16.8 Km ಮೈಲೇಜ್.. 5-ಸೀಟರ್, ಈ ಬಲಿಷ್ಠ ಕಾರಿನ ಮಾರಾಟ ಸಂಖ್ಯೆ ಮೂರಂಕಿಗೆ ಕುಸಿತ.. ಕಾರಣವೇನು?

ಟಾಟಾ ಹ್ಯಾರಿಯರ್ (Tata Harrier) ಪ್ರಮುಖ ಎಸ್‌ಯುವಿಯಾಗಿದ್ದು, ಹೆಚ್ಚು ಅತ್ಯಾಧುನಿಕವಾಗಿದೆ. ಅದರ ಹೊರತಾಗಿಯೂ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಅದು ಈ ಮೇ ತಿಂಗಳಲ್ಲೂ ಮುಂದುವರಿದಿದೆ. ಒಟ್ಟು 894 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. 2024ರ ಇದೇ ಅವಧಿಯಲ್ಲಿ 1625 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿಸಂಖ್ಯೆಗೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 44.98% ಇಳಿಕೆಯಾಗಿದೆ.

ಈ ವರ್ಷದ ಮೊದಲ 4 ತಿಂಗಳಲ್ಲೂ 'ಟಾಟಾ ಹ್ಯಾರಿಯರ್' ಎಸ್‌ಯುವಿಗಳು ಅಷ್ಟಾಗಿ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿಲ್ಲ. ಏಪ್ರಿಲ್‌ನಲ್ಲಿ 1,012 ಯುನಿಟ್, ಮಾರ್ಚ್‌ನಲ್ಲಿ 1,265 ಯುನಿಟ್, ಫೆಬ್ರವರಿಯಲ್ಲಿ 1,376 ಯುನಿಟ್ ಹಾಗೂ ಜನವರಿಯಲ್ಲಿ 1,488 ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡಲಾಗಿದೆ.

Tata Harrier Suv May Sales 2025 Details

ಟಾಟಾ ಹ್ಯಾರಿಯರ್ ಎಸ್‌ಯುವಿಯ ಮಾರಾಟ ಸಂಖ್ಯೆ ಇಳಿಮುಖವಾಗಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ ಈ ಕಾರು ದುಬಾರಿ ಬೆಲೆಯನ್ನು ಹೊಂದಿದ್ದು, ಇದಕ್ಕಿಂತ ಕಡಿಮೆ ದರಕ್ಕೆ ಸ್ವತಃ ಟಾಟಾ ಹಾಗೂ ಬೇರೆ ಕಂಪನಿ ಎಸ್‌ಯುವಿಗಳು ಖರೀದಿಗೆ ಲಭ್ಯವಿವೆ. ಗ್ರಾಹಕರು ಕೂಡ ಅವುಗಳನ್ನು ತೆಗೆದುಕೊಳ್ಳಲು ಆಸಕ್ತಿ ತೋರಿಸುತ್ತಿದ್ದಾರೆ. ಹೀಗಾಗಿ ಮಾರಾಟ ಸಂಖ್ಯೆ ಕುಸಿತವಾಗುತ್ತಿದೆ ಎನ್ನಲಾಗಿದೆ.

ಟಾಟಾ ಹ್ಯಾರಿಯರ್ ವಿಶೇಷತೆಗಳೇನು:

ಇದೊಂದು ಎಸ್‌ಯುವಿಯಾಗಿದ್ದು, ರೂ.15 ಲಕ್ಷದಿಂದ ರೂ.26.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈ ಕಾರು ಸ್ಮಾರ್ಟ್, ಸ್ಮಾರ್ಟ್ (ಒ), ಪ್ಯೂರ್, ಪ್ಯೂರ್ (ಒ) ಹಾಗೂ ಫಿಯರ್‌ಲೆಸ್ ಪ್ಲಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಹೊರಭಾಗದಲ್ಲೂ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಕೋರಲ್ ರೆಡ್, ಪೆಬಲ್ ಗ್ರೇ, ಲೂನಾರ್ ವೈಟ್, ಒಬೆರಾನ್ ಬ್ಲ್ಯಾಕ್ ಮತ್ತು ಸೀವೀಡ್ ಗ್ರೀನ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

Tata Harrier Suv May Sales 2025 Details

ನೂತನ ಎಸ್‌ಯುವಿಯು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 2-ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 16.8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಜೊತೆಗೆ 50 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.

ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 445 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. ಈ ಕಾರು 4605 ಎಂಎಂ ಉದ್ದ, 1922 ಎಂಎಂ ಅಗಲ ಹಾಗೂ 1718 ಎಂಎಂ ಎತ್ತರವು ಇದೆ.

Tata Harrier Suv May Sales 2025 Details

ಹೊಸ ಎಸ್‌ಯುವಿಯು ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ 12.3-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್, ಡುಯಲ್ ಜೋನ್ ಆಟೋಮೆಟಿಕ್ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ಪನೊರೊಮಿಕ್ ಸನ್‌ರೂಫ್‌ನ್ನು ಪಡೆದಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಕ್ರೂಸ್ ಕಂಟ್ರೋಲ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಟಾಟಾ ಹ್ಯಾರಿಯರ್ ಇವಿಯೂ ಖರೀದಿಗೆ ಲಭ್ಯ:

ಇನೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ರೂ.21.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 65 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 627 ಕಿಲೋಮೀಟರ್‌ ಓಡುತ್ತದೆ. 14.5-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

Article Published On: Thursday, June 19, 2025, 8:30 [IST]
English summary
Tata harrier suv may sales 2025 details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+