ಬಡವರು ಕೊಳ್ಳಬಹುದು.. 200 Km ರೇಂಜ್, ಕಡಿಮೆ ಬೆಲೆಗೆ ಈ ವರ್ಷವೇ 'Tata Nano' ಎಲೆಕ್ಟ್ರಿಕ್ ಕಾರು ಬಿಡುಗಡೆ?
ಟಾಟಾ ನ್ಯಾನೋ (Tata Nano) ಜನಪ್ರಿಯ ಕಾರಾಗಿ ಎಲ್ಲಡೆ ಮನೆ ಮಾತಾಗಿತ್ತು. ಆದರೆ, ನಾನಾ ಕಾರಣಗಳಿಗೆ ಈ ಕಾರಿನ ಮಾರಾಟವನ್ನು ಸ್ಥಗಿತಗೊಳಿಸಿ ವರ್ಷಗಳೇ ಉರುಳಿ ಬಿಟ್ಟಿವೆ. ಈಗಲೂ ಟಾಟಾ ನ್ಯಾನೋಗೆ ಸೆಕೆಂಡ್ ಹ್ಯಾಂಡ್ ಕಾರು ಮಾರುಕಟ್ಟೆಯಲ್ಲಿ ಫುಲ್ ಡಿಮ್ಯಾಂಡ್ ಇದ್ದು, ಸ್ಪರ್ಧಾತ್ಮಕ ಬೆಲೆಯಲ್ಲಿಯೇ ಮಾರಾಟವಾಗುತ್ತಿದ್ದು, ಖರೀದಿದಾರರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ಇದೇ ಕಾರು ಎಲೆಕ್ಟ್ರಿಕ್ ಅವತಾರದಲ್ಲೂ ಈ ವರ್ಷವೇ ಮಾರಾಟಕ್ಕೆ ಬರಬಹುದು ಎಂದು ಹೇಳಲಾಗಿದೆ.
ಹೊಚ್ಚ ಹೊಸ ಟಾಟಾ ನ್ಯಾನೋ ಎಲೆಕ್ಟ್ರಿಕ್ ಕಾರು, ಹಲವು ನವೀಕರಣಗಳಿಗೆ ಸಾಕ್ಷಿಯಾಗುವ ನಿರೀಕ್ಷೆಯಿದೆ. ಈ ಕಾರು ಬಹುತೇಕ ಹಳೆಯ ಮಾಡೆಲ್‌ನಂತೆ ಇರಬಹುದು. ಆದರೆ, ನೂತನ ಎಲೆಕ್ಟ್ರಿಕ್ ಕಾರಿನ ಪ್ಲಾಟ್‌ಫಾರ್ಮ್ & ಕ್ಯಾಬಿನ್ ಸಾಕಷ್ಟು ಬದಲಾವಣೆಗಳನ್ನು ಹೊಂದಿರಬಹುದು ಎನ್ನಲಾಗಿದೆ. ಈ ಕಾರು ಪುಟ್ಟದಾಗಿ ಇರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಲು 4 ಆಸನಗಳನ್ನು ಒಳಗೊಂಡಿರುವ ಸಾಧ್ಯತೆಯೂ ಹೆಚ್ಚಿದೆ.

ಈ ಟಾಟಾ ನ್ಯಾನೋ ಎಲೆಕ್ಟ್ರಿಕ್ ಶಕ್ತಿಯುತವಾದ ಬ್ಯಾಟರಿ ಪ್ಯಾಕ್‌ನ್ನು ಹೊಂದಿರಬಹುದು ಎಂದು ತಿಳಿದುಬಂದಿದೆ. ಅದಕ್ಕೆ ತಕ್ಕಂತೆ ಗರಿಷ್ಠ ಅಶ್ವ ಶಕ್ತಿ (ಹಾರ್ಸ್ ಶಕ್ತಿ) ಹಾಗೂ ಹೆಚ್ಚಿನ ಪೀಕ್ ಟಾರ್ಕ್ ಉತ್ಪಾದಿಸಬಹುದು. ಜೊತೆಗೆ ಸಂಪೂರ್ಣ ಚಾರ್ಜ್‌ನಲ್ಲಿ 200 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ.
ನೂತನ ಟಾಟಾ ನ್ಯಾನೋ ಎಲೆಕ್ಟ್ರಿಕ್ ಕಾರು ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಬಹುಮುಖ್ಯವಾಗಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 4-ಇಂಚಿನ ಇನ್ಸ್ಟ್ರುಮೆಂಟ್ ಕ್ಲಸ್ಟರ್, 4-ಸ್ಪೀಕರ್ ಸೌಂಡ್ ಸಿಸ್ಟಮ್ ಹಾಗೂ ರೇರ್-ವ್ಯೂ ಕ್ಯಾಮೆರಾವನ್ನು ಪಡೆದುಕೊಂಡಿರಬಹುದು ಎನ್ನಲಾಗಿದೆ.

ಹೊಸ ಟಾಟಾ ನ್ಯಾನೋ ಇವಿ ಪ್ರಯಾಣಿಕರಿಗೂ ಗರಿಷ್ಠ ರಕ್ಷಣೆಯನ್ನು ಒದಗಿಸುವ ಸಾಧ್ಯತೆಯಿದೆ. ಈ ಕಾರು ಮಲ್ಟಿಪಲ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ಹಿಲ್-ಹೋಲ್ಡ್ ಅಸಿಸ್ಟ್‌ನಂತಹ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.
ಈ ಟಾಟಾ ನ್ಯಾನೋ ಎಲೆಕ್ಟ್ರಿಕ್ ಕಾರು ಅತ್ಯಂತ ಕಡಿಮೆ ಬೆಲೆಯಲ್ಲಿಯೂ ಸಿಗಬಹುದು ಎನ್ನಲಾಗಿದ್ದು, ಮಧ್ಯಮ ವರ್ಗದ ಜನರು ಸಹ ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಇದು ರೂ.10 ಲಕ್ಷದೊಳಗೆ ಅಂದರೆ, ರೂ.6 ರಿಂದ 7 ಲಕ್ಷ ಎಕ್ಸ್-ಶೋರೂಂ ದರದಲ್ಲಿ ಖರೀದಿಗೆ ದೊರೆಯುವ ನಿರೀಕ್ಷೆಯಿದೆ.

ಒಂದೊಮ್ಮೆ ನೂತನ ಟಾಟಾ ನ್ಯಾನೋ ಎಲೆಕ್ಟ್ರಿಕ್ ಕಾರು ಮಾರಾಟಕ್ಕೆ ಬಂದರೆ, ಪ್ರಸ್ತುತ ಖರೀದಿಗೆ ಎಂಜಿ ಕಾಮೆಟ್ ಇವಿ ಹಾಗೂ ಮುಂಬರಲಿರುವ ವಿನ್‌ಫಾಸ್ಟ್ ವಿಎಫ್3 ಇವಿಗಳಿಂದ ಪ್ರಬಲವಾದ ಸ್ಪರ್ಧೆಯನ್ನು ಎದುರಿಸಬೇಕಾಗುತ್ತದೆ. ಆದರೆ, ಹೊಸ ನ್ಯಾನೋ ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಗೊಳಿಸುವ ಬಗ್ಗೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಕೆಲವೇ ದಿನಗಳಲ್ಲಿ ಎಲ್ಲ ಉಹಾಪೋಹಗಳಿಗೂ ತೆರೆ ಬೀಳಬಹುದು ಎನ್ನಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications