17 Km ಮೈಲೇಜ್.. 5-ಸೀಟರ್, ಕಲ್ಲು ಬಂಡೆಯಂತಿರುವ ಟಾಟಾ ಕಾರಿದು.. ಆದರೂ ಗ್ರಾಹಕರು ಖರೀದಿಸುತ್ತಿಲ್ಲ!

ಟಾಟಾ ಹ್ಯಾರಿಯರ್ (Tata Harrier) ಪ್ರಖ್ಯಾತ ಎಸ್‌ಯುವಿಯಾಗಿದ್ದು, ಆಕರ್ಷಕವಾದ ವೈಶಿಷ್ಟ್ಯಗಳು ಹಾಗೂ ಉತ್ತಮವಾದ ಕಾರ್ಯಕ್ಷಮತೆಯಿಂದಲೇ ಗಮನ ಸೆಳೆದಿದೆ. ಆದರೂ ಈ ಕಾರಿನ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗಿದ್ದು, ಅದು ಈ ಜೂನ್ ತಿಂಗಳಲ್ಲೂ ಮುಂದುವರಿದಿದೆ. ಒಟ್ಟು 1,259 ಯುನಿಟ್‌ಗಳನ್ನು ಮಾತ್ರ ಮಾರಾಟಗೊಳಿಸಲಾಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -7% ಇಳಿಕೆಯಾಗಿದೆ. 2024ರ ಇದೇ ಅವಧಿಯಲ್ಲಿ 1,347 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು.

ಈ ವರ್ಷದ ಮೊದಲ ಐದು ತಿಂಗಳಲ್ಲೂ 'ಹ್ಯಾರಿಯರ್' ಕಾರಿನ ಮಾರಾಟ ಪ್ರಮಾಣವು ಅಷ್ಟೊಂದು ಚೆನ್ನಾಗಿರಲಿಲ್ಲ. ಅಲ್ಲಿಯೂ ಹಲವು ಏರಿಳಿತಗಳನ್ನು ಕಾಣಲಾಗಿದೆ. ಅದರ ಹೊರತಾಗಿಯೂ ಮೇನಲ್ಲಿ 894 ಯುನಿಟ್, ಏಪ್ರಿಲ್‌ನಲ್ಲಿ 1,012 ಯುನಿಟ್, ಮಾರ್ಚ್‌ನಲ್ಲಿ 1,265 ಯುನಿಟ್, ಫೆಬ್ರವರಿಯಲ್ಲಿ 1,376 ಯುನಿಟ್ ಮತ್ತು ಜನವರಿ ತಿಂಗಳಲ್ಲಿ 1,488 ಯುನಿಟ್‌ಗಳನ್ನು ಮಾರಲಾಗಿದೆ.

Tata Harrier june 2025 Sales Report

ಟಾಟಾ ಹ್ಯಾರಿಯರ್ ವಿಶೇಷತೆಗಳೇನು:

ಈ ಎಸ್‌ಯುವಿಯು ಬಜೆಟ್ ಬೆಲೆಯಲ್ಲಿಯೂ ಸಿಗಲಿದ್ದು, ಕನಿಷ್ಠ ರೂ.15 ಲಕ್ಷ ಹಾಗೂ ಗರಿಷ್ಠ ರೂ.26.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಮಾರ್ಟ್, ಸ್ಮಾರ್ಟ್ (ಒ), ಪ್ಯೂರ್, ಪ್ಯೂರ್ (ಒ) ಮತ್ತು ಫಿಯರ್‌ಲೆಸ್ ಪ್ಲಸ್ ಒಳಗೊಂಡಂತೆ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

ನೂತನ ಟಾಟಾ ಹ್ಯಾರಿಯರ್ ಹೊರಭಾಗದಲ್ಲೂ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರನ್ನು ಸೆಳೆಯುತ್ತದೆ. ಪೆಬಲ್ ಗ್ರೇ, ಕೋರಲ್ ರೆಡ್, ಲೂನಾರ್ ವೈಟ್, ಒಬೆರಾನ್ ಬ್ಲ್ಯಾಕ್ ಹಾಗೂ ಸೀವೀಡ್ ಗ್ರೀನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 4605 ಎಂಎಂ ಉದ್ದ, 1922 ಎಂಎಂ ಅಗಲ ಹಾಗೂ 1718 ಎಂಎಂ ಎತ್ತರವು ಇದೆ. ಜೊತೆಗೆ 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2741 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Tata Harrier june 2025 Sales Report

ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 445 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 50 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ.

ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 2-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 170 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 350 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 17 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

Tata Harrier june 2025 Sales Report

ಹೊಸ ಹ್ಯಾರಿಯರ್ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಅಚ್ಚುಕಟ್ಟಾಗಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10 ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್, ಡುಯಲ್ ಜೋನ್ ಆಟೋಮೆಟಿಕ್ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಪನೊರೊಮಿಕ್ ಸನ್‌ರೂಫ್‌, ಏರ್ ಪ್ಯೂರಿಫೈಯರ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್‌ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಕ್ರೂಸ್ ಕಂಟ್ರೋಲ್ ಹಾಗೂ 360 - ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

Article Published On: Friday, July 11, 2025, 8:30 [IST]
English summary
Tata harrier june 2025 sales report
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+