TATA: ಡೀಲರ್‌ಶಿಪ್‌ಗೆ ಬಂದೇ ಬಿಡ್ತು ಟಾಟಾದ ಹೊಸ ಕಾರು, 5-ಸೀಟರ್.. ಶೀಘ್ರ ಬಿಡುಗಡೆ.. ಬೆಲೆ ಎಷ್ಟು?
ಟಾಟಾ ಕರ್ವ್ (Tata Curvv) ಜನಪ್ರಿಯ ಕೂಪೆ ಎಸ್‌ಯುವಿಯಾಗಿದೆ. ಈ ಕಾರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿಯೂ ಯಶಸ್ವಿಯಾಗಿದೆ. ಟಾಟಾ ಮೋಟಾರ್ಸ್ ನೂತನ ಕರ್ವ್ ಎಸ್‌ಯುವಿಯ 'ಡಾರ್ಕ್ ಎಡಿಷನ್'ನ್ನು ಬಿಡುಗಡೆಗೊಳಿಸಲು ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಸದ್ಯ, ಹ್ಯುಂಡೈ ಕ್ರೆಟಾಗೆ ಪ್ರಬಲವಾದ ಸ್ಪರ್ಧೆಯೊಡ್ಡಬಲ್ಲ ಈ ಸ್ಪೆಷಲ್ ಎಡಿಷನ್‌ನ್ನು ಹಲವು ಡೀಲರ್‌ಶಿಪ್‌ಗಳಿಗೂ ತಲುಪಿಸುವ ಕಾರ್ಯಕ್ಕೆ ಕಂಪನಿಯು ಚಾಲನೆ ನೀಡಿದೆ. ಅದಕ್ಕೆ ಸಂಬಂಧಿಸಿದ ವಿಡಿಯೋ/ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲೂ ವೈರಲ್ ಆಗಿವೆ. ಎಲ್ಲವು ಅಂದುಕೊಂಡಂತೆ ನಡೆದರೆ, ಅತಿ ಶೀಘ್ರದಲ್ಲೇ 'ಟಾಟಾ ಕರ್ವ್ ಡಾರ್ಕ್ ಎಡಿಷನ್' ಬಿಡುಗಡೆಯಾಗಲಿದೆ.
ಟಾಟಾ ಕರ್ವ್ ಡಾರ್ಕ್ ಎಡಿಷನ್ (Tata Curvv Dark Edition) ಕೂಪೆ ಎಸ್‌ಯುವಿ ವಿಡಿಯೋವನ್ನು ಸೂಕ್ಷ್ಮವಾಗಿ ವೀಕ್ಷಿಸಿದಾಗ, ಇದು ಸಂಪೂರ್ಣವಾಗಿ ಕಪ್ಪು (ಬ್ಲ್ಯಾಕ್) ಬಣ್ಣವನ್ನು ಹೊಂದಿದೆ. ಮುಂಭಾಗದ (ಫ್ರಂಟ್) ಫೆಂಡರ್‌ಗಳಲ್ಲಿ 'ಡಾರ್ಕ್' ಬ್ಯಾಡ್ಜ್‌ಗಳನ್ನು ಕಾಣಬಹುದು. ವಿಶೇಷವಾಗಿ ಒಳಭಾಗವು ಸಹ ಕಪ್ಪು ಬಣ್ಣದ ಥೀಮ್‌ನ್ನೇ ಆಧರಿಸಿದೆ.

ಹೊಸ ಟಾಟಾ ಕರ್ವ್ ಡಾರ್ಕ್ ಎಡಿಷನ್ ಎಸ್‌ಯುವಿ, ಆಸನ ಹಾಗೂ ಬೂಟ್ ಸ್ಪೇಸ್‌ನಲ್ಲಿಯೂ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಪ್ರಯಾಣ ಮಾಡಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 500 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಈ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್, ಟಾಟಾ ಲೋಗೋ ಹೊಂದಿರುವ 4-ಸ್ಪೋಕ್ ಸ್ಟೀರಿಂಗ್ ವೀಲ್, ಎಂಜಿನ್ ಸ್ಟಾರ್ಟ್-ಸ್ಟಾಪ್ ಬಟನ್, ಡ್ರೈವ್ ಮೋಡ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ ರೇರ್ ಎಸಿ ವೆಂಟ್‌ಗಳನ್ನು ಪಡೆದಿದೆ.

ನೂತನ ಹೊಸ ಟಾಟಾ ಕರ್ವ್ ಡಾರ್ಕ್ ಎಡಿಷನ್ ಎಸ್‌ಯುವಿಯ ಪವರ್‌ಟ್ರೇನ್‌ನಲ್ಲಿಯೂ ಯಾವುದೇ ರೀತಿಯ ಮಾರ್ಪಾಡುಗಳಿಗೆ ಕೈ ಹಾಕಲಾಗಿಲ್ಲ. ಇದು ಈಗಿರುವ 'ಕರ್ವ್' ಕಾರಿನಂತೆಯೇ 1.2 ಲೀ. ಟರ್ಬೊ ಪೆಟ್ರೋಲ್, 1.2 ಲೀ. ಜಿಡಿಐ ಟರ್ಬೊ ಪೆಟ್ರೋಲ್ ಹಾಗೂ 1.5 ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿರಲಿದೆ. ಜೊತೆಗೆ 6-ಸ್ಪೀಡ್ ಮ್ಯಾನುವಲ್/ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಹೊಂದಿರಲಿದೆ.
ಪ್ರಸ್ತುತ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ಕರ್ವ್ ಕೂಪೆ ಎಸ್‌ಯುವಿ ರೂ.10 ಲಕ್ಷದಿಂದ ರೂ.19 ಲಕ್ಷ (ಎಕ್ಸ್- ಶೋರೂಂ) ಬೆಲೆಯನ್ನು ಹೊಂದಿದೆ. ಈ ಡಾರ್ಕ್ ಎಡಿಷನ್ ರೂ.15 ರಿಂದ ರೂ.16 ಲಕ್ಷ ದರದಲ್ಲಿ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ. ಆದರೆ, ಈ ಕುರಿತಂತೆ ಕಂಪನಿ ಕಡೆಯಿಂದ ಅಧಿಕೃತ ವಿವರಗಳು ಲಭ್ಯವಾಗಿಲ್ಲ.
ಇನ್ನು, ಹೊಸ ರೀತಿಯ ವಿನ್ಯಾಸವನ್ನು ಹೊಂದಿರುವ 'ಟಾಟಾ ಕರ್ವ್' ಕೂಪೆ ಎಸ್‌ಯುವಿ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಈ ಡಾರ್ಕ್ ಎಡಿಷನ್ ಬಿಡುಗಡೆಯಾದ ಮೇಲೆ ಮಾರಾಟ ಪ್ರಮಾಣ ದ್ವಿಗುಣಗೊಳ್ಳುವ ಸಾಧ್ಯತೆಯಿದೆ. ಇದೇ ಟಾಟಾ ಕರ್ವ್ ಎಲೆಕ್ಟ್ರಿಕ್ ರೂಪದಲ್ಲಿ ಸಹ ಖರೀದಿಗೆ ಲಭ್ಯವಿದ್ದು, ಈ ಕಾರಿನ ಡಾರ್ಕ್ ಎಡಿಷನ್‌ನ್ನು ಕೂಡ ಶೀಘ್ರದಲ್ಲೇ ಪರಿಚಯಿಸಬಹುದು ಎನ್ನಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications