TATA: 5-ಸೀಟರ್.. ನಾಳೆ ಬಲಿಷ್ಠವಾದ ಟಾಟಾ ಹ್ಯಾರಿಯರ್ ಇವಿ ಬಿಡುಗಡೆ, ಬೆಲೆ ಎಷ್ಟಿರಲಿದೆ.. ಹೇಗಿರಲಿದೆ?
ಭಾರತದ ಕಾರು ಮಾರುಕಟ್ಟೆಯಲ್ಲಿ ನಾಳೆ ಹೊಚ್ಚ ಹೊಸ ಟಾಟಾ ಹ್ಯಾರಿಯರ್ ಇವಿ (Tata Harrier EV) ಅದ್ದೂರಿಯಾಗಿ ಬಿಡುಗಡೆಗೊಳ್ಳಲಿದೆ. ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಹೆಚ್ಚು ಅತ್ಯಾಕರ್ಷಕವಾದ ಐಷಾರಾಮಿ ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದ್ದು, ಕೊಂಚ ದುಬಾರಿ ಬೆಲೆಯಲ್ಲಿ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ. ಬನ್ನಿ.. ನೂತನ 'ಹ್ಯಾರಿಯರ್ ಇವಿ'ಯ ನಿರೀಕ್ಷಿತ ದರ ಎಷ್ಟಿರಲಿದೆ.. ಯಾವೆಲ್ಲ ವಿಶೇಷತೆಗಳಿಗೆ ಸಾಕ್ಷಿಯಾಗಿರಲಿದೆ ಎಂಬುದರ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.
ನೂತನ ಟಾಟಾ ಹ್ಯಾರಿಯರ್ ಎಲೆಕ್ಟ್ರಿಕ್ ಎಸ್‌ಯುವಿ, ಹೊರಭಾಗದಲ್ಲಿ ಉತ್ತಮವಾದ ವಿನ್ಯಾಸವನ್ನು ಹೊಂದಿರಲಿದೆ. ತಯಾರಿಕೆ ಹಂತದಲ್ಲಿದ್ದ ಇದೇ 'ಹ್ಯಾರಿಯರ್ ಇವಿ'ಯನ್ನು ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲೂ ಪ್ರದರ್ಶನ ಮಾಡಲಾಗಿತ್ತು. ಆಗಲೇ ಈ ಕಾರು ಎಲ್ಇಡಿ ಹೈಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದ್ದನ್ನು ನೋಡಬಹುದಾಗಿತ್ತು.

ಹೊಸ ಎಲೆಕ್ಟ್ರಿಕ್ ಕಾರು ಶಕ್ತಿಯುತವಾದ ಎರಡು ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಸಿಂಗಲ್ ಎಲೆಕ್ಟ್ರಿಕ್ ಮೋಟಾರ್ ಸೆಟಪ್ ಹಾಗೂ ಡುಯಲ್ ಎಲೆಕ್ಟ್ರಿಕ್ ಮೋಟಾರ್ ಸೆಟಪ್ ಆಯ್ಕೆಯನ್ನು ಹೊಂದಿರುವ ಸಾಧ್ಯತೆಯಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ.
ಈ ಎಸ್‌ಯುವಿಯು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ ದೊಡ್ಡ ಗ್ರಾತ್ರದ 445 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ನೂತನ ಟಾಟಾ ಹ್ಯಾರಿಯರ್ ಎಲೆಕ್ಟ್ರಿಕ್ ಎಸ್‌ಯುವಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡರುವ ಸಾಧ್ಯತೆಯಿದೆ. ವಿಶೇಷವಾಗಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟಾಟಾ ಲೋಗೋ ಹೊಂದಿರುವ 4 ಸ್ಪೋಕ್ ಸ್ಟೀರಿಂಗ್ ವೀಲ್, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಸನ್‌ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ.
ಹೊಸ ಎಲೆಕ್ಟ್ರಿಕ್ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿರಲಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಮುಂಭಾಗ (ಫ್ರಂಟ್) ಮತ್ತು ರೇರ್ ಪಾರ್ಕಿಂಗ್ ಸೆನ್ಸರ್ಸ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಹಿಲ್ ಹೋಲ್ಡ್ ಅಸಿಸ್ಟ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರಬಹುದು ಎನ್ನಲಾಗಿದೆ.
ಈ ಟಾಟಾ ಹ್ಯಾರಿಯರ್ ಇವಿಯ ಆರಂಭಿಕ ಶ್ರೇಣಿ ಮಾದರಿ (ಎಂಟ್ರಿ ಲೆವೆಲ್ ಮಾಡೆಲ್) ರೂ.25 ಲಕ್ಷ ಮತ್ತು ಗರಿಷ್ಠ ಶ್ರೇಣಿ ಮಾದರಿ (ಟಾಪ್ ಲೆವೆಲ್ ವೇರಿಯೆಂಟ್) ರೂ.30 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಮಾರಾಟಕ್ಕೆ ಬರುವ ಸಾಧ್ಯತೆಯಿದೆ. ನೂತನ ಎಲೆಕ್ಟ್ರಿಕ್ ಎಸ್‌ಯುವಿಗೆ ಮಹೀಂದ್ರಾ ಎಕ್ಸ್ಇವಿ 9ಇ, ಬಿವೈಡಿ ಅಟ್ಟೊ 3 ಹಾಗೂ ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರುಗಳು ಪ್ರಬಲವಾದ ಎದುರಾಳಿಯಾಗಲಿವೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications