TATA: ಟಾಟಾದ ಶಕ್ತಿ ಮತ್ತೊಮ್ಮೆ ಸಾಬೀತು, ಈ ಕಾರಿಗೆ ಮನಸೋತ ಗ್ರಾಹಕರು.. 24 Km ಮೈಲೇಜ್, 7 ಲಕ್ಷ ರೂಪಾಯಿ!
ಭಾರತದಲ್ಲಿ ಕಾಂಪ್ಯಾಕ್ಟ್ ಎಸ್‌ಯುವಿಗಳಿಗೆ ವಿಪರೀತವಾದ ಬೇಡಿಕೆಯಿದೆ. ಅದರಲ್ಲೂ 'ಟಾಟಾ ನೆಕ್ಸಾನ್'ನ್ನು ಗ್ರಾಹಕರು ಮೆಚ್ಚಿಕೊಂಡಿದ್ದು, ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ವರ್ಷದ ನವೆಂಬರ್‌ನಲ್ಲೂ 'ನೆಕ್ಸಾನ್' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 22,434 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. ಇದರೊಂದಿಗೆ ದೇಶೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾದ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, 3 ತಿಂಗಳಿನಿಂದಲೂ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಹಾಗೆಯೇ ಅಕ್ಟೋಬರ್‌ನಲ್ಲಿ 22,083 ಯುನಿಟ್‌ಗಳು ಹಾಗೂ ಸೆಪ್ಟೆಂಬರ್‌ನಲ್ಲಿ 22,573 ಯುನಿಟ್‌ಗಳನ್ನು ಮಾರಲಾಗಿತ್ತು.
ಇದೇ ನವೆಂಬರ್‌ನಲ್ಲಿ ಟಾಟಾ ನೆಕ್ಸಾನ್ (Tata Nexon) ಎಸ್‌ಯುವಿ, ಈ ಪರಿಪ್ರಮಾಣದಲ್ಲಿ ಮಾರಾಟಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಸೆಪ್ಟೆಂಬರ್ 22 ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. 'ನೆಕ್ಸಾನ್' ಬೆಲೆಯೂ ಇಳಿಕೆಯಾಗಿದೆ. ಜೊತೆಗಿದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಹೀಗಾಗಿ, ಮಾರಾಟ ಸಂಖ್ಯೆ ಅಧಿಕಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ.

ಸತತ 4 ಹಣಕಾಸು ವರ್ಷದಲ್ಲೂ 'ಟಾಟಾ ನೆಕ್ಸಾನ್' ಅತಿ ಸಂಖ್ಯೆಯಲ್ಲಿ ಮಾರಾಟಗೊಂಡ ಎಸ್‌ಯುವಿಯಾಗಿ ಹೊರಹೊಮ್ಮಿದೆ. 2022ರ ಆರ್ಥಿಕ ವರ್ಷದಲ್ಲಿ 1.24 ಲಕ್ಷ ಯುನಿಟ್‌ಗಳು, 2023ರ ಹಣಕಾಸು ವರ್ಷದಲ್ಲಿ 1.72 ಲಕ್ಷ ಯುನಿಟ್‌ಗಳು, 2024ರ ಆರ್ಥಿಕ ವರ್ಷದಲ್ಲಿ 1.71 ಲಕ್ಷ ಯುನಿಟ್‌ಗಳು ಹಾಗೂ 2025ರ ಹಣಕಾಸು ವರ್ಷದಲ್ಲಿ 1.63 ಲಕ್ಷ ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಈವರೆಗೆ 1.30 ಲಕ್ಷ ಯುನಿಟ್‌ಗಳನ್ನು ಮಾರಲಾಗಿದೆ.
ಸ್ಟ್ಯಾಂಡರ್ಡ್ ಟಾಟಾ ನೆಕ್ಸಾನ್ ವಿಶೇಷತೆಗಳೇನು:
ಈ ಎಸ್‌ಯುವಿಯು ರೂ.7.32 ಲಕ್ಷದಿಂದ ರೂ.14.05 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಪ್ಯೂರ್ ಗ್ರೇ, ಗ್ರಾಸ್‌ಲ್ಯಾಂಡ್ ಬೀಜ್, ಡೇಟೋನಾ ಗ್ರೇ, ಪ್ರಿಸ್ಟೈನ್ ವೈಟ್, ಓಷನ್ ಬ್ಲೂ, ರಾಯಲ್ ಬ್ಲೂ, ಕಾರ್ಬನ್ ಬ್ಲ್ಯಾಕ್ ಮತ್ತು ಅಟ್ಲಾಸ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 208 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,498 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.
ನೂತನ ನೆಕ್ಸಾನ್ 1.2-ಲೀ. ಪೆಟ್ರೋಲ್, 1.5 ಲೀ. ಡೀಸೆಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 17 ರಿಂದ 24 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 14.69 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಇದು 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9 ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಹಾಗೂ ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360 ಡಿಗ್ರಿ ಕ್ಯಾಮೆರಾನ್ನು ಹೊಂದಿದೆ.
ಟಾಟಾ ನೆಕ್ಸಾನ್ ಇವಿ ಕೂಡ ಖರೀದಿಗೆ ಲಭ್ಯ:
ಈ ಎಸ್‌ಯುವಿ ಕನಿಷ್ಠ ರೂ.12.49 ಲಕ್ಷ ಹಾಗೂ ಗರಿಷ್ಠ ರೂ.17.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ತನ್ನದಾಗಿಸಿಕೊಂಡಿದೆ. ಪ್ರಿಸ್ಟೈನ್ ವೈಟ್, ಡೇಟೋನಾ ಗ್ರೇ, ಫ್ಲೇಮ್ ರೆಡ್, ಇಂಟೆನ್ಸಿ ಟೀಲ್, ಎಂಪವರ್ಡ್ ಆಕ್ಸೈಡ್, ಕ್ರಿಯೇಟಿವ್ ಓಷನ್ ಮತ್ತು ಎಂಪವರ್ಡ್ ಡಾರ್ಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,498 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.
ಹೊಸ 'ನೆಕ್ಸಾನ್' ಎಲೆಕ್ಟ್ರಿಕ್ ಕಾರು, 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 30 & 45 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 275 ರಿಂದ 489 ಕಿ.ಮೀವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾನ್ನು ಪಡೆದಿದೆ.


Click it and Unblock the Notifications








