ಬಲಿಷ್ಠವಾದ ಹೊಸ 'Tata Electric Suv' ಬಿಡುಗಡೆಗೆ ದಿನಾಂಕ ನಿಗದಿ.. ಬೆಲೆ ಎಷ್ಟಿರಲಿದೆ, ವಿಶೇಷತೆಗಳೇನು?

ಟಾಟಾ ಮೋಟಾರ್ಸ್ (Tata Motors) ನಂಬಿಕಾರ್ಹ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ದೇಶೀಯ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿ ಗರಿಷ್ಠ ಮಟ್ಟದ ಪಾಲನ್ನು ಹೊಂದಿದೆ. ಟಿಯಾಗೊ ಇವಿ, ಟಿಗೂರ್ ಇವಿ, ಪಂಚ್ ಇವಿ, ನೆಕ್ಸಾನ್ ಇವಿ ಹಾಗೂ ಕರ್ವ್ ಇವಿಗಳನ್ನು ಮಾರಾಟ ಮಾಡುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಟಾಟಾ ಕಂಪನಿಯು ಹೊಚ್ಚ ಹೊಸ 'ಹ್ಯಾರಿಯರ್' ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲು ಅಂತಿಮವಾಗಿ ದಿನಾಂಕ ನಿಗದಿಪಡಿಸಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ನೂತನ ಟಾಟಾ ಹ್ಯಾರಿಯರ್ ಇವಿ (Tata Harrier EV) ಜೂನ್ 3 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಇದು ದೊಡ್ಡದಾಗಿರುವ ಎಲೆಕ್ಟ್ರಿಕ್ ಎಸ್‌ಯುವಿ ಆಗಿದ್ದು, ಕೊಂಚ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿರುವ ನಿರೀಕ್ಷೆಯಿದೆ. ಜನವರಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲೂ ತಯಾರಿಕೆ ಹಂತದಲ್ಲಿದ್ದ ಇದೇ 'ಹ್ಯಾರಿಯರ್ ಇವಿ'ಯನ್ನು ಅನಾವರಣಗೊಳಿಸಲಾಗಿತ್ತು.

Tata Harrier Electric Suv Launch On June 3 Details

ಹೊಸ ಟಾಟಾ ಹ್ಯಾರಿಯರ್ ಎಲೆಕ್ಟ್ರಿಕ್ ಎಸ್‌ಯುವಿ, ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ಕನಿಷ್ಠ ರೂ.24 ಲಕ್ಷ ಮತ್ತು ಗರಿಷ್ಠ ರೂ.28 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುವ ಸಾಧ್ಯತೆಯಿದೆ. ಈ ಕಾರಿಗೆ ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್, ಎಂಜಿ ಜಡ್ಎಸ್ ಇವಿ ಮತ್ತು ಮಾರುತಿ ಸುಜುಕಿ ಇ-ವಿಟಾರಾ ಎಸ್‌ಯುವಿ ಪ್ರಬಲವಾದ ಎದುರಾಳಿಯಾಗಿದೆ.

ಈ ಹ್ಯಾರಿಯರ್ ಇವಿ ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಭಾರತ್ ಮೊಬಿಲಿಟಿ ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾದ ಇದೇ ಎಲೆಕ್ಟ್ರಿಕ್ ಕಾರಿನ ಮಾಡೆಲ್‍ನಿಂದ ಅದು ದೃಢಪಟ್ಟಿದೆ. ನೂತನ ಹ್ಯಾರಿಯರ್ ಇವಿ ಅತ್ಯುತ್ತಮ ಎಲ್ಇಡಿ ಹೈಡ್‌ಲೈಟ್‌ಗಳು, ಕ್ಲೋಸ್ಡ್-ಆಫ್-ಗ್ರಿಲ್, ಮರುವಿನ್ಯಾಸಗೊಳಿಸಲಾದ ಬಂಪರ್‌ ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿದೆ.

Tata Harrier Electric Suv Launch On June 3 Details

ಈವರೆಗೆ ಟಾಟಾ ಹ್ಯಾರಿಯರ್ ಇವಿ ಪವರ್‌ಟ್ರೇನ್ ಆಯ್ಕೆಯ ಕುರಿತಂತೆ ಕಂಪನಿಯು ಯಾವುದೇ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಈ ಕಾರು 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿರಲಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ನೀಡಬಹದು ಎಂದು ಅಂದಾಜಿಸಲಾಗಿದೆ.

ಹೊಸ ಟಾಟಾ ಹ್ಯಾರಿಯರ್ ಇವಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರಬಹುದು. ಪ್ರಮುಖವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.3-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (10.25-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡುಯಲ್ ಜೋನ್ ಆಟೋಮೆಟಿಕ್ ಎಸಿ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜಿಂಗ್ ಫೋರ್ಟ್ & ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರಬಹುದು ಎನ್ನಲಾಗಿದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು.

Tata Harrier Electric Suv Launch On June 3 Details

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೂ ಗರಿಷ್ಠ ರಕ್ಷಣೆ ಒದಗಿಸುತ್ತದೆ. 7-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‍ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾದಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, May 19, 2025, 10:43 [IST]
English summary
Tata harrier electric suv launch on june 3 details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+