19.25 ಕಿ.ಮೀ ಮೈಲೇಜ್.. 5-ಸೀಟರ್, ಸದ್ದಿಲ್ಲದೇ ಈ ಜನಪ್ರಿಯ Tata SUV ಬೆಲೆ ಏರಿಕೆ.. ಎಷ್ಟಾಗಿದೆ?
ಟಾಟಾ ಕರ್ವ್ (Tata Curvv) ಪ್ರಮಖ ಕೂಪೆ ಎಸ್‌ಯುವಿಯಾಗಿದೆ. ಇದು ಹೆಚ್ಚು ಅತ್ಯಾಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಗ್ರಾಹಕರು ಕೂಡ ನಾಮುಂದು - ತಾಮುಂದು ಖರೀದಿ ಮಾಡುತ್ತಿದ್ದಾರೆ. ಅದಕ್ಕೆ ತಕ್ಕಂತೆ ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಸದ್ಯ, ಇದೇ ಕರ್ವ್ ಕಾರಿನ ದರ ಸ್ವಲ್ಪ ಮಟ್ಟಿಗೆ ಏರಿಕೆಯಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ನೂತನ ಟಾಟಾ ಕರ್ವ್ ಕಾರಿನ ಆಯ್ದ ರೂಪಾಂತರಗಳ (ವೇರಿಯೆಂಟ್) ಬೆಲೆಯನ್ನು ರೂ.13,000 ವರೆಗೆ ಏರಿಕೆ ಮಾಡಲಾಗಿದೆ. ಪರಿಷ್ಕೃತ ಹೊಸ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ. ಅದರ ಹೊರತಾಗಿಯೂ ಈ ಕೂಪೆ ಎಸ್‌ಯುವಿಯ ಆರಂಭಿಕ ಶ್ರೇಣಿ ರೂಪಾಂತರ (ಎಂಟ್ರಿ ಲೆವೆಲ್ ವೇರಿಯೆಂಟ್) ರೂ.9.99 ಲಕ್ಷ ಹಾಗೂ ಗರಿಷ್ಠ ಶ್ರೇಣಿ ರೂಪಾಂತರ (ಟಾಪ್ ಎಂಡ್ ವೇರಿಯೆಂಟ್) ರೂ.19,51 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

ಈ ಟಾಟಾ ಕರ್ವ್ ಕೂಪೆ ಎಸ್‌ಯುವಿ ಸ್ಮಾರ್ಟ್, ಪ್ಯೂರ್ ಪ್ಲಸ್, ಕ್ರಿಯೇಟಿವ್, ಕ್ರಿಯೇಟಿವ್ ಪ್ಲಸ್ ಎಸ್ ಮತ್ತು ಅಕಾಂಪ್ಲಿಶ್ಡ್ ಎಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಜೊತೆಗೆ ಹೊರಭಾಗದಲ್ಲಿ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಸ್ಪ್ಲಿಟ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಟೈಲ್‌ಲೈಟ್‌ಗಳು ಮತ್ತು ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ.
ಹೊಸ ಕರ್ವ್ ಕಾರು 4,308 ಎಂಎಂ ಉದ್ದ, 1,810 ಎಂಎಂ ಅಗಲ ಹಾಗೂ 1,630 ಎಂಎಂ ಎತ್ತರವು ಇದೆ. 208 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2,560 ಎಂಎಂ ವೀಲ್ ಬೇಸ್‌ನ್ನು ಒಳಗೊಂಡಿದೆ. ಫ್ಲೇಮ್ ರೆಡ್, ಪ್ರಿಸ್ಟೈನ್ ವೈಟ್, ಡೇಟೋನಾ ಗ್ರೇ, ಒಪೇರಾ ಬ್ಲೂ, ಪ್ಯೂರ್ ಗ್ರೇ ಮತ್ತು ಗೋಲ್ಡ್ ಎಸೆನ್ಸ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಓಡಾಟ ನಡೆಸಬಹುದು. ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 500 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. ಇದರೊಂದಿಗೆ 44 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಹೆಚ್ಚು ಚೆನ್ನಾಗಿದ್ದು, ನೋಡುಗರನ್ನು ಆಕರ್ಷಿಸುತ್ತದೆ. 12.3-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 4-ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಪನೊರೊಮಿಕ್ ಸನ್‌ರೂಫ್, 6-ವೇ ಪವರ್ ಅಡ್ಜಸ್ಟಬಲ್ ಡ್ರೈವರ್ ಸೀಟ್ & ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ನೂತನ ಕರ್ವ್ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ - ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಟಾಟಾ ಕರ್ವ್ ಇವಿ (Tata Curvv EV) ಕೂಡ ಖರೀದಿ ಲಭ್ಯ:
ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಈ ಕಾರು ರೂ.17.49 ಲಕ್ಷದಿಂದ ರೂ.22.24 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 45 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 55 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. 430 ರಿಂದ 502 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.


Click it and Unblock the Notifications








