Tata Harrier EV: ಬಹುನಿರೀಕ್ಷಿತ ಟಾಟಾ ಹ್ಯಾರಿಯರ್ ಇವಿ ಬಿಡುಗಡೆ.. ಲಕ್ಸುರಿ ಫೀಚರ್ಸ್, 627 Km ರೇಂಜ್.. ಬೆಲೆ ಎಷ್ಟು?

ವಾಹನ ಪ್ರಿಯರು ಕುತೂಹಲದಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಟಾಟಾ ಹ್ಯಾರಿಯರ್ ಇವಿ (Tata Harrier EV) ಮಂಗಳವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಇದು ಹೆಚ್ಚು ಅತ್ಯಾಧುನಿಕ ವಿನ್ಯಾಸವನ್ನು ಹೊಂದಿದ್ದು, ಐಷಾರಾಮಿ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೊತೆಗೆ ಗರಿಷ್ಠ ದೂರದ ಕ್ರಮಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. ಬನ್ನಿ, ನೂತನ ಎಲೆಕ್ಟ್ರಿಕ್ ಎಸ್‌ಯುವಿಯ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಹೊಚ್ಚ ಹೊಸ ಟಾಟಾ ಹ್ಯಾರಿಯರ್ ಇವಿ, ಕೊಂಚ ಮಟ್ಟಿಗೆ ದುಬಾರಿ ಬೆಲೆಯಲ್ಲಿಯೇ ಮಾರಾಟಕ್ಕೆ ಬಂದಿದೆ. ಇದು ರೂ.21.49 ಲಕ್ಷ ಪರಿಚಯಾತ್ಮಕ ದರವನ್ನು (ಎಕ್ಸ್-ಶೋರೂಂ) ಹೊಂದಿದೆ. ಜುಲೈ 02 ರಿಂದ ಬುಕ್ಕಿಂಗ್‌ ಪ್ರಕ್ರಿಯೆ ಆರಂಭವಾಗಲಿದೆ. ಈ ಕಾರು ಅಡ್ವೆಂಚರ್, ಫಿಯರ್‌ಲೆಸ್ ಮತ್ತು ಎಂಪವರ್ಡ್ ಎಂಬ 3 ವೇರಿಯೆಂಟ್ ಆಯ್ಕೆಯಲ್ಲಿಯೂ ಸಿಗುತ್ತದೆ.

Tata Harrier EV Launched In India Rs 21 49 Lakh Starting Price Details

ನೂತನ ಎಲೆಕ್ಟ್ರಿಕ್ ಎಸ್‌ಯುವಿ ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಇದು ಬಹುತೇಕ ಪೆಟ್ರೋಲ್ ಚಾಲಿತ ಹ್ಯಾರಿಯರ್ ಕಾರಿಗೂ ಹೋಲಿಕೆಯಾಗುತ್ತದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, 19-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಜೊತೆಗೆ ಫ್ರಂಟ್ ಡೋರ್ ಮೇಲೆ 'ಇವಿ' ಬ್ಯಾಡ್ಜ್‌ಗಳನ್ನು ಒಳಗೊಂಡಿದೆ. ಸ್ಟೆಲ್ತ್ ಬ್ಲ್ಯಾಕ್, ಎಂಪವರ್ಡ್ ಆಕ್ಸೈಡ್ ಮತ್ತು ಪ್ಯೂರ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ.

ಈ ಟಾಟಾ ಹ್ಯಾರಿಯರ್ ಇವಿ ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 65 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 627 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ನೀಡುತ್ತದೆ.

Tata Harrier EV Launched In India Rs 21 49 Lakh Starting Price Details

ಹೊಸ ಎಸ್‌ಯುವಿಯ 'ರೇರ್ ಎಲೆಕ್ಟ್ರಿಕ್ ಮೋಟಾರ್' ಹೊಂದಿರುವ ವೇರಿಯೆಂಟ್, 238 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹೊರಹಾಕುತ್ತದೆ. 'ಫ್ರಂಟ್ ಎಲೆಕ್ಟ್ರಿಕ್ ಮೋಟಾರ್' ಒಳಗೊಂಡಿರುವ ವೇರಿಯೆಂಟ್, 158 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಉತ್ಪಾದಿಸುತ್ತದೆ. ಹಾಗೆಯೇ ಇವೆರೆಡು ವೇರಿಯೆಂಟ್‌ಗಳು 504 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತವೆ.

ನೂತನ ಎಲೆಕ್ಟ್ರಿಕ್ ಕಾರು ಅತ್ಯುತ್ತಮವಾದ ಕ್ಯಾಬಿನ್ ವಿನ್ಯಾಸವನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಲು ಸಾಧ್ಯವಾಗುವಂತೆ 5 ಆಸನಗಳನ್ನು ಒಳಗೊಂಡಿದೆ. ಕೇವಲ 6.3 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 14.5-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೊರೊಮಿಕ್ ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Tata Harrier EV Launched In India Rs 21 49 Lakh Starting Price Details

ಈ ಎಸ್‌ಯುವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸುತ್ತದೆ. 7 ಏರ್‌ಬ್ಯಾಗ್‌ಗಳು, ಲೆವೆಲ್ - 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಫ್ರಂಟ್ - ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 360 - ಡಿಗ್ರಿ ಕ್ಯಾಮೆರಾಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, June 3, 2025, 16:55 [IST]
English summary
Tata harrier ev launched in india rs 21 49 lakh starting price details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+