TATA: 489 ಕಿ.ಮೀ ರೇಂಜ್.. ಈ ಜನಪ್ರಿಯ ಟಾಟಾ SUV ಕುರಿತ ಪ್ರಮುಖಾಂಶಗಳು!
ಟಾಟಾ ನೆಕ್ಸಾನ್ ಇವಿ (Tata Nexon EV) ಜಗಮೆಚ್ಚಿದ ಎಸ್‌ಯುವಿಯಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದೆ. ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ನೀವು ಹೊಸ ಎಲೆಕ್ಟ್ರಿಕ್ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, 'ನೆಕ್ಸಾನ್ ಇವಿ' ಅತ್ಯುತ್ತಮವಾದ ಆಯ್ಕೆಯಾಗಲಿದೆ. ಬನ್ನಿ, ಈ ಎಸ್‌ಯುವಿಯ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ & ರೂಪಾಂತರಗಳು (Price & Variants):
ಇದು ಸ್ಪರ್ಧಾತ್ಮಕ ದರದಲ್ಲೂ ಗ್ರಾಹಕರ ಖರೀದಿಗೆ ಲಭ್ಯವಿದೆ. ಕನಿಷ್ಠ ರೂ.12.49 ಲಕ್ಷ ಹಾಗೂ ಗರಿಷ್ಠ ರೂ.17.49 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಹೊಂದಿದೆ. ಕ್ರಿಯೇಟಿವ್ (Creative), ಫಿಯರ್‌ಲೆಸ್ (Fearless) ಮತ್ತು ಎಂಪವರ್ಡ್ (Empowered) ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ.

ವಿನ್ಯಾಸ & ಬಣ್ಣಗಳು (Design & Colors):
ಈ ಕಾರು ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಪ್ರಿಸ್ಟೈನ್ ವೈಟ್, ಡೇಟೋನಾ ಗ್ರೇ, ಫ್ಲೇಮ್ ರೆಡ್, ಇಂಟೆನ್ಸಿ ಟೀಲ್, ಎಂಪವರ್ಡ್ ಆಕ್ಸೈಡ್, ಕ್ರಿಯೇಟಿವ್ ಓಷನ್ & ಎಂಪವರ್ಡ್ ಡಾರ್ಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಸುತ್ತಳತೆ (Dimensions):
ನೂತನ 'ನೆಕ್ಸಾನ್ ಇವಿ' ಸಾಕಷ್ಟು ದೊಡ್ಡ ಗಾತ್ರದಲ್ಲಿದೆ. 3,995 ಮಿ.ಮೀ ಉದ್ದ, 1,802 ಮಿ.ಮೀ ಅಗಲ ಮತ್ತು 1,625 ಮಿ.ಮೀ ಎತ್ತರವಿದೆ. ಜೊತೆಗಿದು 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,498 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,400 ಕೆಜಿ ತೂಕವಿದೆ.
ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಇದು 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ದೂರದ ಊರುಗಳಿಗೆ ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಮತ್ತು ರಜಾ ದಿನಗಳಲ್ಲಿ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 350 ಲೀ.ನಷ್ಟು ಬೂಟ್ ಸ್ಪೇನ್‌ನ್ನು ಪಡೆದಿದೆ.
ಕಾರ್ಯಕ್ಷಮತೆ (Performance):
ಈ ಕಾರು ಬಲಿಷ್ಠವಾದ 2 ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 30 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಮಾಡೆಲ್, ಸಂಪೂರ್ಣ ಚಾರ್ಜ್‌ನಲ್ಲಿ 275 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. ಸಿಂಗಲ್ ಮೋಟಾರ್‌ನ್ನು ಪಡೆದಿದೆ. 129 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 215 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.
ಮತ್ತೊಂದು 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಮಾಡೆಲ್, ಭರ್ತಿ ಚಾರ್ಜ್‌ನಲ್ಲಿ 489 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. ಸಿಂಗಲ್ ಮೋಟಾರ್‌ನ್ನು ಒಳಗೊಂಡಿದೆ. 144 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 215 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಒಳಾಂಗಣ & ವೈಶಿಷ್ಟ್ಯಗಳು (Interior & Features):
ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 9 ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಆಟೋ ಎಸಿ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಸನ್‌ರೂಫ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜಿಂಗ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಹೊಸ 'ನೆಕ್ಸಾನ್ ಇವಿ' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಕ್ರೂಸ್ ಕಂಟ್ರೋಲ್, ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳು ಮತ್ತು 360 ಡಿಗ್ರಿ ಕ್ಯಾಮೆರಾನ್ನು ಹೊಂದಿದೆ.


Click it and Unblock the Notifications








