ಕಲ್ಲುಬಂಡೆಯಂತಹ ಕಾರಿದು.. 9.66 ಲಕ್ಷ, ಆದ್ರೂ ಈ TATA SUV ಕೊಳ್ಳಲು ಗ್ರಾಹಕರಿಗೆ ಮನಸಿಲ್ಲ.. ಯಾಕೆ?
ಟಾಟಾ ಕರ್ವ್ (Tata Curvv) ಪ್ರಮುಖ ಕೂಪೆ ಎಸ್‌ಯುವಿಯಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಆದರೂ ಈ ಕಾರಿನ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಅದು ಈ ಸೆಪ್ಟೆಂಬರ್ ತಿಂಗಳಲ್ಲೂ ಮುಂದುವರಿದಿದೆ. ಒಟ್ಟು 1,566 ಯುನಿಟ್‌ಗಳನ್ನು ಮಾತ್ರ ಗ್ರಾಹಕರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ4,763 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶಗಳನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -67.12 ಇಳಿಮುಖವಾಗಿದೆ.
ನೂತನ 'ಟಾಟಾ ಕರ್ವ್' ಮಾರಾಟ ಸಂಖ್ಯೆ ಕುಂಠಿತವಾಗಲು ನಾನಾ ಕಾರಣಗಳಿವೆ. ಇದರ ಬೆಲೆಗೆ ಬೇರೆ ಕಂಪನಿಯ ವಿವಿಧ ಎಸ್‌ಯುವಿಗಳು ಲಭ್ಯವಿವೆ. ಗ್ರಾಹಕರು ಅವುಗಳನ್ನು ಕೊಂಡುಕೊಳ್ಳುವತ್ತ ಮುಖ ಮಾಡಿದ್ದಾರೆ. ಜೊತೆಗೆ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಆದರೆ, ಈ ಬಗ್ಗೆ ಖರೀದಿದಾರರಿಗೆ ಮಾಹಿತಿಯ ಕೊರತೆಯಿದೆ. ಹೀಗಾಗಿ, 'ಕರ್ವ್' ಮಾರಾಟ ಸಂಖ್ಯೆ ಇಳಿಕೆಯಾಗಿದೆ ಎಂದು ಹೇಳಲಾಗಿದೆ.

ಸ್ಟ್ಯಾಂಡರ್ಡ್ 'ಟಾಟಾ ಕರ್ವ್' ವಿಶೇಷತೆಗಳೇನು:
ಈ ಎಸ್‌ಯುವಿಯು ಕನಿಷ್ಠ ರೂ.9.66 ಲಕ್ಷದಿಂದ ರೂ.18.85 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ವಿನ್ಯಾಸದ ದೃಷ್ಟಿಯಿಂದ ಸ್ಪ್ಲಿಟ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಲೈಟ್ ಬಾರ್‌ಗಳು, ಎಲ್‌ಇಡಿ ಟೈಲ್‌ಲೈಟ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಫ್ಲೇಮ್ ರೆಡ್, ಪ್ರಿಸ್ಟೈನ್ ವೈಟ್, ಡೇಟೋನಾ ಗ್ರೇ, ಒಪೇರಾ ಬ್ಲೂ, ಪ್ಯೂರ್ ಗ್ರೇ ಮತ್ತು ಗೋಲ್ಡ್ ಎಸೆನ್ಸ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ನೂತನ 'ಕರ್ವ್' 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 500 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ. 208 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,560 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಇದು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀ. ಟರ್ಬೊ ಪೆಟ್ರೋಲ್, 1.2-ಲೀ. ಜಿಡಿಐ ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಹೊಂದಿದೆ. 17.75 ರಿಂದ 19 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 204 ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.
ಹೊಸ 'ಕರ್ವ್' ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12 ಇಂಚು), ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಪನೊರೊಮಿಕ್ ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಟಾಟಾ ಕರ್ವ್ ಇವಿಯೂ ಖರೀದಿಗೆ ಲಭ್ಯ:
ಇದೊಂದು ಎಲೆಕ್ಟ್ರಿಕ್ ಚಾಲಿತ ಎಸ್‌ಯುವಿಯಾಗಿದೆ. ರೂ.17.49 ಲಕ್ಷದಿಂದ ರೂ.22.24 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 45 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 55 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. 430 ರಿಂದ 502 ಕಿ.ಮೀವರೆಗೆ (ಮೈಲೇಜ್) ನೀಡುತ್ತದೆ.
ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.3 ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪನೊರೊಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್, 9-ಸ್ಪೀಕರ್ ಜೆಬಿಎಲ್-ಸೌಂಡ್ ಸಿಸ್ಟಮ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ನಂತಹ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.


Click it and Unblock the Notifications








