TATA: ಕಲ್ಲು ಬಂಡೆಯಂತಹ ಈ ಟಾಟಾ SUV ಬೇಕೆಂದು ಹಠ ಹಿಡಿದ ಗ್ರಾಹಕರು.. ಯಾವುದು?

ಟಾಟಾ ಹ್ಯಾರಿಯರ್ ಇವಿ (Tata Harrier EV) ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಇದೇ ಜೂನ್‌ ತಿಂಗಳಲ್ಲಿ ಮಾರಾಟಕ್ಕೆ ತರಲಾಯಿತು. ಅಂದಿನಿಂದಲೇ ಈ ಕಾರಿಗೆ ಭಾರೀ ಬೇಡಿಕೆ ಬಂದಿದ್ದು, ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ನೂತನ 'ಹ್ಯಾರಿಯರ್ ಇವಿ' ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸದ್ಯ, ಈ ಕಾರಿನ ಕಾಯುವಿಕೆ ಅವಧಿ (Waiting Period) ಕುರಿತಂತೆ ಒಂದಷ್ಟು ವಿವರಗಳು ಲಭ್ಯವಾಗಿವೆ.

ಈ ನವೆಂಬರ್‌ನಲ್ಲಿ ದೇಶದ ಪ್ರಮುಖ ನಗರಗಳಲ್ಲಿ 'ಟಾಟಾ ಹ್ಯಾರಿಯರ್ ಇವಿ' ತುಸು ಹೆಚ್ಚೇ ಕಾಯುವಿಕೆ ಅವಧಿಯನ್ನು ಹೊಂದಿದೆ. ಇದರ ವಿವಿಧ ರೂಪಾಂತರಗಳನ್ನು ಗ್ರಾಹಕರಿಗೆ ವಿತರಿಸಲು 2 ರಿಂದ 3 ತಿಂಗಳು ಬೇಕಾಗುತ್ತದೆ. ಅಂದರೆ 10 ರಿಂದ 12 ವಾರಗಳು ಹಿಡಿಯುತ್ತದೆ.

Tata Harrier EV November 2025 Waiting Period Revealed Details

ಹೊಸ 'ಟಾಟಾ ಹ್ಯಾರಿಯರ್ ಇವಿ' ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.21.49 ಲಕ್ಷ ಹಾಗೂ ಗರಿಷ್ಠ ರೂ.30.23 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅಡ್ವೆಂಚರ್, ಫಿಯರ್‌ಲೆಸ್ ಮತ್ತು ಎಂಪವರ್ಡ್ ಎಂಬ 3 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು ಹಾಗೂ 19 ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸ್ಟೆಲ್ತ್ ಬ್ಲ್ಯಾಕ್, ಎಂಪವರ್ಡ್ ಆಕ್ಸೈಡ್ ಮತ್ತು ಪ್ಯೂರ್ ಗ್ರೇ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

Tata Harrier EV November 2025 Waiting Period Revealed Details

ನೂತನ 'ಹ್ಯಾರಿಯರ್ ಇವಿ' ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 4,607 ಮಿ.ಮೀ ಉದ್ದ, 2,132 ಮಿ.ಮೀ ಅಗಲ ಮತ್ತು 1,740 ಮಿ.ಮೀ ಎತ್ತರವಿದೆ. ಜೊತೆಗಿದು 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,741 ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 2,235 ಕೆಜಿ ತೂಕವಿದೆ.

ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ತೆರಳುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 502 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

Tata Harrier EV November 2025 Waiting Period Revealed Details

ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 65 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 538 ರಿಂದ 627 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. ವಿಶೇಷವಾಗಿ 'ಹ್ಯಾರಿಯರ್ ಇವಿ'ಯಲ್ಲಿರುವ ಬ್ಯಾಟರಿ ಪ್ಯಾಕ್, 7.2 ಕೆಡಬ್ಲ್ಯೂ ಚಾರ್ಜರ್ ಬಳಕೆಯಲ್ಲಿ ಶೇಕಡ 10 ರಿಂದ 100% ಚಾರ್ಜ್ ಆಗುವುದಕ್ಕೆ 10.7 ತೆಗೆದುಕೊಳ್ಳುತ್ತದೆ.

ಹೊಸ 'ಟಾಟಾ ಹ್ಯಾರಿಯರ್ ಇವಿ' ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ.14.5 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25 ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೊರೊಮಿಕ್ ಸನ್‌ರೂಫ್, 10-ಸ್ಪೀಕರ್ ಸೌಂಡ್ ಸಿಸ್ಟಮ್, ವಿಂಡೋ ಸನ್‌ಬ್ಲೈಂಡ್‌ಗಳು, ಆಂಬಿಯೆಂಟ್ ಲೈಟಿಂಗ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಒಳಗೊಂಡಿದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 6.3 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್, ಹಿಲ್ ಡಿಸೆಂಟ್ ಕಂಟ್ರೋಲ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳು ಹಾಗೂ 360-ಡಿಗ್ರಿ ಕ್ಯಾಮೆರಾಗಳನ್ನು ಒಳಗೊಂಡಿದೆ.

More from DriveSpark

Article Published On: Wednesday, November 12, 2025, 16:16 [IST]
English summary
Tata harrier ev november 2025 waiting period revealed details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+