TATA: ಗಟ್ಟಿಮುಟ್ಟಾದ ಟಾಟಾ ಕಾರಿದು.. ಫುಲ್ ಡಿಮ್ಯಾಂಡ್, ಮುಗಿಬಿದ್ದ ಖರೀದಿದಾರರು!
ಟಾಟಾ ಹ್ಯಾರಿಯರ್ (Tata Harrier) ಪ್ರಖ್ಯಾತ ಎಸ್‌ಯುವಿಯಾಗಿದೆ. ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸ್ಟ್ಯಾಂಡರ್ಡ್ & ಎಲೆಕ್ಟ್ರಿಕ್ ರೂಪದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಈ ಅಕ್ಟೋಬರ್ ತಿಂಗಳಲ್ಲಿಯೂ 'ಹ್ಯಾರಿಯರ್' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 4,483 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 1947 ಯುನಿಟ್‌ಗಳನ್ನು ಮಾರಲಾಗಿದೆ. ಈ ಅಂಕಿಸಂಖ್ಯೆಯಲ್ಲಿ ವಿಶ್ಲೇಷಿಸಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 130.25% ಬೆಳವಣಿಗೆಯಾಗಿದೆ.
ಸ್ಟ್ಯಾಂಡರ್ಡ್ ಟಾಟಾ ಹ್ಯಾರಿಯರ್ ವಿಶೇಷತೆಗಳೇನು:
ಇದು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.14 ಲಕ್ಷದಿಂದ ರೂ.25.25 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಮಾರ್ಟ್ (Smart), ಪ್ಯೂರ್ (Pure) ಹಾಗೂ ಫಿಯರ್‌ಲೆಸ್ ಪ್ಲಸ್ (Fearless Plus) ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ. ಸನ್‌ಲಿಟ್ ಯೆಲ್ಲೋ, ಸೀವೀಡ್ ಗ್ರೀನ್, ಡೇಟೋನಾ ಗ್ರೇ, ಫಿಯರ್‌ಲೆಸ್ ರೆಡ್, ಪ್ಯೂರ್ ಗ್ರೇ, ಪ್ರಿಸ್ಟೈನ್ ವೈಟ್ ಹಾಗೂ ಒಬೆರಾನ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2741 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.
ನೂತನ 'ಹ್ಯಾರಿಯರ್' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 2-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 16 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 195 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 10 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 445 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ ಪನೊರೊಮಿಕ್ ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ತನ್ನದಾಸಿಕೊಂಡಿದೆ.
ಟಾಟಾ ಹ್ಯಾರಿಯರ್ ಇವಿ ಹೇಗಿದೆ:
ಈ ಎಲೆಕ್ಟ್ರಿಕ್ ಕಾರು ರೂ.21.49 ಲಕ್ಷದಿಂದ ರೂ.30.23 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಉತ್ತಮವಾದ ವಿನ್ಯಾಸವನ್ನು ಹೊಂದಿದೆ. ಸ್ಟೆಲ್ತ್ ಬ್ಲ್ಯಾಕ್, ಎಂಪವರ್ಡ್ ಆಕ್ಸೈಡ್ & ಪ್ಯೂರ್ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,741 ವೀಲ್‌ಬೇಸ್‌ನ್ನು ಪಡೆದಿದೆ.
ನೂತನ 'ಹ್ಯಾರಿಯರ್ ಇವಿ' 65 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 538 ರಿಂದ 627 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 6.3 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 14.5 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25 ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೊರೊಮಿಕ್ ಸನ್‌ರೂಫ್ ಮತ್ತು 10-ಸ್ಪೀಕರ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಸಿಕೊಂಡಿದೆ.


Click it and Unblock the Notifications








