Tata: 8 ಲಕ್ಷ, 24 Km ಮೈಲೇಜ್.. ಈ ಶಕ್ತಿಯುತವಾದ ಟಾಟಾ ಕಾರಿಗೆ ಫುಲ್ ಡಿಮ್ಯಾಂಡ್, ಭಾರೀ ಸಂಖ್ಯೆಯಲ್ಲಿ ಮಾರಾಟ!
ಟಾಟಾ ನೆಕ್ಸಾನ್ (Tata Nexon) ಜನಪ್ರಿಯ ಎಸ್‌ಯುವಿಯಾಗಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಇತ್ತೀಚೆಗೆ, ಎಲ್ಲ ವಾಹನ ತಯಾರಕ ಕಂಪನಿಗಳು ಈ ಮಾರ್ಚ್ ತಿಂಗಳ ಕಾರು ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿವೆ. ದೇಶೀಯ ಮಾರುಕಟ್ಟೆಯಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ ಕಾರುಗಳ ಪಟ್ಟಿಯಲ್ಲಿ ಇದೇ 'ಟಾಟಾ ನೆಕ್ಸಾನ್' ಏಳನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಹ್ಯುಂಡೈ ಕ್ರೆಟಾ, ಎರಡನೇ ಸ್ಥಾನದಲ್ಲಿ ಮಾರುತಿ ಸ್ವಿಫ್ಟ್ ಹಾಗೂ ಮೂರನೇ ಸ್ಥಾನದಲ್ಲಿ ಟಾಟಾ ಪಂಚ್ ಮೈಕ್ರೋ ಎಸ್‌ಯುವಿ ಇದೆ.
ಕಳೆದ ತಿಂಗಳು (ಮಾರ್ಚ್-2025) ಟಾಟಾ ಮೋಟಾರ್ಸ್ ಸರಿ ಸುಮಾರು 16,366 ಯುನಿಟ್ ನೆಕ್ಸಾನ್ ಎಸ್‌ಯುವಿಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 14,058 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 16% ಬೆಳವಣಿಗೆ ಸಾಧಿಸಲಾಗಿದೆ.

ವಿಶೇಷವಾಗಿ ಈ ವರ್ಷದ ಫೆಬ್ರವರಿಯಲ್ಲಿ 15,349 ಯುನಿಟ್ ಮತ್ತು ಜನವರಿಯಲ್ಲಿ 15,397 ಯುನಿಟ್ ಟಾಟಾ ನೆಕ್ಸಾನ್ ಎಸ್‌ಯುವಿಗಳು ಮಾರಾಟಗೊಂಡಿವೆ. 2024ರಲ್ಲಿಯೂ ಈ ಕಾರು ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗಿತ್ತು. ಅದಕ್ಕೆ ಸಾಕ್ಷಿ ಎಂಬಂತೆ ಡಿಸೆಂಬರ್‌ನಲ್ಲಿ 13,536 ಯುನಿಟ್, ನವೆಂಬರ್‌ನಲ್ಲಿ 15,329 ಯುನಿಟ್ ಹಾಗೂ ಅಕ್ಟೋಬರ್‌ನಲ್ಲಿ 14,759 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು.
ಸದ್ಯ, ದೇಶೀಯವಾಗಿ ಖರೀದಿ ಲಭ್ಯವಿರುವ ಹೊಚ್ಚ ಹೊಸ ಟಾಟಾ ನೆಕ್ಸಾನ್ ಎಸ್‌ಯುವಿ, ರೂ.8 ಲಕ್ಷದಿಂದ ರೂ.15.60 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾದಿನಗಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 321 ರಿಂದ 382 ಲೀ. ಬೂಟ್ ಸ್ಪೇಸ್‌ನ್ನು ಪಡೆದಿದೆ.

ಈ ಕಾರು 1.2-ಲೀ. ಟರ್ಬೊ ಪೆಟ್ರೋಲ್, 1.5-ಲೀ. ಡೀಸೆಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಯಾವ ಬೈಕ್‌ಗೂ ಕಡಿಮೆಯಿಲ್ಲದ ರೀತಿಯಲ್ಲಿ 17.01 ರಿಂದ 24 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ನೂತನ ನೆಕ್ಸಾನ್ ಎಸ್‌ಯುವಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಕ್ರೂಸ್ ಕಂಟ್ರೋಲ್ ಹಾಗೂ 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಟಾಟಾ ನೆಕ್ಸಾನ್ ಇವಿಯೂ ಲಭ್ಯ: ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ರೂ.12.49 ಲಕ್ಷದಿಂದ ರೂ.17.19 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 30 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 46.08 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 275 ರಿಂದ 489 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications