24 Km ಮೈಲೇಜ್.. 8 ಲಕ್ಷ, 5-ಸೀಟರ್.. ಈ ಜನಪ್ರಿಯ Tata Suvಗೆ ಫುಲ್ ಡಿಮ್ಯಾಂಡ್.. 11,000 ಗ್ರಾಹಕರಿಂದ ಖರೀದಿ!

ಟಾಟಾ ನೆಕ್ಸಾನ್ (Tata Nexon) ಜನಪ್ರಿಯ ಕಾರಾಗಿದೆ. ಇದು ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ತನ್ನದೇಯಾದ ಛಾಪನ್ನು ಮೂಡಿಸಿದೆ. ವಿಶ್ವಾಸಾರ್ಹತೆ ಹಾಗೂ ಉತ್ತಮ ಕಾರ್ಯಕ್ಷಮತೆಗೂ ಹೆಸರುವಾಗಿದೆ. ಈ ಜೂನ್ ತಿಂಗಳು 11,602 ಯುನಿಟ್ ನೆಕ್ಸಾನ್ ಕಾರುಗಳನ್ನು ಮಾರಾಟ ಮಾಡಲಾಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಸ್ವಲ್ಪ ಮಟ್ಟಿಗೆ ಅಂದರೆ -4% ಮಾತ್ರ ಇಳಿಕೆಯಾಗಿದೆ. 2024ರ ಇದೇ ಅವಧಿಯಲ್ಲಿ 12,066 ಯುನಿಟ್‌ಗಳನ್ನು ಮಾರಲಾಗಿತ್ತು.

ಈ ವರ್ಷದ ಮೊದಲ 5 ತಿಂಗಳಲ್ಲೂ ಟಾಟಾ ನೆಕ್ಸಾನ್ ಎಸ್‌ಯುವಿಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಒಟ್ಟು 75,665 ಯುನಿಟ್‌ಗಳನ್ನು ಯಶಸ್ವಿಯಾಗಿ ಮಾರಾಟ ಮಾಡಲಾಗಿದೆ. ಈ ಅಂಕಿ ಸಂಖ್ಯೆಯನ್ನು ಲೆಕ್ಕ ಹಾಕಿದಾಗ ಪ್ರತಿ ತಿಂಗಳು 15,000 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ.

Tata Nexon Suv June 2025 Sales Details

ಟಾಟಾ ನೆಕ್ಸಾನ್ ವಿಶೇಷತೆಗಳೇನು:

ಈ ಎಸ್‌ಯುವಿಯು ಕೈಗೆಟುಕುವ ಬೆಲೆಯಲ್ಲಿ ಸಿಗಲಿದ್ದು, ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಖರೀದಿ ಮಾಡಬಹುದು. ಇದು ರೂ.8 ಲಕ್ಷದಿಂದ ರೂ.15.60 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಸ್ಮಾರ್ಟ್, ಸ್ಮಾರ್ಟ್ ಪ್ಲಸ್, ಪ್ಯೂರ್ ಪ್ಲಸ್, ಪ್ಯೂರ್ ಪ್ಲಸ್ ಎಸ್, ಕ್ರಿಯೇಟಿವ್, ಕ್ರಿಯೇಟಿವ್ ಪ್ಲಸ್, ಫಿಯರ್‌ಲೆಸ್ ಹಾಗೂ ಫಿಯರ್‌ಲೆಸ್ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.

ನೂತನ ನೆಕ್ಸಾನ್ ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಓಷನ್ ಬ್ಲೂ, ಪ್ಯೂರ್ ಗ್ರೇ, ಪ್ಯೂರ್ ವೈಟ್ ಹಾಗೂ ಗ್ರಾಸ್‌ಲ್ಯಾಂಡ್ ಬೀಜ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇದು 3995 ಎಂಎಂ ಉದ್ದ, 1804 ಎಂಎಂ ಅಗಲ ಮತ್ತು 1620 ಎಂಎಂ ಎತ್ತರವು ಇದೆ. ಜೊತೆಗೆ 208 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2498 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Tata Nexon Suv June 2025 Sales Details

ಇದು ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 1.2-ಲೀ. ಟರ್ಬೊ ಪೆಟ್ರೋಲ್, 1.5-ಲೀ. ಡೀಸೆಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಮಾತು 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. ಯಾವ ಬೈಕ್‌ಗೂ ಕಡಿಮೆಯಿಲ್ಲದ ರೀತಿಯಲ್ಲಿ 17.01 ರಿಂದ 24 ಕಿ.ಮೀವರೆಗೂ ಮೈಲೇಜ್ ನೀಡುತ್ತದೆ.

ಈ ಕಾರಿನಲ್ಲಿ 5 ಆಸನಗಳಿವೆ. 10.25 ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Tata Nexon Suv June 2025 Sales Details

ಟಾಟಾ ನೆಕ್ಸಾನ್ ಇವಿಯೂ ಖರೀದಿಗೆ ಲಭ್ಯ:

ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ರೂ.12.49 ಲಕ್ಷದಿಂದ ರೂ.17.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 30 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 275 ರಿಂದ 489 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

ಈ ಕಾರಿನಲ್ಲೂ 5 ಆಸನ ಆಯ್ಕೆ ವ್ಯವಸ್ಥೆಯಿದೆ. 12.3-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿರುವ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಹಾಗೂ ಆಟೋ ಎಸಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Thursday, July 17, 2025, 8:30 [IST]
English summary
Tata nexon suv june 2025 sales details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+