Tata Nexon: 5-ಸೀಟರ್.. ಹೊಸ ರೂಪದಲ್ಲಿ ಟಾಟಾ ನೆಕ್ಸಾನ್ ಸಿಎನ್‌ಜಿ ಕಾರು ಬಿಡುಗಡೆ.. ಬೆಲೆ ಎಷ್ಟು, ವಿಶೇಷತೆಗಳೇನು?

ಭಾರತದ ಕಾರು ಮಾರುಕಟ್ಟೆಯಲ್ಲಿ ಟಾಟಾ ನೆಕ್ಸಾನ್ (Tata Nexon) ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವುದರಿಂದ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಇತ್ತೀಚೆಗೆ ನವದೆಹಲಿಯಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ 'ನೆಕ್ಸಾನ್ ಸಿಎನ್‌ಜಿ ರೆಡ್ ಡಾರ್ಕ್ ಎಡಿಷನ್'ನ್ನು ಪ್ರದರ್ಶಿಸಲಾಗಿತ್ತು. ಸೋಮವಾರ ಈ ಕಾರನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿದೆ.

ಹೊಚ್ಚ ಹೊಸ ಟಾಟಾ ನೆಕ್ಸಾನ್ ಸಿಎನ್‌ಜಿ ರೆಡ್ ಡಾರ್ಕ್ ಎಡಿಷನ್ (Tata Nexon CNG Red Dark Edition) ಎಸ್‌ಯುವಿ, ಕೈಗೆಟುಕುವ ಬೆಲೆಯಲ್ಲಿ ಮಾರಾಟಕ್ಕೆ ಬಂದಿದೆ. ಇದು ರೂ.12.70 ಲಕ್ಷದಿಂದ ರೂ.13.69 ಲಕ್ಷ (ಎಕ್ಸ್ ಶೋರೂಂ) ದರವನ್ನು ಒಳಗೊಂಡಿದೆ. ಫಿಯರ್‌ಲೆಸ್ ಪ್ಲಸ್ ಪಿಎಸ್, ಕ್ರಿಯೇಟಿವ್ ಪ್ಲಸ್ ಪಿಎಸ್ ಹಾಗೂ ಕ್ರಿಯೇಟಿವ್ ಪ್ಲಸ್ ಎಸ್ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಖರೀದಿಗೆ ದೊರೆಯುತ್ತದೆ.

Tata Nexon CNG Red Dark Edition Launched In India Rs 12 70 Lakh Starting Price Details

ನೂತನ ಟಾಟಾ ನೆಕ್ಸಾನ್ ಸಿಎನ್‌ಜಿ ರೆಡ್ ಡಾರ್ಕ್ ಎಡಿಷನ್ ಕಾರು, ಸಾಮಾನ್ಯ ನೆಕ್ಸಾನ್ ಮಾಡೆಲ್‌ನಂತೆ ವಿನ್ಯಾಸವನ್ನು ಹೊಂದಿದೆ. ಆದರೂ ಕೆಲವೊಂದು 'ಕಾಸ್ಮೆಟಿಕ್' ಬದಲಾವಣೆಗಳನ್ನು ಪಡೆದುಕೊಂಡಿದೆ. ಹೊರಭಾಗದಲ್ಲಿ ರೆಡ್ ಅಸೆಂಟ್‌ನೊಂದಿಗೆ ಕಾರ್ಬನ್ ಬ್ಲ್ಯಾಕ್ ಪೇಂಟ್ ಸ್ಕೀಮ್‌ನ್ನು ಹೊಂದಿದೆ. ಈ ಕಾರಿನ ಒಳಭಾಗವು ಪಿಯಾನೋ ಬ್ಲ್ಯಾಕ್ ಪೇಂಟ್‌ನಿಂದ ಆವೃತ್ತಗೊಂಡಿದೆ.

ಈ ಎಸ್‌ಯುವಿ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 10.2-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪನೋರಮಿಕ್ ಸನ್‌ರೂಫ್, ವೈರ್‌ಲೆಸ್ ಚಾರ್ಜಿಂಗ್, ವೆಂಟಿಲೇಟೆಡ್ ಸೀಟ್‌ಗಳು, ಜೆಬಿಎಲ್ 8-ಸ್ಪೀಕರ್ ಸಿಸ್ಟಮ್‌ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಇದರೊಂದಿಗೆ 5-ಆಸನಗಳನ್ನು ಪಡೆದಿದೆ.

ಟಾಟಾ ನೆಕ್ಸಾನ್ ಸಿಎನ್‌ಜಿ ರೆಡ್ ಡಾರ್ಕ್ ಎಡಿಷನ್ ಎಸ್‌ಯುವಿ ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. ಇದರ 1.2-ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್/ ಸಿಎನ್‌ಜಿ ಎಂಜಿನ್, 99 ಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 170 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. 24.08 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ ಎಂದು ಅಂದಾಜಿಸಲಾಗಿದೆ.

ಟಾಟಾ ನೆಕ್ಸಾನ್ ಇವಿ (Tata Nexon EV) ಇವಿ ಕೂಡ ಖರೀದಿಗೆ ಲಭ್ಯ: ಇದು ರೂ.12.49 ಲಕ್ಷದಿಂದ ರೂ.17.19 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 40.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 46.08 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದ್ದು, ಭರ್ತಿ ಚಾರ್ಜ್‌ನಲ್ಲಿ 390 ರಿಂದ 489 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

ಈ ಟಾಟಾ ನೆಕ್ಸಾನ್ ಇವಿ ಸಹ 5-ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ನಡೆಸಬಹುದು. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, January 28, 2025, 10:21 [IST]
English summary
Tata nexon cng red dark edition launched in india rs 12 70 lakh starting price details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+