TATA: 24 ಕಿ.ಮೀ ಮೈಲೇಜ್.. ಬರೀ 7 ಲಕ್ಷ, 5-ಸೀಟರ್.. ಈ ಜನಪ್ರಿಯ ಟಾಟಾ ಕಾರಿಗೆ ದೊಡ್ಡ ರಿಯಾಯಿತಿ ಘೋಷಣೆ!
ಟಾಟಾ ನೆಕ್ಸಾನ್ (Tata Nexon) ಜಗಮೆಚ್ಚಿದ ಕಾಂಪ್ಯಾಕ್ಟ್ ಎಸ್‌ಯುವಿಯಾಗಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಕಾರಾಗಿಯೂ ಹೊರಹೊಮ್ಮಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ದೀಪಾವಳಿ ಪ್ರಯುಕ್ತ ಈ ಅಕ್ಟೋಬರ್ ತಿಂಗಳು ಇದೇ 'ನೆಕ್ಸಾನ್' ಎಸ್‌ಯುವಿ ಖರೀದಿ ಮೇಲೆ ದೊಡ್ಡ ಮಟ್ಟದಲ್ಲಿ ಹಣಕಾಸಿನ ಪ್ರಯೋಜನಗಳು ಲಭ್ಯವಿವೆ. ಬನ್ನಿ, ಯಾವ ಮಾಡೆಲ್‌ಗೆ ಎಷ್ಟು ರಿಯಾಯಿತಿ ಇದೆ ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
2025 ರಲ್ಲಿ ತಯಾರಿಸಲಾದ 'ನೆಕ್ಸಾನ್' ಎಸ್‌ಯುವಿಯ ಬಹುತೇಕ ಎಲ್ಲ ವಿಧದ (ಪೆಟ್ರೋಲ್/ ಡೀಸೆಲ್/ ಸಿಎನ್‌ಜಿ) ರೂಪಾಂತರಗಳು, ಒಟ್ಟು ರೂ.45,000 ವರೆಗೆ ಹಣಕಾಸು ಪ್ರಯೋಜನಗಳನ್ನು ಪಡೆದಿವೆ. ಅದರೊಳಗೆ ರೂ.10,000 ನಗದು ರಿಯಾಯಿತಿ, ರೂ.15,000 ವಿನುಮಯ ಬೋನಸ್ ಮತ್ತು ರೂ.20,000 ಲಾಯಲ್ಟಿ ಬೋನಸ್ ಸಹ ಸೇರಿದೆ.

ಅದೇ ರೀತಿಯಲ್ಲಿ 2024 ರಲ್ಲಿ ಉತ್ಪಾದನೆಗೊಂಡ 'ನೆಕ್ಸಾನ್' ಕಾರಿನ ಹಲವು ರೂಪಾಂತರಗಳು, ಸರಿ ಸುಮಾರು ರೂ.45,000 ವರೆಗೆ ರಿಯಾಯಿತಿ ಹೊಂದಿವೆ. ಇದರಲ್ಲಿ ಬರೋಬ್ಬರಿ ರೂ.35,000 ನಗದು ರಿಯಾಯಿತಿ ಹಾಗೂ ರೂ.10,000 ವಿನಿಮಯ ಬೋನಸ್‌ನ್ನು ಒಳಗೊಂಡಿದೆ.
ಟಾಟಾ ನೆಕ್ಸಾನ್ ವಿಶೇಷತೆಗಳೇನು:
ಈ ಕಾರು ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ರೂ.7.32 ಲಕ್ಷದಿಂದ ರೂ.14.05 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರಿಗೆ ಸುಲಭವಾಗಿ ಕೈಗೆಟುಕುತ್ತದೆ. ಸ್ಮಾರ್ಟ್, ಸ್ಮಾರ್ಟ್ ಪ್ಲಸ್, ಪ್ಯೂರ್, ಪ್ಯೂರ್ ಪ್ಲಸ್, ಪ್ಯೂರ್ ಪ್ಲಸ್ ಎಸ್, ಕ್ರಿಯೇಟಿವ್, ಕ್ರಿಯೇಟಿವ್ ಪ್ಲಸ್, ಕ್ರಿಯೇಟಿವ್ ಎಸ್, ಫಿಯರ್‌ಲೆಸ್, ಫಿಯರ್‌ಲೆಸ್ ಪ್ಲಸ್ ಮತ್ತು ಫಿಯರ್‌ಲೆಸ್ ಎಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 17 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಡೇಟೋನಾ ಗ್ರೇ, ಪ್ರಿಸ್ಟೈನ್ ವೈಟ್, ಕಾರ್ಬನ್ ಬ್ಲ್ಯಾಕ್, ಗ್ರಾಸ್‌ಲ್ಯಾಂಡ್ ಬೀಜ್, ರಾಯಲ್ ಬ್ಲೂ ಹಾಗೂ ಓಷನ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ನೂತನ 'ನೆಕ್ಸಾನ್' 3,995 ಮಿ.ಮೀ ಉದ್ದ, 1,804 ಮಿ.ಮೀ ಅಗಲ ಮತ್ತು 1,620 ಮಿ.ಮೀ ಎತ್ತರವಿದೆ. ಜೊತೆಗಿದು 208 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,498 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,240 ಕೆಜಿ ತೂಕವಿದೆ.
ಈ ಕಾರು 1.2-ಲೀ. ಪೆಟ್ರೋಲ್, 1.5-ಲೀ. ಡೀಸೆಲ್ & 1.2-ಲೀ. ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 17 ರಿಂದ 24 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 10.5 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗದುಕೊಂಡು ಹೋಗಲು ಸಾಧ್ಯವಾಗುವಂತೆ 350 ಲೀ.ನಷ್ಟು ಬೂಟ್ ಸ್ಪೇನ್‌ನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.3 ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಜೆಬಿಎಲ್ ಸೌಂಡ್ ಸಿಸ್ಟಮ್, ಆಟೋ ಎಸಿ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು & ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ಹೊಸ 'ನೆಕ್ಸಾನ್' ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ಸಲುವಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ವಿತರಣೆ), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಕ್ರೂಸ್ ಕಂಟ್ರೋಲ್ ಹಾಗೂ 360 ಡಿಗ್ರಿ ಕ್ಯಾಮೆರಾನ್ನು ತನ್ನದಾಗಿಸಿಕೊಂಡಿದೆ.
ನಿಮ್ಮ ಗಮನಕ್ಕೆ.. ಈ ರಿಯಾಯಿತಿ ಪ್ರಯೋಜನಗಳು ನಗರದಿಂದ ನಗರಕ್ಕೆ ಡೀಲರ್‌ಶಿಪ್‌ಗಳಿಗೆ ಅನುಗುಣವಾಗಿ ಬೇರೆಯಾಗಬಹುದು. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








