TATA: ಟಾಟಾದ ಕರ್ವ್ ಎಸ್‌ಯುವಿ ಬೇಕೆಂದು ಹಠ ಹಿಡಿದ ಗ್ರಾಹಕರು.. ದಾಖಲೆ ಸಂಖ್ಯೆಯಲ್ಲಿ ಮಾರಾಟ!

ಟಾಟಾ ಕರ್ವ್ (Tata Curvv) ಪ್ರಖ್ಯಾತ ಕೂಪೆ ಎಸ್‌ಯುವಿಯಾಗಿದೆ. ಕಳೆದ ವರ್ಷ ದೇಶೀಯ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಬಂದ ಈ ಕಾರು, ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ರಸ್ತೆ ಮೇಲಿನ ಅರಮನೆಯಂತಿರುವ ನೂತನ ಕರ್ವ್ ಎಸ್‌ಯುವಿಯನ್ನು ಗ್ರಾಹಕರು ಸಹ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಇದು ಈ ಕಾರಿನ ಜನಪ್ರಿಯತೆಯನ್ನು ಎತ್ತಿ ತೋರಿಸುತ್ತಿದೆ. ಸದ್ಯ, ಫೆಬ್ರವರಿ ತಿಂಗಳ ಕರ್ವ್ ಎಸ್‌ಯುವಿ ಮಾರಾಟದ ಅಂಕಿಅಂಶಗಳ ವರದಿ ಪ್ರಕಟಗೊಂಡಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಕಳೆದ ತಿಂಗಳು (ಫೆಬ್ರವರಿ - 2025) ಟಾಟಾ ಮೋಟಾರ್ಸ್, ಸರಿ ಸುಮಾರು 3,483 ಕರ್ವ್ ಎಸ್‌ಯುವಿಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಿದೆ. ಅದರ ಹಿಂದಿನ ತಿಂಗಳು ಜನವರಿಯಲ್ಲಿ ಮಾರಲ್ಪಟ್ಟ 3087 ಕಾರುಗಳಿಗೆ ಹೋಲಿಕೆ ಮಾಡಿದರೆ, ತಿಂಗಳಿನಿಂದ ತಿಂಗಳಿಗೆ (MoM) ಶೇಕಡ 12.83% ಬೆಳವಣಿಗೆಯಾಗಿದೆ.

Tata Curvv Suv February 2025 Sales Details

2024ರಲ್ಲಿಯೂ ಟಾಟಾ ಕರ್ವ್ ಕೂಪೆ ಎಸ್‌ಯುವಿಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಡಿಸೆಂಬರ್‌ನಲ್ಲಿ 4,994 ಯುನಿಟ್, ನವೆಂಬರ್‌ನಲ್ಲಿ 5,101 ಯುನಿಟ್, ಅಕ್ಟೋಬರ್‌ನಲ್ಲಿ 5,351 ಮತ್ತು ಸೆಪ್ಟೆಂಬರ್‌ನಲ್ಲಿ 4,763 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಪ್ರಸ್ತುತ ಟಾಟಾ ಕರ್ವ್ ಎಸ್‌ಯುವಿ ಇಂಧನ (ಪೆಟ್ರೋಲ್/ಡೀಸೆಲ್) ಹಾಗೂ ಎಲೆಕ್ಟ್ರಿಕ್ ರೂಪದಲ್ಲಿ ಖರೀದಿಗೆ ದೊರೆಯುತ್ತದೆ.

ಇಂಧನ ಚಾಲಿತ ಟಾಟಾ ಕರ್ವ್ ಕಾರಿನ ವಿಶೇಷತೆಗಳೇನು: ಈ ಕಾರು ಕನಿಷ್ಠ ರೂ.10 ಲಕ್ಷ ಮತ್ತು ಗರಿಷ್ಠ ರೂ.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದು 1.2 ಲೀ. ಟರ್ಬೊ ಪೆಟ್ರೋಲ್, 1.2 ಲೀ. ಜಿಡಿಐ ಟರ್ಬೊ ಪೆಟ್ರೋಲ್ ಹಾಗೂ 1.5 ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 6-ಸ್ಪೀಡ್ ಮ್ಯಾನುವಲ್/ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 11 ರಿಂದ 15 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Tata Curvv Suv February 2025 Sales Details

ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.3-ಇಂಚು), ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 4-ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಮತ್ತು ಪನೊರೊಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

ಟಾಟಾ ಕರ್ವ್ ಎಲೆಕ್ಟ್ರಿಕ್ ಕಾರು ಹೇಗಿದೆ: ಇದು ರೂ.17.49 ಲಕ್ಷದಿಂದ ರೂ.21.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಈ ಕಾರು 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 430 ರಿಂದ 502 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

ನೂತನ ಕರ್ವ್ ಎಸ್‌ಯುವಿಯಲ್ಲಿ 5 ಜನರು ಸುಲಭವಾಗಿ ಪ್ರಯಾಣ ಮಾಡಬಹುದು. 12.3-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಜೆಬಿಎಲ್ 9-ಸ್ಪೀಕರ್ ಸೌಂಡ್ ಸಿಸ್ಟಮ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, March 12, 2025, 8:30 [IST]
English summary
Tata curvv suv february 2025 sales details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+