Tata: 24 Km ಮೈಲೇಜ್.. 8 ಲಕ್ಷ, 5-ಸೀಟರ್.. ಜನಪ್ರಿಯ ಟಾಟಾ ನೆಕ್ಸಾನ್ ಕಾರಿಗೆ ಭಾರೀ ರಿಯಾಯಿತಿ!

ಟಾಟಾ ನೆಕ್ಸಾನ್ (Tata Nexon) ಪ್ರಖ್ಯಾತ ಎಸ್‌ಯುವಿಯಾಗಿದೆ. ಈ ಕಾರು ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಕಳೆದ ತಿಂಗಳು (ಮಾರ್ಚ್‌) 16,366 ಯುನಿಟ್ ನೆಕ್ಸಾನ್ ಎಸ್‌ಯುವಿಗಳನ್ನು ಮಾರಾಟಗೊಳಿಸಲಾಗಿದೆ. ಸದ್ಯ, ಈ ಏಪ್ರಿಲ್ ತಿಂಗಳು ನೂತನ ಟಾಟಾ ನೆಕ್ಸಾನ್ ಕಾರಿನ ಖರೀದಿ ಮೇಲೆ ಭರ್ಜರಿ ರಿಯಾಯಿತಿಯನ್ನು ಘೋಷಣೆ ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಕರ್ನಾಟಕದಲ್ಲಿ ಟಾಟಾ ನೆಕ್ಸಾನ್ ಎಸ್‌ಯುವಿಯ 2024ರ ಮಾಡೆಲ್‌ಗಳು (ಪೆಟ್ರೋಲ್/ಡೀಸೆಲ್/ಸಿಎನ್‌ಜಿ) ಒಟ್ಟು ರೂ.45,000 ರಿಯಾಯಿತಿ ಪ್ರಯೋಜನವನ್ನು ಪಡೆದಿವೆ. ಅದರಲ್ಲಿ ರೂ.35,000 ಗ್ರಾಹಕ ರಿಯಾಯಿತಿ (Consumer Discount) ಹಾಗೂ ರೂ.10,000 ವಿನಿಮಯ/ ಸ್ಕ್ರ್ಯಾಪೇಜ್ ಬೋನಸ್ (Exchange/ Scrappage bonus) ಕೂಡ ಸೇರಿವೆ.

Tata Nexon Suv Have Big Discount In April 2025 Details

ಇದೇ ಟಾಟಾ ನೆಕ್ಸಾನ್ ಕಾರಿನ 2025ರ ಮಾಡೆಲ್‌ಗಳು (ಪೆಟ್ರೋಲ್/ಡೀಸೆಲ್) ಸರಿ ಸುಮಾರು ರೂ.15,000 ವಿನಿಮಯ/ ಸ್ಕ್ರ್ಯಾಪೇಜ್ ಬೋನಸ್‌ನ್ನು ಮಾತ್ರ ದೊಂದಿವೆ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಈ ನೆಕ್ಸಾನ್ ಎಸ್‌ಯುವಿ ಬಜೆಟ್ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯಲಿದ್ದು, ರೂ.8 ಲಕ್ಷದಿಂದ ರೂ.15.60 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.

ನೂತನ ಟಾಟಾ ನೆಕ್ಸಾನ್ ಎಸ್‌ಯುವಿ ಸ್ಮಾರ್ಟ್, ಕ್ರಿಯೆಟಿವ್ & ಫಿಯರ್‌ಲೆಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ. ಹೊರಭಾಗವು ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಪ್ರಿಸ್ಟೈನ್ ವೈಟ್, ಡೇಟೋನಾ ಗ್ರೇ, ಗ್ರಾಸ್‌ಲ್ಯಾಂಡ್ ಬೀಜ್, ಪ್ಯೂರ್ ಗ್ರೇ, ಓಷನ್ ಬ್ಲೂ ಹಾಗೂ ರಾಯಲ್ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Tata Nexon Suv Have Big Discount In April 2025 Details

ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. ಇದು 1.2-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್/ಆಟೋಮೆಟಿಕ್ & 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಹೊಂದಿದೆ. 17.01 ರಿಂದ 24 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾದಿನಗಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 321 ರಿಂದ 382 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಕ್ರೂಸ್ ಕಂಟ್ರೋಲ್ ಮತ್ತು 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್‌ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

Tata Nexon Suv Have Big Discount In April 2025 Details

ಹೊಸ ಟಾಟಾ ನೆಕ್ಸಾನ್ ಎಸ್‌ಯುವಿ ಪ್ರಯಾಣಿಕರಿಗೂ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಟ್ರಾಕ್ಷನ್ ಕಂಟ್ರೋಲ್, ರೇರ್ ಪಾರ್ಕಿಂಗ್ ಸೆನ್ಸರ್ಸ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, April 12, 2025, 10:39 [IST]
English summary
Tata nexon suv have big discount in april 2025 details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+