5-ಸೀಟರ್.. ಈ ಬಂಡೆಯಂತ TATA ಕಾರಿಗೆ ಫುಲ್ ಡಿಮ್ಯಾಂಡ್.. ಜನ ಮುಗಿಬಿದ್ದು ಖರೀದಿ!
ಟಾಟಾ ಹ್ಯಾರಿಯರ್ (Tata Harrier) ಜನಪ್ರಿಯ ಎಸ್‌ಯುವಿಯಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಮತ್ತು ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಜುಲೈನಲ್ಲೂ 'ಹ್ಯಾರಿಯರ್' ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 2,216 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 11% ಪ್ರಗತಿಯಾಗಿದೆ. 2024ರ ಇದೇ ಅವಧಿಯಲ್ಲಿ 1,991 ಯುನಿಟ್‌ಗಳನ್ನು ಮಾರಲಾಗಿತ್ತು.
ಈ ವರ್ಷದ ಫೆಬ್ರವರಿಯಿಂದ ಜೂನ್ ತಿಂಗಳವರೆಗೂ 'ಟಾಟಾ ಹ್ಯಾರಿಯರ್' ಕಾರು ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಬರೋಬ್ಬರಿ 5,806 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಇದೇ ಅಂಕಿ ಸಂಖ್ಯೆಯನ್ನು ಲೆಕ್ಕ ಹಾಕಿದಾಗ ಪ್ರತಿ ತಿಂಗಳು ಸರಾಸರಿ 1,161 ಯುನಿಟ್‌ಗಳು ಮಾರಾಟವಾಗಿವೆ. ವಿಶೇಷವಾಗಿ ಹ್ಯಾರಿಯರ್ ಎಸ್‌ಯುವಿಯು ಸ್ಟ್ಯಾಂಡರ್ಡ್ & ಎಲೆಕ್ಟ್ರಿಕ್ ರೂಪದಲ್ಲಿ ಗ್ರಾಹಕರ ಖರೀದಿಗೆ ಸಿಗುತ್ತದೆ.

ಸ್ಟ್ಯಾಂಡರ್ಡ್ ಟಾಟಾ ಹ್ಯಾರಿಯರ್ ವಿಶೇಷತೆಗಳೇನು:
ಈ ಎಸ್‌ಯುವಿಯು ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಕನಿಷ್ಠ ರೂ.15 ಲಕ್ಷ ಹಾಗೂ ಗರಿಷ್ಠ ರೂ.26.69 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಮಾರ್ಟ್, ಸ್ಮಾರ್ಟ್ (ಒ), ಪ್ಯೂರ್, ಪ್ಯೂರ್ (ಒ) ಮತ್ತು ಫಿಯರ್‌ಲೆಸ್ ಪ್ಲಸ್ ಒಳಗೊಂಡಂತೆ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ಇದು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಕೋರಲ್ ರೆಡ್, ಪೆಬಲ್ ಗ್ರೇ, ಲೂನಾರ್ ವೈಟ್, ಒಬೆರಾನ್ ಬ್ಲ್ಯಾಕ್ ಹಾಗೂ ಸೀವೀಡ್ ಗ್ರೀನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ ಹ್ಯಾರಿಯರ್ 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 445 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. ಜೊತೆಗೆ 4605 ಎಂಎಂ ಉದ್ದ, 1922 ಎಂಎಂ ಅಗಲ ಮತ್ತು 1718 ಎಂಎಂ ಎತ್ತರ ಕೂಡ ಇದೆ. 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2741 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಹೊಸ ಹ್ಯಾರಿಯರ್ ಎಸ್‌ಯುವಿಯು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 170 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 350 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 16.8 ಕಿ.ಮೀ ವರೆಗೆ ಮೈಲೇಜ್ ನೀಡಬಲ್ಲದು. 50 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಚೆನ್ನಾಗಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಡುಯಲ್-ಜೋನ್ ಆಟೋಮೆಟಿಕ್ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ಪನೊರೊಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಟಾಟಾ ಹ್ಯಾರಿಯರ್ ಇವಿ ಹೇಗಿದೆ:
ಇದು ರೂ.21.49 ಲಕ್ಷದಿಂದ ರೂ.28.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 65 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 538 ರಿಂದ 627 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಪ್ರಯಾಣಿಕರ ಸಂಚಾರಕ್ಕೆ 5 ಆಸನಗಳನ್ನು ಒಳಗೊಂಡಿದೆ.
ನೂತನ ಹ್ಯಾರಿಯರ್ ಇವಿಯು 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 6.3 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. 14.5-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10-ಜೆಬಿಎಲ್ ಸ್ಪೀಕರ್ ಸೌಂಡ್ ಸಿಸ್ಟಮ್ ಮತ್ತು ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳನ್ನು ಹೊಂದಿದೆ.


Click it and Unblock the Notifications








