627 ಕಿ.ಮೀ ರೇಂಜ್.. 5-ಸೀಟರ್.. Tata Harrier EVಗೆ ಮುಗಿಬಿದ್ದ ಗ್ರಾಹಕರು.. 24 ಗಂಟೆಯಲ್ಲಿ 10,000 ಬುಕ್ಕಿಂಗ್!
ಇತ್ತೀಚೆಗೆ ನೂತನ ಟಾಟಾ ಹ್ಯಾರಿಯರ್ ಇವಿಯನ್ನು ಬಿಡುಗಡೆಗೊಳಿಸಲಾಗಿತ್ತು. ಈ ಕಾರು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜುಲೈ 2ರಿಂದ ಹ್ಯಾರಿಯರ್ ಇವಿಗಾಗಿ ಕಂಪನಿಯು ಬುಕ್ಕಿಂಗ್‌ನ್ನು ಶುರು ಮಾಡಿತ್ತು. ಗ್ರಾಹಕರಿಂದಲೂ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಂದೇ ದಿನದಲ್ಲಿ ದಾಖಲೆ ಸಂಖ್ಯೆಯಲ್ಲಿ ಆರ್ಡರ್ ಮಾಡಿದ್ದಾರೆ. ಇದು ಎಲೆಕ್ಟ್ರಿಕ್ ಎಸ್‌ಯುವಿಗಳಿರುವ ಬೇಡಿಕೆಯನ್ನು ಎತ್ತಿ ತೋರಿಸುತ್ತದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಟಾಟಾ ಹ್ಯಾರಿಯರ್ ಇವಿ (Tata Harrier EV) ಪ್ರೀಮಿಯಂ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಈ ಕಾರಿಗಾಗಿ ಕೇವಲ 24 ಗಂಟೆಯಲ್ಲಿ ಬರೋಬ್ಬರಿ 10,000ಕ್ಕೂ ಅಧಿಕ ಬುಕ್ಕಿಂಗ್‌ಗಳಾಗಿವೆ. ಸದ್ಯ, ಕಂಪನಿಯು ಹ್ಯಾರಿಯರ್ ಇವಿಯ ಉತ್ಪಾದನೆಯನ್ನು ಪ್ರಾರಂಭ ಮಾಡಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಅತಿ ಶೀಘ್ರದಲ್ಲೇ ವಿತರಣೆಯನ್ನು ಪ್ರಾರಂಭ ಮಾಡಲಾಗುತ್ತದೆ.

ಟಾಟಾ ಹ್ಯಾರಿಯರ್ ಇವಿ ವಿಶೇಷತೆಗಳೇನು:
ಈ ಕಾರು ಸ್ವಲ್ಪ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿದೆ. ರೂ.21.49 ಲಕ್ಷದಿಂದ ರೂ.28.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅಡ್ವೆಂಚರ್, ಅಡ್ವೆಂಚರ್ ಎಸ್, ಫಿಯರ್‌ಲೆಸ್ ಪ್ಲಸ್ & ಎಂಪವರ್ಡ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕ್ಕೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ.
ನೂತನ ಹ್ಯಾರಿಯರ್ ಇವಿ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ಇದು ನೋಡುಗರನ್ನು ಸೆಳೆಯುತ್ತದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು 19 ಇಂಚಿರುವ ಅಲಾಯ್ ವೀಲ್‌ಗಳನ್ನು ಹೊಂದಿದೆ. ಸ್ಟೆಲ್ತ್ ಬ್ಲ್ಯಾಕ್, ಎಂಪವರ್ಡ್ ಆಕ್ಸೈಡ್ & ಪ್ಯೂರ್ ಗ್ರೇ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 502 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. ಹಾಗೆಯೇ ಈ ಕಾರು 4607 ಎಂಎಂ ಉದ್ದ, 2132 ಎಂಎಂ ಅಗಲ & 1740 ಎಂಎಂ ಎತ್ತರವು ಇದೆ.
ಹೊಸ ಹ್ಯಾರಿಯರ್ ಇವಿ 65 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) & 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 538 ರಿಂದ 627 ಕಿಲೋಮೀಟರ್ ಓಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 6.3 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಈ ಕಾರಿನಲ್ಲಿರುವ ಬ್ಯಾಟರಿ ಪ್ಯಾಕ್, 7.2 ಕೆಡಬ್ಲ್ಯೂ ಎಸಿ ಚಾರ್ಜರ್ ಉಪಯೋಗ ಮಾಡಿದಾಗ ಕೇವಲ 10 ಗಂಟೆಯಲ್ಲಿ 10 ರಿಂದ 100% ಚಾರ್ಜ್ ಆಗುತ್ತದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಸಾಕಷ್ಟು ಉತ್ತಮವಾಗಿದ್ದು, ಪ್ರತಿಯೊಬ್ಬರ ಕಣ್ಣು ಕುಕ್ಕುವಂತಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (14.5-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (10.25-ಇಂಚು), 10 - ಜೆಬಿಎಲ್ ಸ್ಪೀಕರ್ ಸೌಂಡ್ ಸಿಸ್ಟಮ್, ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ವಿಂಡೋ ಸನ್‌ಬ್ಲೈಂಡ್‌ಗಳನ್ನು ಒಳಗೊಂಡಿದೆ.
ನೂತನ ಹ್ಯಾರಿಯರ್ ಇವಿ ಹೆಚ್ಚು ಗಟ್ಟಿ ಮುಟ್ಟಾಗಿದೆ. ಭಾರತ್ ಎನ್‌ಸಿಎಪಿಯು 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಹೋಲ್ಡ್ ಅಸಿಸ್ಟ್, ಹಿಲ್ ಡಿಸೆಂಟ್ ಕಂಟ್ರೋಲ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಆಲ್ ವೀಲ್ ಡಿಸ್ಕ್ ಬ್ರೇಕ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications