TATA: ಹೊಸ ಟಾಟಾ ಕಾರಿನ ಕುರಿತ ಪ್ರಮುಖಾಂಶಗಳು.. ಯಾರು ಹೇಳಲ್ಲ!

ಟಾಟಾ ಕರ್ವ್ (Tata Curvv) ಪ್ರಮುಖ ಕೂಪೆ ಎಸ್‌ಯುವಿಯಾಗಿದೆ. ಇತ್ತೀಚೆಗೆ ಈ ಕಾರಿನ 'ಡಾರ್ಕ್ ಎಡಿಷನ್'ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿತ್ತು. ಇದು ಇಂಧನ (ಪೆಟ್ರೋಲ್/ಡೀಸೆಲ್) ಮತ್ತು ಎಲೆಕ್ಟ್ರಿಕ್ ಚಾಲಿತ ಪವರ್‌ಟ್ರೇನ್‌ನೊಂದಿಗೆ ಲಭ್ಯವಿದ್ದು, ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಬನ್ನಿ.. ಈ ಕಾರಿನ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಪ್ರಮುಖಾಂಶಗಳನ್ನು ತಿಳಿಯೋಣ.

ಬೆಲೆ (Price): ಟಾಟಾ ಕರ್ವ್ ಡಾರ್ಕ್ ಎಡಿಷನ್ (Tata Curvv Dark Edition) ಎಸ್‌ಯುವಿಯ ಇಂಧನ ಚಾಲಿತ ಮಾಡೆಲ್, ಕನಿಷ್ಠ ರೂ.16.49 ಲಕ್ಷ ಮತ್ತು ಗರಿಷ್ಠ ರೂ.19.52 ಲಕ್ಷ ಬೆಲೆಯನ್ನು ಹೊಂದಿದೆ. ಎಲೆಕ್ಟ್ರಿಕ್ ಚಾಲಿತ ಮಾಡೆಲ್, ಬರೋಬ್ಬರಿ ರೂ.22.24 ಲಕ್ಷ ದರವನ್ನು (ಎಕ್ಸ್-ಶೋರೂಂ) ಒಳಗೊಂಡಿದೆ.

Tata Curvv Dark Edition Suv Top Things Details

ವಿನ್ಯಾಸ (Design): ಹೊಚ್ಚ ಹೊಸ ಟಾಟಾ ಕರ್ವ್ ಡಾರ್ಕ್ ಎಡಿಷನ್ ಕಾರಿನ ವಿನ್ಯಾಸದಲ್ಲಿ ಯಾವುದೇ ಮಾರ್ಪಾಡುಗಳನ್ನು ಮಾಡಲಾಗಿಲ್ಲ. ಇದು ಸಾಮಾನ್ಯ 'ಕರ್ವ್' ಕಾರಿಗೆ ಹೋಲಿಕೆಯಾಗುತ್ತದೆ. ಅದು ಬಿಟ್ಟರೆ, ಡಾರ್ಕ್ ಎಡಿಷನ್ ಹೊರ ಹಾಗೂ ಒಳಭಾಗದಲ್ಲಿ ಸಂಪೂರ್ಣವಾಗಿ ಕಪ್ಪು (ಬ್ಲ್ಯಾಕ್) ಬಣ್ಣದ ಆಯ್ಕೆಯನ್ನೇ ಹೊಂದಿದೆ. ಮುಂಭಾಗದ (ಫ್ರಂಟ್) ಫೆಂಡರ್‌ಗಳಲ್ಲಿ 'ಡಾರ್ಕ್' ಬ್ಯಾಡ್ಜ್‌ಗಳನ್ನು ಪಡೆದಿದೆ.

ಕಾರ್ಯಕ್ಷಮತೆ (Performance): ನೂತನ ಕರ್ವ್ ಡಾರ್ಕ್ ಎಡಿಷನ್ ಎಸ್‌ಯುವಿಯ ಇಂಧನ ಚಾಲಿತ ಮಾಡೆಲ್, 1.2-ಟಿಜಿಡಿಐ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ ಆಯ್ಕೆಯನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್/ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 17.88 ರಿಂದ 19.25 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Tata Curvv Dark Edition Suv Top Things Details

ಈ ಕಾರಿನ ಎಲೆಕ್ಟ್ರಿಕ್ ಚಾಲಿತ ಮಾಡೆಲ್, 55 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಇದರಲ್ಲಿ ಉಪಯೋಗಿಸಿರುವ ಎಲೆಕ್ಟ್ರಿಕ್ ಮೋಟಾರ್, 167 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 215 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಭರ್ತಿ ಚಾರ್ಜ್‌ನಲ್ಲಿ 502 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ.

ಆಸನ ಆಯ್ಕೆ & ವೈಶಿಷ್ಟ್ಯಗಳು (Seating Capacity & Features): ಟಾಟಾ ಕರ್ವ್ ಡಾರ್ಕ್ ಎಡಿಷನ್ ಕಾರಿನಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚರಿಸಬಹುದು. ಇದರೊಟ್ಟಿಗೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್-ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, 9-ಸ್ಪೀಕರ್ ಜೆಬಿಎಲ್-ಸೌಂಡ್ ಸಿಸ್ಟಮ್ ಹಾಗೂ ಸನ್‌ರೂಫ್‌ನ್ನು ಒಳಗೊಂಡಿದೆ.

Tata Curvv Dark Edition Suv Top Things Details

ಸುರಕ್ಷತಾ ವೈಶಿಷ್ಟ್ಯಗಳು (Safety Features): ಈ ಕಾರು ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಇನ್ನು, ನೂತನ ಟಾಟಾ ಕರ್ವ್ ಡಾರ್ಕ್ ಎಡಿಷನ್ ಎಸ್‌ಯುವಿ ಬಿಡುಗಡೆಯಾಗಿರುವುದು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಮುಂಬರುವ ದಿನಗಳಲ್ಲಿ ಈ ಕಾರಿಗೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, April 21, 2025, 8:24 [IST]
English summary
Tata curvv dark edition suv top things details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+