ಪೈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಕೂಡ ವೈರಲ್ ಆಗಿವೆ. ಈ ಕಾರನ್ನು ಸಂಪೂರ್ಣವಾಗಿ ಕಪ್ಪು (ಬ್ಲ್ಯಾಕ್) ಬಣ್ಣದ ಕವರ್‌ನಿಂದ ಮುಚ್ಚಲಾಗಿತ್ತು. ಈ ಹಿನ್ನೆಲೆ, ನೂತನ ಎಸ್‌ಯುವಿ ಹೇಗಿದೆ ಎಂಬುದನ್ನು ಪರಿಪೂರ್ಣವಾಗಿ ಗುರುತಿಸಲು ಸಾಧ್ಯವಾಗಲಿಲ್ಲ.

Tata Curvv CNG SUV Spotted Testing In First Time Launch Soon Details

ನೂತನ ಟಾಟಾ ಕರ್ವ್ ಸಿಎನ್‌ಜಿ ಎಸ್‌ಯುವಿಯು ನೆಕ್ಸಾನ್ ಕಾರಿನಂತೆಯೇ 1.2-ಲೀಟರ್ ಸಾಮರ್ಥ್ಯದ ಪೆಟ್ರೋಲ್/ಸಿಎನ್‌ಜಿ ಎಂಜಿನ್ ಹೊಂದಿರುವ ನಿರೀಕ್ಷೆಯಿದೆ. 99 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 170 ಎನ್ಎಂ (ನ್ಯೂಟನ್ ಮೀಟರ್) ಪಿರ್ಕ್ ಟಾರ್ಕ್ ಉತ್ಪಾದಿಸಬಹುದು ಎಂದು ಅಂದಾಜಿಸಲಾಗಿದೆ. ಜೊತೆಗೆ 6-ಸ್ಪೀಡ್ ಮ್ಯೂನುವಲ್ ಗೇರ್‌ಬಾಕ್ಸ್‌ ಆಯ್ಕೆಯಲ್ಲಿಯೂ ದೊರೆಯಬಹುದು. 24 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡಬಹುದು ಎಂದು ಹೇಳಲಾಗಿದೆ.

ಪ್ರಸ್ತುತ ದೇಶೀಯವಾಗಿ ಖರೀದಿಗೆ ದೊರೆಯುವ ಟಾಟಾ ಕರ್ವ್ ವಿಶೇಷತೆಗಳೇನು: ಈ ಕಾರು ಕನಿಷ್ಠ ರೂ.10 ಲಕ್ಷ ಹಾಗೂ ಗರಿಷ್ಠ ರೂ.19.20 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 500 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

Tata Curvv CNG SUV Spotted Testing In First Time Launch Soon Details

ಟಾಟಾ ಕರ್ವ್ ಎಸ್‌ಯುವಿ 1.2 ಲೀ. ಟರ್ಬೊ ಪೆಟ್ರೋಲ್, 1.2 ಲೀ. ಜಿಡಿಐ ಟರ್ಬೊ ಪೆಟ್ರೋಲ್ ಹಾಗೂ 1.5 ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್/ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಪಡೆದಿದ್ದು, 17.67 ರಿಂದ 19.25 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಈ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 4-ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಮತ್ತು ಪನೊರೊಮಿಕ್ ಸನ್‌ರೂಫ್‌ನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

Tata Curvv CNG SUV Spotted Testing In First Time Launch Soon Details

ಟಾಟಾ ಕರ್ವ್ ಇವಿಯು ಲಭ್ಯ: ಇದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ರೂ.17.49 ಲಕ್ಷದಿಂದ ರೂ.21.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 55 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 430 ರಿಂದ 502 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Source: Rushlane

Article Published On: Wednesday, April 9, 2025, 8:30 [IST]
English summary
Tata curvv cng suv spotted testing in first time launch soon details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+