TATA: 24 ಕಿ.ಮೀ ಮೈಲೇಜ್.. 7 ಲಕ್ಷ, ಜನಪ್ರಿಯ ಟಾಟಾ SUV ಕುರಿತ ಪ್ರಮುಖಾಂಶಗಳು!
ಟಾಟಾ ನೆಕ್ಸಾನ್ (Tata Nexon) ವಿಶ್ವಾಸಾರ್ಹ ಎಸ್‌ಯುವಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಕಾರಾಗಿಯೂ ಹೊರಹೊಮ್ಮಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ನೀವು ಹೊಚ್ಚ ಹೊಸ ಕಾರೊಂದನ್ನು ಕೊಂಡುಕೊಳ್ಳಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ 'ನೆಕ್ಸಾನ್' ಅತ್ಯುತ್ತಮವಾದ ಆಯ್ಕೆಯಾಗಲಿವೆ. ಇಲ್ಲಿ ಈ ಎಸ್‌ಯುವಿಯ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ವಿವರಿಸಿದ್ದೇವೆ.
ಬೆಲೆ & ರೂಪಾಂತರಗಳು (Price & Variants):
ಇದು ಕೈಗೆಟುಕುವ ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಕನಿಷ್ಠ ರೂ.7.32 ಲಕ್ಷ ಹಾಗೂ ಗರಿಷ್ಠ ರೂ.14.05 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸ್ಮಾರ್ಟ್, ಸ್ಮಾರ್ಟ್ ಪ್ಲಸ್, ಪ್ಯೂರ್, ಪ್ಯೂರ್ ಪ್ಲಸ್, ಕ್ರಿಯೇಟಿವ್, ಕ್ರಿಯೇಟಿವ್ ಪ್ಲಸ್, ಫಿಯರ್‌ಲೆಸ್ ಹಾಗೂ ಫಿಯರ್‌ಲೆಸ್ ಪ್ಲಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colors):
ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು 17 ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಪ್ಯೂರ್ ಗ್ರೇ, ಗ್ರಾಸ್‌ಲ್ಯಾಂಡ್ ಬೀಜ್, ಡೇಟೋನಾ ಗ್ರೇ, ಪ್ರಿಸ್ಟೈನ್ ವೈಟ್, ಓಷನ್ ಬ್ಲೂ, ರಾಯಲ್ ಬ್ಲೂ, ಕಾರ್ಬನ್ ಬ್ಲ್ಯಾಕ್ ಹಾಗೂ ಅಟ್ಲಾಸ್ ಬ್ಲ್ಯಾಕ್ ಬಣ್ಣಗಳೊಂದಿಗೂ ದೊರೆಯುತ್ತದೆ.
ಸುತ್ತಳತೆ (Dimensions):
ಹೊಸ 'ನೆಕ್ಸಾನ್' ಸಾಕಷ್ಟು ದೊಡ್ಡದಾಗಿದೆ. 3,995 ಎಂಎಂ ಉದ್ದ, 1,804 ಎಂಎಂ ಅಗಲ ಹಾಗೂ 1,620 ಎಂಎಂ ಎತ್ತರವಿದೆ. 208 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,498 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 1,240 ಕೆಜಿ ತೂಕವಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 350 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಒಳಗೊಂಡಿದೆ.
ಕಾರ್ಯಕ್ಷಮತೆ (Performance):
ನೂತನ 'ನೆಕ್ಸಾನ್' ಶಕ್ತಿಶಾಲಿಯಾದ 3 ಪವರ್‌ಟ್ರೇನ್‌ನ್ನು ಹೊಂದಿದೆ. ಈ ಕಾರಿನ 1.2-ಲೀಟರ್ ಟರ್ಬೋಚಾರ್ಜ್ಡ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್, 118 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 170 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಪಡೆದಿದೆ.
ಮತ್ತೊಂದು 1.5 ಲೀಟರ್ ಟರ್ಬೋಚಾರ್ಜ್ಡ್ 4-ಸಿಲಿಂಡರ್ ಡೀಸೆಲ್ ಎಂಜಿನ್, 113 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 260 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.
ಇನ್ನೊಂದು 1.2-ಲೀಟರ್ ಟರ್ಬೋಚಾರ್ಜ್ಡ್ 3-ಸಿಲಿಂಡರ್ ಪೆಟ್ರೋಲ್ + ಸಿಎನ್‌ಜಿ ಎಂಜಿನ್, 99 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 170 (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 17 ರಿಂದ 24 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.
ವೈಶಿಷ್ಟ್ಯಗಳು (Features):
ಹೊಸ 'ನೆಕ್ಸಾನ್' 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9 ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








