Tata Harrier EV vs Mahindra BE 6: ಕಲ್ಲುಬಂಡೆಯಂತಿರುವ ಕಾರುಗಳಿವು.. 5-ಸ್ಟಾರ್ ರೇಟಿಂಗ್, ಇಲ್ಲಿದೆ ಅಂಕಗಳ ಹೋಲಿಕೆ!

ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಭಾರತ್ ಎನ್‌ಸಿಎಪಿ (Bharat NCAP), ಮಹೀಂದ್ರಾ ಬಿಇ 6 ಹಾಗೂ ಟಾಟಾ ಹ್ಯಾರಿಯರ್ ಇವಿಯನ್ನು ಅತ್ಯಂತ ಸುರಕ್ಷಿತ ಕಾರೆಂದು ತೀರ್ಮಾನಿಸಿದೆ. ಇವೆರೆಡು ಎಲೆಕ್ಟ್ರಿಕ್ ಎಸ್‌ಯುವಿಗಳು 5 ಸ್ಟಾರ್ ಸೇಫ್ಟಿ ರೇಟಿಂಗ್ ಪಡೆಯುವಲ್ಲಿಯೂ ಯಶಸ್ವಿಯಾಗಿವೆ. ನಾವಿಲ್ಲಿ ಈ ಕಾರುಗಳು ಪಡೆದಿರುವ ಸುರಕ್ಷತಾ ಅಂಕಗಳನ್ನು ಹೋಲಿಕೆ ಮಾಡಿದ್ದೇವೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಭಾರತ್ ಎನ್‌ಸಿಎಪಿ ಪರೀಕ್ಷೆಯ ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) ನೂತನ ಟಾಟಾ ಹ್ಯಾರಿಯರ್ ಇವಿ (Tata Harrier EV) 32ಕ್ಕೆ 32 ಅಂಕಗಳನ್ನು ಪಡೆದಿದೆ. ಹಾಗೆಯೇ ಮಹೀಂದ್ರಾ ಬಿಇ 6 (Mahindra BE 6) 32ಕ್ಕೆ 31.97 ಅಂಕಗಳನ್ನು ಗಳಿಸಿದೆ. ಇದನ್ನು ಗಮಸಿದಾಗ, ಹ್ಯಾರಿಯರ್ ಇವಿಯೇ ಸ್ವಲ್ಪ ಮಟ್ಟಿಗೆ ಹೆಚ್ಚಿನ ಅಂಕವನ್ನು ಪಡೆದಿದೆ.

Tata Harrier vs Mahindra BE 6 Electic Suvs Bharat NCAP Test Scores Compared Details

ಅದೇ ರೀತಿಯಲ್ಲಿ ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) ಟಾಟಾ ಹ್ಯಾರಿಯರ್ ಇವಿಯು 49ಕ್ಕೆ 45 ಅಂಕಗಳನ್ನು ಗಳಿಸಿದೆ. ಮಹೀಂದ್ರಾ ಬಿಇ 6 ಕೂಡ 49ಕ್ಕೆ 45 ಅಂಕಗಳನ್ನು ಪಡೆದಿದೆ. ಇದರೊಂದಿಗೆ ಈ ವಿಭಾಗದಲ್ಲಿ ಸಮಾನ ಅಂಕಗಳನ್ನು ಹಂಚಿಕೊಂಡಿವೆ.

ಟಾಟಾ ಹ್ಯಾರಿಯರ್ ಇವಿಯಲ್ಲಿರುವ ಸುರಕ್ಷತಾ ವೈಶಿಷ್ಟ್ಯಗಳೇನು:

ಈ ಹೊಸ ಎಲೆಕ್ಟ್ರಿಕ್ ಎಸ್‌ಯುವಿಯು ಹತ್ತಾರು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಹೋಲ್ಡ್ ಅಸಿಸ್ಟ್, ಹಿಲ್ ಡಿಸೆಂಟ್ ಕಂಟ್ರೋಲ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

Tata Harrier vs Mahindra BE 6 Electic Suvs Bharat NCAP Test Scores Compared Details

ಮಹೀಂದ್ರಾ ಬಿಇ 6ನಲ್ಲಿ ಪ್ರಯಾಣಿಕರ ರಕ್ಷಣೆಯಾಗಿ ಏನಿದೆ:

ಇದು ಹಲವು ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ. 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ - ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಟಾಟಾ ಹ್ಯಾರಿಯರ್ ಇವಿ & ಮಹೀಂದ್ರಾ ಬಿಇ 6 ಕಾರಿನ ಬೆಲೆ ಹಾಗೂ ವಿಶೇಷತೆಗಳೇನು:

ಹೊಸ ಟಾಟಾ ಹ್ಯಾರಿಯರ್ ಎಲೆಕ್ಟ್ರಿಕ್ ಕಾರು ರೂ.21 ಲಕ್ಷದಿಂದ ರೂ.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 65 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 538 ರಿಂದ 627 ಕಿಲೋಮೀಟರ್‌ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ.

ಈ ಕಾರು ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಸ್ಟೆಲ್ತ್ ಬ್ಲ್ಯಾಕ್, ಎಂಪವರ್ಡ್ ಆಕ್ಸೈಡ್ ಹಾಗೂ ಪ್ಯೂರ್ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ. ಗೆ 14.5-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿರುವ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ ಜೆಬಿಎಲ್ 10-ಸ್ಪೀಕರ್ ಸೌಂಡ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಮಹೀಂದ್ರಾ ಬಿಇ 6 ಎಲೆಕ್ಟ್ರಿಕ್ ಎಸ್‌ಯುವಿ ರೂ.18.90 ಲಕ್ಷದಿಂದ ರೂ.26.90 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 59 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 79 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 535 ರಿಂದ 682 ಕಿಲೋಮೀಟರ್‌ ಓಡುತ್ತದೆ.

ನೂತನ ಬಿಇ 6 ಕಾರು 5 ಆಸನಗಳನ್ನು ಹೊಂದಿದ್ದು, ಹಲವು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಇನ್ಫೋಟೈನ್‌ಮೆಂಟ್ ಸಿಸ್ಟಮ್‌ಗಾಗಿ ಡುಯಲ್ - ಸ್ಕ್ರೀನ್ ಸೆಟಪ್, ಟೂ ಸ್ಪೋಕ್ ಸ್ಟೀರಿಂಗ್ ವೀಲ್, ವೆಂಟಿಲೇಟೆಡ್ ಸೀಟ್‌ಗಳು, ವೈರ್‌ಲೆಸ್ ಚಾರ್ಜರ್‌ಗಳು ಮತ್ತು 16 ಸ್ಪೀಕರ್ ಹರ್ಮನ್ ಕಾರ್ಡನ್ ಮ್ಯೂಸಿಕ್ ಸಿಸ್ಟಮ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Article Published On: Monday, June 30, 2025, 16:00 [IST]
English summary
Tata harrier vs mahindra be 6 electic suvs bharat ncap test scores compared details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+