TATA: 5-ಸೀಟರ್.. ಕಲ್ಲು ಬಂಡೆಯಂತಿರುವ ಹೊಸ ಟಾಟಾ ಕಾರು ಶೀಘ್ರ ಬಿಡುಗಡೆ.. ಬೆಲೆ ಎಷ್ಟಿರಲಿದೆ?
ಭಾರತದ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿ ವೇಗವಾಗಿ ಬೆಳೆಯುತ್ತಿದೆ. ಈ ವಿಭಾಗದಲ್ಲಿ ಟಾಟಾ ಮೋಟಾರ್ಸ್ (Tata Motors) ಮುಂಚೂಣಿಯಲ್ಲಿದೆ. ಟಿಯಾಗೊ ಇವಿ, ಟಿಗೂರ್ ಇವಿ, ಪಂಚ್ ಇವಿ, ನೆಕ್ಸಾನ್ ಇವಿ ಹಾಗೂ ಕರ್ವ್ ಇವಿಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಸದ್ಯ, ಕಂಪನಿ ಹೊಚ್ಚ ಹೊಸ ಎಲೆಕ್ಟ್ರಿಕ್ ಕಾರೊಂದನ್ನು ಅತಿ ಶೀಘ್ರದಲ್ಲೇ ಅದ್ದೂರಿಯಾಗಿ ಮಾರಾಟಕ್ಕೂ ತರಲಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಎಲ್ಲವೂ ಅಂದುಕೊಂಡಂತೆ ನಡೆದರೆ, ಮುಂದಿನ ತಿಂಗಳೇ ನವೀನ ವಿನ್ಯಾಸ & ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ನೂತನ ಟಾಟಾ ಹ್ಯಾರಿಯರ್ ಇವಿ (Tata Harrier EV) ಬಿಡುಗಡೆಯಾಗಲಿದೆ. ಆದರೆ, ನೂತನ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಪರಿಚಯಿಸುವ ಕುರಿತಂತೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ.

ಇದೇ ಜನವರಿಯಲ್ಲಿ ತೆರೆಕಂಡ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ'ದಲ್ಲಿ ಹೊಸ ಟಾಟಾ ಹ್ಯಾರಿಯರ್ ಇವಿಯನ್ನು ಪ್ರದರ್ಶಿಸಲಾಗಿತ್ತು. ಆಗಲೇ ವಿನ್ಯಾಸಕ್ಕೆ ಸಂಬಂಧಿಸಿದ ಹಲವು ವಿಚಾರಗಳು ಬಹಿರಂಗಗೊಂಡಿದ್ದವು. ಈ ಕಾರು ಆಕರ್ಷಕವಾದ ಹೈಡ್‌ಲೈಟ್‌ಗಳು, ಕ್ಲೋಸ್ಡ್-ಆಫ್-ಗ್ರಿಲ್, ರೀ-ಡಿಸೈನ್ ಬಂಪರ್ ಮತ್ತು ಅಲಾಯ್ ವೀಲ್‌ಗಳನ್ನು ಹೊಂದಿರಲಿದೆ ಎಂಬುದು ಕೂಡ ದೃಢಪಟ್ಟಿದೆ.
ನೂತನ ಎಲೆಕ್ಟ್ರಿಕ್ ಕಾರು ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ. ಇದು 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿರಲಿದ್ದು, ಪೂರ್ತಿ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡಬಹುದು ಎನ್ನಲಾಗಿದೆ. ಜೊತೆಗೆ ಹೆಚ್ಚಿನ ಹಾರ್ಸ್ ಪವರ್‌ನ್ನು ಉತ್ಪಾದಿಸುವ ಸಾಧ್ಯತೆಯೂ ಇದೆ.

ಈ ಟಾಟಾ ಹ್ಯಾರಿಯರ್ ಇವಿ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ. ಬಹುಮುಖ್ಯವಾಗಿ ದೊಡ್ಡ ಗಾತ್ರದ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಎಸಿ, ಮುಂಭಾಗ (ಫ್ರಂಟ್) ವೆಂಟಿಲೇಟೆಡ್ ಸೀಟ್‌ಗಳು, ವೈರ್‌ಲೆಸ್ ಚಾರ್ಜಿಂಗ್ & ಸನ್‌ರೂಫ್‌ನ್ನು ಹೊಂದಿರುವ ನೀರಿಕ್ಷೆಯಿದೆ.
ಹೊಸ ಹ್ಯಾರಿಯರ್ ಎಲೆಕ್ಟ್ರಿಕ್ ಕಾರಿನಲ್ಲೂ ಟಾಟಾ ಕಂಪನಿಯು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆಯಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‍ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿರಬಹುದು ಎನ್ನಲಾಗಿದೆ.

ನೂತನ ಟಾಟಾ ಹ್ಯಾರಿಯರ್ ಇವಿ 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. ಈ ಕಾರು ಕೊಂಚ ಮಟ್ಟಿಗೆ ದುಬಾರಿ ಬೆಲೆಯಲ್ಲಿ ಮಾರಾಟಕ್ಕೆ ಬರುವ ನಿರೀಕ್ಷೆಯಿದ್ದು, ರೂ.24 ಲಕ್ಷದಿಂದ ರೂ.28 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ.
ಒಟ್ಟಾರೆಯಾಗಿ ಹೊಸ ಟಾಟಾ ಹ್ಯಾರಿಯರ್ ಇವಿ ಅತಿ ಶೀಘ್ರದಲ್ಲೇ ಬಿಡುಗಡೆಯಾಗುತ್ತದೆ ಎಂಬ ವಿಚಾರವು ದೇಶೀಯ ಗ್ರಾಹಕರಿಗೆ ಹೆಚ್ಚು ಖುಷಿ ನೀಡಿದೆ. ಇದು ಸಾಕಷ್ಟು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡು ಬಿಡುಗಡೆಯಾಗಲಿದೆ. ಆ ಬಳಿಕ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications