ಭಾರೀ ಬಲಿಷ್ಠ ಕಾರಿದು.. ಆದರೂ ಈ ಜನಪ್ರಿಯ ಟಾಟಾ ಎಸ್‌ಯುವಿ ಗ್ರಾಹಕರಿಗೆ ಬೇಡವಾಯ್ತಾ, ಕಾರಣವೇನು?
ಟಾಟಾ ಹ್ಯಾರಿಯರ್ (Tata Harrier) ಜನಪ್ರಿಯ ಎಸ್‌ಯುವಿಯಾಗಿ ಮನೆ ಮಾತಾಗಿದೆ. ಈ ಕಾರು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸುರಕ್ಷತೆಯಿಂದಲೂ ಖ್ಯಾತಿ ಗಳಿಸಿರುವುದರಿಂದ ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಆದರೆ, ಕೆಲವು ತಿಂಗಳಿಂದ ಟಾಟಾ ಹ್ಯಾರಿಯರ್ ಎಸ್‌ಯುವಿ ಮಾರಾಟ ಕುಸಿತವಾಗುತ್ತಿದೆ. ಅದಕ್ಕೆ ಈ ಮಾರ್ಚ್ ಕೂಡ ಹೊರತಾಗಿಲ್ಲ. ಬನ್ನಿ.. ಆ ಕುರಿತಂತೆ ಹೆಚ್ಚಿನ ವಿವರಗಳನ್ನು ತಿಳಿಸೋಣ.
ಕಳೆದ ತಿಂಗಳು (ಮಾರ್ಚ್-2025) ಟಾಟಾ ಮೋಟಾರ್ಸ್, ಸರಿ ಸುಮಾರು 1,265 ಯುನಿಟ್ ಹ್ಯಾರಿಯರ್ ಎಸ್‌ಯುವಿಗಳನ್ನು ಯಶಸ್ವಿಯಾಗಿ ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ 2,054 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಅದಕ್ಕೆ ಹೋಲಿಸಿದರೆ ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ -38% ಇಳಿಕೆಯಾಗಿದೆ.

ಇದೇ ವರ್ಷದ ಮೊದಲೆರಡು ತಿಂಗಳು ಕೂಡ ಟಾಟಾ ಹ್ಯಾರಿಯರ್ ಮಾರಾಟ ಸಂಖ್ಯೆಯೂ ನಿರೀಕ್ಷಿತ ಮಟ್ಟದಲ್ಲಿ ಇರಲಿಲ್ಲ. ಫೆಬ್ರವರಿಯಲ್ಲಿ 1,376 ಯುನಿಟ್ ಹಾಗೂ ಜನವರಿಯಲ್ಲಿ 1,488 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಅದೇ ರೀತಿಯಲ್ಲಿ ಹೋದ ವರ್ಷ ಡಿಸೆಂಬರ್‌ನಲ್ಲಿ 1,307 ಯುನಿಟ್, ನವೆಂಬರ್‌ನಲ್ಲಿ 1,374 ಯುನಿಟ್ ಹಾಗೂ ಅಕ್ಟೋಬರ್ ತಿಂಗಳಲ್ಲಿ 1,947 ಯುನಿಟ್ ಹ್ಯಾರಿಯರ್ ಕಾರುಗಳು ಮಾರಾಟಗೊಂಡಿದ್ದವು.
ಟಾಟಾ ಹ್ಯಾರಿಯರ್ ಎಸ್‌ಯುವಿ ಮಾರಾಟ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಬಗ್ಗೆ ಕಂಪನಿಯು ಯಾವುದೇ ರೀತಿಯ ನಿಖರವಾದ ಕಾರಣವನ್ನು ಬಹಿರಂಗಪಡಿಸಿಲ್ಲ. ಆದರೂ ಎದುರಾಳಿ ಕಂಪನಿಗಳ ತೀವ್ರ ಸ್ಪರ್ಧೆ.. ಜೊತೆಗೆ ಈ ಕಾರು ಕೊಂಚ ಹೆಚ್ಚಿನ ಬೆಲೆಯನ್ನು ಹೊಂದಿರುವುದರಿಂದ ಮಾರಾಟ ಪ್ರಮಾಣ ಕುಸಿತವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ನೂತನ ಟಾಟಾ ಹ್ಯಾರಿಯರ್ ವಿಶೇಷತೆಗಳೇನು: ಈ ಎಸ್‌ಯುವಿ ಕನಿಷ್ಠ ರೂ.15 ಲಕ್ಷ ಮತ್ತು ಗರಿಷ್ಠ ರೂ.26.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ದೂರದ ಊರುಗಳಿಗೆ ಸಂಚಾರ ನಡೆಸಬಹುದು. ಜಾಸ್ತಿ ಲಗೇಜ್ ತೆಗೆದುಕೊಂಡು ಹೋಗಲು 445 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಈ ಕಾರು 2-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 14.60 ರಿಂದ 16.8 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಹೊಸ ಹ್ಯಾರಿಯರ್ ಎಸ್‌ಯುವಿ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಸನ್‌ಲಿಟ್ ಯೆಲ್ಲೋ, ಕೋರಲ್ ರೆಡ್, ಪೆಬಲ್ ಗ್ರೇ, ಲೂನಾರ್ ವೈಟ್, ಒಬೆರಾನ್ ಬ್ಲ್ಯಾಕ್ ಹಾಗೂ ಸೀವೀಡ್ ಗ್ರೀನ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.

ಬಲಿಷ್ಠ ಟಾಟಾ ಹ್ಯಾರಿಯರ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ಪನೊರೊಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications