627 ಕಿ.ಮೀ ರೇಂಜ್.. 5-ಸೀಟರ್, ಹೊಸ ಟಾಟಾ ಕಾರಿಗೆ ಫುಲ್ ಡಿಮ್ಯಾಂಡ್.. ಎಷ್ಟಿದೆ ಕಾಯುವಿಕೆ ಅವಧಿ?
ಟಾಟಾ ಹ್ಯಾರಿಯರ್ ಇವಿ (Tata Harrier EV) ಎಲೆಕ್ಟ್ರಿಕ್ ಚಾಲಿತ ಎಸ್‌ಯುವಿಯಾಗಿದ್ದು, ತುಂಬಾ ಚೆನ್ನಾಗಿರುವ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜುಲೈ 2ರಿಂದ ಈ ಕಾರಿಗಾಗಿ ಕಂಪನಿಯು ಬುಕ್ಕಿಂಗ್‌ನ್ನು ತೆಗೆದುಕೊಳ್ಳುವುದಕ್ಕೆ ಶುರು ಮಾಡಿತ್ತು. ಗ್ರಾಹಕರಿಂದಲೂ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಕೇವಲ 24 ಗಂಟೆಯಲ್ಲಿ ಸರಿ ಸುಮಾರು 10,000ಕ್ಕೂ ಅಧಿಕ ಖರೀದಿದಾರರು ಆರ್ಡರ್ ಮಾಡಿದ್ದರು. ಸದ್ಯ, ಇದೇ 'ಹ್ಯಾರಿಯರ್ ಇವಿ'ಯ ಕಾಯುವಿಕೆ ಅವಧಿ (Waiting Period) ಕುರಿತಂತೆ ಒಂದಷ್ಟು ವಿವರಗಳು ಲಭ್ಯವಾಗಿವೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ದೇಶದ ಪ್ರಮುಖ ನಗರಗಳಲ್ಲಿ ಟಾಟಾ ಹ್ಯಾರಿಯರ್ ಇವಿಯು 15 ರಿಂದ 30 ವಾರಗಳ ಕಾಯುವಿಕೆ ಅವಧಿಯನ್ನು ಹೊಂದಿದೆ. ಅದರಲ್ಲೂ ಆರಂಭಿಕ ಶ್ರೇಣಿ ರೂಪಾಂತರಗಳನ್ನು (ಎಂಟ್ರಿ ಲೆವೆಲ್ ವೇರಿಯೆಂಟ್) 15 ವಾರಗಳಲ್ಲಿ ವಿತರಣೆ ಮಾಡಿದರೆ, ಗರಿಷ್ಠ ಶ್ರೇಣಿ ರೂಪಾಂತರಗಳನ್ನು (ಟಾಪ್-ಎಂಡ್ ಲೆವೆಲ್ ವೇರಿಯೆಂಟ್) 30 ವಾರದೊಳಗೆ ತಲುಪಿಸಲಾಗುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಟಾಟಾ ಹ್ಯಾರಿಯರ್ ಇವಿ ವಿಶೇಷತೆಗಳೇನು:
ಈ ಎಲೆಕ್ಟ್ರಿಕ್ ಕಾರನ್ನು 'ಭಾರತ್ ಎನ್‌ಸಿಎಪಿ' ಕೂಡ ಸುರಕ್ಷಿತ ಕಾರೆಂದು ತೀರ್ಮಾನ ಮಾಡಿದ್ದು, 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 32 ಅಂಕಗಳನ್ನು ಪಡೆದಿದ್ದು, ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 45 ಅಂಕಗಳನ್ನು ಗಳಿಸಿದೆ.
ನೂತನ ಹ್ಯಾರಿಯರ್ ಇವಿ ಸುರಕ್ಷತೆಯ ದೃಷ್ಟಿಯಿಂದ ಗರಿಷ್ಠ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ. 7 ಏರ್‌ಬ್ಯಾಗ್‌ಗಳು, ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್, ಆಲ್-ವೀಲ್ ಡಿಸ್ಕ್ ಬ್ರೇಕ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಇದು ಕನಿಷ್ಠ ರೂ.21.49 ಲಕ್ಷ ಹಾಗೂ ಗರಿಷ್ಠ ರೂ.28.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. ಅಡ್ವೆಂಚರ್, ಅಡ್ವೆಂಚರ್ ಎಸ್, ಫಿಯರ್‌ಲೆಸ್ ಪ್ಲಸ್ ಮತ್ತು ಎಂಪವರ್ಡ್ ಎಂಬ ರೂಪಾಂತರಗಳೊಂದಿಗೂ (ವೇರಿಯೆಂಟ್) ದೊರೆಯುತ್ತದೆ. ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ 19-ಇಂಚಿನ ಅಲಾಯ್ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ.
ಹೊಸ ಹ್ಯಾರಿಯರ್ ಎಲೆಕ್ಟ್ರಿಕ್ ಎಸ್‌ಯುವಿ ಸ್ಟೆಲ್ತ್ ಬ್ಲ್ಯಾಕ್, ಎಂಪವರ್ಡ್ ಆಕ್ಸೈಡ್ ಮತ್ತು ಪ್ಯೂರ್ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 4607 ಎಂಎಂ ಉದ್ದ, 2132 ಎಂಎಂ ಅಗಲ ಮತ್ತು 1740 ಎಂಎಂ ಎತ್ತರವು ಇದೆ. ಜೊತೆಗೆ 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್, & 2741 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ಈ ಕಾರು 65 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 538 ರಿಂದ 627 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಇದರಲ್ಲಿರುವ ಬ್ಯಾಟರಿ ಪ್ಯಾಕ್, 7.2 ಕೆಡಬ್ಲ್ಯೂ ಎಸಿ ಚಾರ್ಜರ್ ಬಳೆಕೆಯಲ್ಲಿ 10 ಗಂಟೆಯಲ್ಲಿ 10 ರಿಂದ 100% ಚಾರ್ಜ್ ಆಗಿ ಬಿಡುತ್ತದೆ.
ಇದು 5 ಆಸನಗಳನ್ನು ಒಳಗೊಂಡಿದೆ. ದೂರದ ಊರುಗಳಿಗೆ ತೆರಳುವಾಗ ಹೆಚ್ಚಿನ ಲಗೇಜ್ ಸಾಗಿಲು 502 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 14.5-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10-ಜೆಬಿಎಲ್ ಸ್ಪೀಕರ್ ಸೌಂಡ್ ಸಿಸ್ಟಮ್, ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








