TATA: ಶೀಘ್ರ ಲಕ್ಷುರಿ ಫೀಚರ್‌ನ ಟಾಟಾದ ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆ.. 5-ಸೀಟರ್, ಬೆಲೆ ಎಷ್ಟಿರಲಿದೆ?
ಹೊಚ್ಚ ಹೊಸ ಟಾಟಾ ಹ್ಯಾರಿಯರ್ ಇವಿ (Tata Harrier EV) ಅತಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಈ ಕಾರನ್ನು ಜನವರಿಯಲ್ಲಿ ಅದ್ದೂರಿಯಾಗಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲೂ ಪ್ರದರ್ಶಿಸಲಾಗಿತ್ತು. ಇದು ಹೆಚ್ಚು ಆಕರ್ಷಕವಾದ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದ್ದು, ಸ್ವಲ್ಪ ಹೆಚ್ಚಿನ ದರದಲ್ಲಿ ಮಾರಾಟಕ್ಕೆ ಬರಬಹುದು ಎಂದು ಹೇಳಲಾಗಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ವಿನ್ಯಾಸ (Design): ಟಾಟಾ ಹ್ಯಾರಿಯರ್ ಇವಿ ಹೆಚ್ಚು ಅತ್ಯಾಧುನಿಕ ವಿನ್ಯಾಸವನ್ನು ಹೊಂದಿರಲಿದೆ ಎಂಬುದು ಬಹುತೇಕ ಖಚಿತವಾಗಿದೆ. ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಕೂಡ ಹ್ಯಾರಿಯರ್ ಎಲೆಕ್ಟ್ರಿಕ್ ಕಾರಿನ ಸ್ಪೈ ವಿಡಿಯೋ/ ಫೋಟೋಗಳು ಕಾಣಿಸಿಕೊಂಡಿವೆ. ಇದರಲ್ಲಿ ಹ್ಯಾರಿಯರ್ ಇವಿ ಕ್ಲೋಸ್ಡ್-ಆಫ್-ಗ್ರಿಲ್, ವರ್ಟಿಕಲ್ ಸ್ಲ್ಯಾಟ್‌ಗಳು, ರೀ-ಡಿಸೈನ್ ಬಂಪರ್ ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿರುವುದನ್ನು ನೋಡಬಹುದಾಗಿತ್ತು.

ಕಾರ್ಯಕ್ಷಮತೆ (Performance): ನೂತನ ಟಾಟಾ ಹ್ಯಾರಿಯರ್ ಇವಿ 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್ ಪಡೆದುಕೊಂಡಿರುವ ಸಾಧ್ಯತೆಯಿದೆ. ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ಗೂ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ. ಇದರೊಟ್ಟಿಗೆ ಡುಯಲ್-ಮೋಟಾರ್ ಸೆಟಪ್ ಹಾಗೂ ಆಲ್ ವೀಲ್ ಡ್ರೈವ್ ಟೆಕ್ನಾಲಜಿಯನ್ನು ಒಳಗೊಂಡಿರುವ ಸಾಧ್ಯತೆಯೂ ಹೆಚ್ಚಿದೆ.
ಆಸನ ಆಯ್ಕೆ & ವೈಶಿಷ್ಟ್ಯಗಳು (Seating Capacity & Features): ಟಾಟಾ ಹ್ಯಾರಿಯರ್ ಇವಿ 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಡುಯಲ್-ಜೋನ್ ಆಟೋಮೆಟಿಕ್ ಎಸಿ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿರಬಹುದು ಎಂದು ಹೇಳಲಾಗಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features): ಈ ಎಲೆಕ್ಟ್ರಿಕ್ ಕಾರು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ. 7-ಏರ್‌ಬ್ಯಾಗ್‌ಗಳು, ಇಎಸ್‍ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಡಿಸೆಂಟ್ ಕಂಟ್ರೋಲ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿರಬಹುದು ಎಂದು ಹೇಳಲಾಗಿದೆ.
ಬೆಲೆ (Price): ಹೊಸ ಟಾಟಾ ಹ್ಯಾರಿಯರ್ ಇವಿ ಕೊಂಚ ಅಧಿಕ ಬೆಲೆಯನ್ನು ಪಡೆದುಕೊಂಡಿರಬಹುದು ಎನ್ನಲಾಗಿದೆ. ಇದು ರೂ.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ. ನೂತನ ಹ್ಯಾರಿಯರ್ ಎಲೆಕ್ಟ್ರಿಕ್ ಕಾರಿಗೆ ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಹಾಗೂ ಎಂಜಿ ಜಡ್ಎಸ್ ಇವಿ ಹಾಗೂ ಮುಂಬರುವ ಮಾರುತಿ ಸುಜುಕಿ ಇ-ವಿಟಾರಾಗಳು ಗಟ್ಟಿಯಾದ ಪ್ರತಿಸ್ಪರ್ಧಿಯಾಗಲಿವೆ.
ಇನ್ನು, ಹೊಸ ಟಾಟಾ ಹ್ಯಾರಿಯರ್ ಇವಿ ಈ ಜೂನ್ ತಿಂಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಕಾರು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯೂ ದಟ್ಟವಾಗಿದ್ದು, ಹೆಚ್ಚಿನ ಸಂಖ್ಯೆಯ ಗ್ರಾಹಕರ ಕುಟುಂಬದ ಆಯ್ಕೆಯ ವಾಹನವಾಗುವುದರಲ್ಲಿ ಎರಡು ಮಾತಿಲ್ಲ. ಮುಂಬರುವ ದಿನಗಳಲ್ಲಿ ಹ್ಯಾರಿಯರ್ ಇವಿ ಬಿಡುಗಡೆಯಾದ ಮೇಲೆ ದೇಶೀಯ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications