ಟಾಟಾದ ತಾಕತ್ತು: 42 ಟನ್ ತೂಕದ 3 ಟ್ರಕ್‌ಗಳನ್ನು ಸುಲಭವಾಗಿ ಎಳೆದ ಹೊಸ 'ಬಲಭೀಮ' ಕರ್ವ್ ಕಾರು..10 ಲಕ್ಷ ಬೆಲೆ!

ಟಾಟಾ ಮೋಟಾರ್ಸ್ (Tata Motors), ವಿಶ್ವಾಸಾರ್ಹತೆಗೆ ಹೆಸರುವಾಸಿಯಾಗಿದ್ದು, ಸುರಕ್ಷಿತ ಕಾರು ತಯಾರಿಕೆ ಮೂಲಕವೇ ಮನೆ ಮಾತಾಗಿದೆ. ಕಳೆದ ವರ್ಷ ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಬಹುನಿರೀಕ್ಷಿತ ಕರ್ವ್ (Curvv) ಕೂಪೆ ಎಸ್‌ಯುವಿಯನ್ನು ಅದ್ದೂರಿಯಾಗಿ ಮಾರಾಟಕ್ಕೆ ತಂದಿತ್ತು. ಈ ಕಾರು, ವಿದೇಶಿ ಕಂಪನಿಗಳ ಐಷಾರಾಮಿ ಕಾರುಗಳಿಗೆ ಸವಾಲೆಸೆಯುವ ರೀತಿಯಲ್ಲಿದ್ದು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಸದ್ಯ, ಕಂಪನಿಯು ಇದೇ 'ಕರ್ವ್' ಎಸ್‌ಯುವಿ ಸಾಮರ್ಥ್ಯವನ್ನು ಪರೀಕ್ಷಿಸಿದೆ. ಅದಕ್ಕೆ ಸಂಬಂಧಿಸಿದ ವಿಡಿಯೋವೊಂದನ್ನು ಕೂಡ ತನ್ನ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದೆ.

ಈ ವಿಡಿಯೋದಲ್ಲಿ ತಲಾ 14 ಟನ್ ತೂಕದ (ಒಟ್ಟು 42 ಟನ್‌ಗಳು) ಮೂರು ಟ್ರಕ್‌ಗಳನ್ನು ಒಂದೇ ಬಾರಿಗೆ ನೂತನ ಟಾಟಾ ಕರ್ವ್ ಕೂಪೆ ಎಸ್‌ಯುವಿ (Tata Curvv Coupe Suv) ಲೀಲಾಜಾಲವಾಗಿ ಎಳೆಯುವುದನ್ನು ತೋರಿಸಲಾಗಿದೆ. ಈ ಮೂಲಕ ಈ ಕಾರಿನ ನಿರ್ಮಾಣ ಗುಣಮಟ್ಟದಲ್ಲಿ ಯಾವುದೇ ರಾಜಿಯನ್ನು ಮಾಡಿಕೊಂಡಿಲ್ಲ ಎಂಬುದನ್ನು ಟಾಟಾ ಮೋಟಾರ್ಸ್ ಸಾಬೀತು ಪಡಿಸಿದೆ.

Tata Curvv Suv Pulls 42 000 Kg Weight Three Trucks Price Mileage And Features Details

ಇಲ್ಲಿ ಟ್ರಕ್‌ಗಳನ್ನು ಎಳೆಯಲು 1.2-ಲೀಟರ್ ಹೈಪರಿಯನ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿರುವ ಟಾಟಾ ಕರ್ವ್ ಕಾರನ್ನು ಬಳಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದು 123 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 225 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಟಾಟಾ ಕರ್ವ್ ಕೂಪೆ ಎಸ್‌ಯುವಿ ಮತ್ತೆರೆಡು ಪವರ್‌ಟ್ರೇನ್‌ನೊಂದಿಗೂ ಗ್ರಾಹಕರ ಖರೀದಿಗೆ ಸಿಗುತ್ತದೆ. ಇದರ 1.2-ಲೀಟರ್ ರೆವೊಟ್ರಾನ್ ಟರ್ಬೊ-ಪೆಟ್ರೋಲ್ ಎಂಜಿನ್, 120 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 170 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ.

Tata Curvv Suv Pulls 42 000 Kg Weight Three Trucks Price Mileage And Features Details

ಈ ಕಾರಿನ 1.5-ಲೀಟರ್ ಡಿಸೇಲ್ ಎಂಜಿನ್, 118 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 260 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 11 ರಿಂದ 17 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಟಾಟಾ ಕರ್ವ್ ಎಸ್‌ಯುವಿ ರೂ.10 ಲಕ್ಷದಿಂದ ರೂ.19 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಈ ಕಾರು ಹೊರಭಾಗದಲ್ಲಿಯೂ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಸ್ಮಾರ್ಟ್, ಪ್ಯೂರ್ ಪ್ಲಸ್, ಕ್ರಿಯೇಟಿವ್ ಮತ್ತು ಅಕಂಪ್ಲಿಶೆಡ್ ಎಸ್ ಸೇರಿದಂತೆ ವಿವಿಧ ರೂಪಾಂತರಗಳನ್ನು ಒಳಗೊಂಡಿದೆ. ಇದು 5 ಆಸನಗಳನ್ನು ತನ್ನದಾಗಿಸಿಕೊಂಡಿದೆ.

ಈ ಕಾರು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.3-ಇಂಚು), 4-ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಮತ್ತು ಪನೊರೊಮಿಕ್ ಸನ್‌ರೂಫ್ ಒಳಗೊಂಡನಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಟಾಟಾ ಕರ್ವ್ ಇವಿ (Tata Curvv EV) ಕೂಡ ಖರೀದಿಗೆ ಲಭ್ಯ: ಇದು ರೂ.17.49 ಲಕ್ಷದಿಂದ ರೂ.21.99 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ. 45 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 55 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 502 ರಿಂದ 585 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, January 23, 2025, 10:41 [IST]
English summary
Tata curvv suv pulls 42 000 kg weight three trucks price mileage and features details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+