627 ಕಿ.ಮೀ ಕ್ರಮಿಸುತ್ತೆ: ಹೊಸ Tata Harrier EV ಆರ್‌ಡಬ್ಲ್ಯೂಡಿ ವೇರಿಯೆಂಟ್‌ಗಳ ಬೆಲೆ ಘೋಷಣೆ, ಯಾವುದಕ್ಕೆ ಎಷ್ಟು?

ಇತ್ತೀಚೆಗೆ ನೂತನ ಟಾಟಾ ಹ್ಯಾರಿಯರ್ ಇವಿ (Tata Harrier EV) ಬಿಡುಗಡೆಗೊಂಡಿತ್ತು. ಇದು ಪರಿಸರ ಸ್ನೇಹಿ ಎಲೆಕ್ಟ್ರಿಕ್ ಎಸ್‌ಯುವಿಯಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ. ಹೆಚ್ಚು ಅತ್ಯಾಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದಿದೆ. ಸದ್ಯ, ಈ ಕಾರಿನ ಆರ್‌ಡಬ್ಲ್ಯೂಡಿ (RWD) ರೂಪಾಂತರಗಳ (ವೇರಿಯೆಂಟ್) ಬೆಲೆಯನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಹೊಚ್ಚ ಹೊಸ ಟಾಟಾ ಹ್ಯಾರಿಯರ್ ಇವಿಯ ಆರ್‌ಡಬ್ಲ್ಯೂಡಿ (ರೇರ್ ವೀಲ್ ಡ್ರೈವ್) ರೂಪಾಂತರಗಳು, ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ಲಭ್ಯವಿವೆ. ಅಡ್ವೆಂಚರ್ 65 ರೂ.21.49 ಲಕ್ಷ, ಅಡ್ವೆಂಚರ್ ಎಸ್ 65 ರೂ.21.99 ಲಕ್ಷ, ಫಿಯರ್‌ಲೆಸ್ ಪ್ಲಸ್ 65 ರೂ.23.99 ಲಕ್ಷ, ಫಿಯರ್‌ಲೆಸ್ ಪ್ಲಸ್ 75 ರೂ.24.99 ಲಕ್ಷ ಹಾಗೂ ಎಂಪವರ್ಡ್ 75 ರೂ.27.49 ಲಕ್ಷ (ಎಕ್ಸ್- ಶೋರೂಂ) ಬೆಲೆವನ್ನು ಹೊಂದಿದೆ.

Tata Harrier EV RWD Variants Price Announced Details

ಹ್ಯಾರಿಯರ್ ಇವಿಯ ಎಡಬ್ಲ್ಯೂಡಿ (ಆಲ್ ವೀಲ್ ಡ್ರೈವ್) ರೂಪಾಂತರಗಳ ಬೆಲೆಯನ್ನು ಇದೇ 27ರಂದು ಪ್ರಕಟಿಸಲಾಗಿತ್ತದೆ. ಜುಲೈ 2 ರಿಂದ ಬುಕ್ಕಿಂಗ್ ಶುರುವಾಗಲಿದ್ದು, ಆಸಕ್ತ ಗ್ರಾಹಕರು ಅಧಿಕೃತ ವೆಬ್‌ಸೈಟ್‌ ಅಥವಾ ಸಮೀಪದ ಡೀಲರ್‌ಶಿಪ್‌ಗೆ ಭೇಟಿ ನೀಡಿ, ಆರ್ಡರ್ ಮಾಡಬಹುದು. ಕೆಲವೇ ದಿನಗಳಲ್ಲಿ ವಿತರಣೆಗಳು ಕೂಡ ಆರಂಭವಾಗಲಿದೆ.

ಈ ಕಾರು ಹೊರಭಾಗದಲ್ಲಿ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, 19-ಇಂಚಿರುವ ಅಲಾಯ್ ವೀಲ್‌ಗಳು ಒಳಗೊಂಡಿದೆ. ಜೊತೆಗೆ ಫ್ರಂಟ್ ಡೋರ್ ಮೇಲೆ 'ಇವಿ' ಬ್ಯಾಡ್ಜ್‌ಗಳನ್ನು ಪಡೆದಿದೆ. ಸ್ಟೆಲ್ತ್ ಬ್ಲ್ಯಾಕ್, ಎಂಪವರ್ಡ್ ಆಕ್ಸೈಡ್ ಹಾಗೂ ಪ್ಯೂರ್ ಗ್ರೇ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Tata Harrier EV RWD Variants Price Announced Details

ನೂತನ ಹ್ಯಾರಿಯರ್ ಎಲೆಕ್ಟ್ರಿಕ್ ಎಸ್‌ಯುವಿ ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 65 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 627 ಕಿಲೋಮೀಟರ್‌ ರೇಂಜ್ (ಮೈಲೇಜ್) ನೀಡುತ್ತದೆ. 6.3 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಪ್ರವಾಸಕ್ಕೆ ಹೋಗಲು ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 502 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. ಜೊತೆಗೆ ಈ ಕಾರು 4607 ಎಂಎಂ ಉದ್ದ, 2132 ಎಂಎಂ ಅಗಲ ಹಾಗೂ 1740 ಎಂಎಂ ಎತ್ತರವು ಇದೆ. 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2741 ವೀಲ್ ಬೇಸ್‌ನ್ನು ಒಳಗೊಂಡಿದೆ.

Tata Harrier EV RWD Variants Price Announced Details

ಹೊಸ ಟಾಟಾ ಹ್ಯಾರಿಯರ್ ಇವಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. 14.5-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿರುವ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಜೆಬಿಎಲ್ 10-ಸ್ಪೀಕರ್ ಸೌಂಡ್ ಸಿಸ್ಟಮ್, ವಿಂಡೋ ಸನ್‌ಬ್ಲೈಂಡ್‌ಗಳು, ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್ ಹಾಗೂ ವೆಂಟಿಲೇಟೆಡ್ - ಫ್ರಂಟ್ ಸೀಟ್‌ಗಳನ್ನು ಪಡೆದಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌ಗಳು, ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ - ಹೋಲ್ಡ್ ಅಸಿಸ್ಟ್, ಹಿಲ್ ಡಿಸೆಂಟ್ ಕಂಟ್ರೋಲ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಆಲ್ ವೀಲ್ ಡಿಸ್ಕ್ ಬ್ರೇಕ್ ಹಾಗೂ 360 - ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Tuesday, June 24, 2025, 8:30 [IST]
English summary
Tata harrier ev rwd variants price announced details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+