TATA: ಟಾಟಾಗೆ ಗ್ರಾಹಕರಿಂದ ಯಾರು ನಿರೀಕ್ಷಿಸದ ಟ್ವಿಸ್ಟ್.. ಏನು?

ಟಾಟಾ ಮೋಟಾರ್ಸ್ (Tata Motors), ನಂಬಿಕಾರ್ಹ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಪ್ರಯಾಣಿಕ (Passenger) ಹಾಗೂ ವಾಣಿಜ್ಯ ವಾಹನಗಳನ್ನು (Commercial Vehicles) ಮಾರಾಟಗೊಳಿಸುತ್ತಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇತ್ತೀಚೆಗೆ ಟಾಟಾ ಫೆಬ್ರವರಿ ತಿಂಗಳ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದೆ. ಆದರೆ, ಮಾರಾಟ ಪ್ರಮಾಣ ಕೊಂಚ ಮಟ್ಟಿಗೆ ಕುಸಿತವಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಕಳೆದ ತಿಂಗಳು (ಫೆಬ್ರವರಿ - 2025) ಟಾಟಾ ಮೋಟಾರ್ಸ್, ಒಟ್ಟಾರೆ 79,344 ಯುನಿಟ್ (ದೇಶೀಯ ಮಾರಾಟ - ವಿದೇಶಕ್ಕೆ ರಫ್ತು) ವಾಹನಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 86,406 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ ಸ್ವಲ್ಪ ಅಂದರೆ ಶೇಕಡ 8% ಹಿನ್ನಡೆಯನ್ನು ಕಂಡಿದೆ.

Tata Motors February 2025 Sales 8 Percent Decline Details

ಈ ಫೆಬ್ರವರಿಯಲ್ಲಿ ದೇಶೀಯ ಮಾರಾಟವು ಸಹ ಒಂದಷ್ಟು ಕುಸಿತ ಕಂಡಿದೆ. ಟಾಟಾ ಮೋಟಾರ್ಸ್ 77,232 ಯುನಿಟ್‌ ವಾಹನಗಳನ್ನು ಮಾತ್ರ ಮಾರಾಟಗೊಳಿಸಿದೆ. 2024ರ ಫೆಬ್ರವರಿ ತಿಂಗಳಲ್ಲಿ ಮಾರಾಟ ಮಾಡಿದ 84,834 ಯುನಿಟ್‌ಗಳಿಗೆ ಹೋಲಿಸಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 9% ಇಳಿಕೆಯಾಗಿದೆ.

ಎಲೆಕ್ಟ್ರಿಕ್ ವಾಹನಗಳನ್ನು (Electric Vehicles) ಒಳಗೊಂಡ ಪ್ರಯಾಣಿಕ ವಾಹನ ವಿಭಾಗದಲ್ಲಿ ಫೆಬ್ರವರಿ ತಿಂಗಳಲ್ಲಿ 46,811 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದ್ದು, ಶೇಕಡ 9 ಕುಸಿತವಾಗಿದೆ. ಅದೇ ರೀತಿಯಲ್ಲಿ ವಾಣಿಜ್ಯ ವಾಹನ ವಿಭಾಗದಲ್ಲಿ 32,533 ಯುನಿಟ್‌ಗಳನ್ನು ಮಾರಲಾಗಿದ್ದು, ಶೇಕಡ 7% ಹಿನ್ನಡೆಯಾಗಿದೆ.

ಟಾಟಾ ಮೋಟಾರ್ಸ್ ಪ್ರಯಾಣಿಕ ವಾಹನಗಳಾಗಿ ಹತ್ತಾರು ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಅವುಗಳಲ್ಲಿ ಟಿಯಾಗೊ, ಟಿಯಾಗೊ ಇವಿ, ಟಿಗೂರ್, ಟಿಗೂರ್ ಇವಿ, ಆಲ್ಟ್ರೋಜ್, ಪಂಚ್, ಪಂಚ್ ಇವಿ, ನೆಕ್ಸಾನ್‌, ನೆಕ್ಸಾನ್‌ ಇವಿ, ಕರ್ವ್, ಕರ್ವ್ ಇವಿ, ಹ್ಯಾರಿಯರ್ ಹಾಗೂ ಸಫಾರಿ ಕಾರುಗಳು ಪ್ರಮುಖವಾಗಿವೆ.

ಟಾಟಾ ಟಿಯಾಗೊ (Tata Tiago) ಹ್ಯಾಚ್‌ಬ್ಯಾಕ್ ಬಗ್ಗೆ ಹೇಳುವುದಾದರೆ, ಇದು ರೂ.5 ಲಕ್ಷದಿಂದ ರೂ.8.45 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 19.43 ರಿಂದ 28.06 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟಾಟಾ ನೆಕ್ಸಾನ್‌ (Tata Nexon) ಜನಪ್ರಿಯ ಎಸ್‌ಯುವಿಯಾಗಿದೆ. ಈ ಕಾರು ರೂ.8 ರಿಂದ 15.60 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಇದು ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 10.2-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಪನೋರಮಿಕ್ ಸನ್‌ರೂಫ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ವೆಂಟಿಲೇಟೆಡ್ ಸೀಟ್‌ಗಳನ್ನು ಹೊಂದಿದೆ.

ಟಾಟಾ ಕರ್ವ್ (Tata Curvv) ಕೂಪೆ ಎಸ್‌ಯುವಿ ಬಗ್ಗೆ ತಿಳಿಸುವುದಾದರೆ, ಇದು ರೂ.10 ಲಕ್ಷದಿಂದ ರೂ.19 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 1.2 ಲೀಟರ್ ಟರ್ಬೊ ಪೆಟ್ರೋಲ್, 1.2 ಲೀಟರ್ ಜಿಡಿಐ ಟರ್ಬೊ ಪೆಟ್ರೋಲ್ ಹಾಗೂ 1.5 ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಕಡೆಯದಾಗಿ ಟಾಟಾ ಹ್ಯಾರಿಯರ್ ಎಸ್‌ಯುವಿ ಕುರಿತಂತೆ ಮಾತನಾಡುವುದಾದರೆ, ಈ ಕಾರು ರೂ.15 ಲಕ್ಷದಿಂದ ರೂ.26.50 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 16.8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, March 4, 2025, 8:42 [IST]
English summary
Tata motors february 2025 sales 8 percent decline details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+