TATA: 5-ಸೀಟರ್.. ಗಟ್ಟಿಮುಟ್ಟಾದ ಈ ಟಾಟಾ ಕಾರಿಗೆ ಫುಲ್ ಡಿಮ್ಯಾಂಡ್, ಗ್ರಾಹಕರಿಂದ ನಾ ಮುಂದು - ತಾ ಮುಂದು ಎಂಬಂತೆ ಖರೀದಿ!
ಟಾಟಾ ಹ್ಯಾರಿಯರ್ (Tata Harrier) ಜಗಮೆಚ್ಚಿದ ಎಸ್‌ಯುವಿಯಾಗಿದೆ. ಇದು ಇಂಧನ ಹಾಗೂ ಎಲೆಕ್ಟ್ರಿಕ್ ಚಾಲಿತ ರೂಪದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಈ ಆಗಸ್ಟ್ ತಿಂಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 3,087 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 1,892 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 63.16% ಪ್ರಗತಿಯಾಗಿದೆ.
ಸ್ಟ್ಯಾಂಡರ್ಡ್ (ಇಂಧನ) ಟಾಟಾ ಹ್ಯಾರಿಯರ್ ವಿಶೇಷತೆಗಳೇನು:
ಈ ಎಸ್‌ಯುವಿಯು ಸ್ಪರ್ಧಾತ್ಮಕ ಬೆಲೆಯಲ್ಲಿ ದೊರೆಯಲಿದ್ದು, ರೂ.14 ಲಕ್ಷದಿಂದ ರೂ.23 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಮಾರ್ಟ್, ಸ್ಮಾರ್ಟ್ (ಒ), ಪ್ಯೂರ್, ಪ್ಯೂರ್ (ಒ) ಹಾಗೂ ಫಿಯರ್‌ಲೆಸ್ ಪ್ಲಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇಲಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಉತ್ತಮವಾದ ವಿನ್ಯಾಸವನ್ನು ಹೊಂದಿದೆ. ಕೋರಲ್ ರೆಡ್, ಲೂನಾರ್ ವೈಟ್, ಒಬೆರಾನ್ ಬ್ಲ್ಯಾಕ್ ಮತ್ತು ಸೀವೀಡ್ ಗ್ರೀನ್ ಎಂಬ ಬಣ್ಣಗಳನ್ನು ಪಡೆದಿದೆ.

ಇದು 4,605 ಎಂಎಂ ಉದ್ದ, 1,922 ಎಂಎಂ ಅಗಲ ಮತ್ತು 1,718 ಎಂಎಂ ಎತ್ತರವಿದೆ. 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2741 ಎಂಎಂ ವೀಲ್‌ಬೇಸ್‌ನ್ನು ತನ್ನದಾಗಿಸಿಕೊಂಡಿದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಾಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 445 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ನೂತನ ಹ್ಯಾರಿಯರ್ ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 2-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 17 ಕಿಮೀ ವರೆಗೆ ಮೈಲೇಜ್ ಕೊಡುತ್ತದೆ. 50 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ.

ಈ ಕಾರು 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10 ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಡುಯಲ್ ಜೋನ್ ಆಟೋಮೆಟಿಕ್ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಸನ್‌ರೂಫ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಎಲೆಕ್ಟ್ರಿಕ್ ಟಾಟಾ ಹ್ಯಾರಿಯರ್ ಹೇಗಿದೆ:
ಇದು ರೂ.21.49 ಲಕ್ಷದಿಂದ ರೂ.30.23 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅಡ್ವೆಂಚರ್, ಅಡ್ವೆಂಚರ್ ಎಸ್, ಫಿಯರ್‌ಲೆಸ್ ಪ್ಲಸ್ ಮತ್ತು ಎಂಪವರ್ಡ್ ಸೇರಿದಂತೆ ವಿವಿಧ ರೂಪಾಂತರಗಳೊಂದಿಗೂ ಸಿಗುತ್ತದೆ. ಉತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ 19 ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸ್ಟೆಲ್ತ್ ಬ್ಲ್ಯಾಕ್, ಎಂಪವರ್ಡ್ ಆಕ್ಸೈಡ್ ಹಾಗೂ ಪ್ಯೂರ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಹೊಸ ಹ್ಯಾರಿಯರ್ ಎಲೆಕ್ಟ್ರಿಕ್ ಕಾರು ತುಂಬಾ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 65 ಮತ್ತು 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 538 ರಿಂದ 627 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 502 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಈ ಕಾರು 14.5 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10 ಜೆಬಿಎಲ್ ಸ್ಪೀಕರ್ ಸೌಂಡ್ ಸಿಸ್ಟಮ್, ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌ಗಳು, ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








