24 Km ಮೈಲೇಜ್.. 8 ಲಕ್ಷ, ಈ TATA SUVಗೆ ಫುಲ್ ಡಿಮ್ಯಾಂಡ್.. ಗಾಬರಿ ಹುಟ್ಟಿಸುವ ಸಂಖ್ಯೆಯಲ್ಲಿ ಮಾರಾಟ!

ಟಾಟಾ ನೆಕ್ಸಾನ್ (Tata Nexon) ವಿಶ್ವಾಸಾರ್ಹ ಎಸ್‌ಯುವಿಯಾಗಿದೆ. ಇದು ಬಜೆಟ್ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಇತ್ತೀಚೆಗೆ ದೇಶೀಯ ಮಾರುಕಟ್ಟೆಯಲ್ಲಿ ಈ 'ಮೇ'ನಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ ಕಾರುಗಳ ಪಟ್ಟಿ ಪ್ರಕಟಗೊಂಡಿದೆ. ಅದರಲ್ಲೂ ಇದೇ 'ನೆಕ್ಸಾನ್' 10 ಸ್ಥಾನದಲಿದ್ದು, ಕಂಪನಿಯು ನಿರೀಕ್ಷೆ ಮಾಡಿದ್ದಕ್ಕಿಂತ ಉತ್ತಮ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಹೋದ ತಿಂಗಳು (ಮೇ-2025) ಟಾಟಾ ಮೋಟಾರ್ಸ್ ಬರೋಬ್ಬರಿ 15,457 ಯುನಿಟ್‌ 'ನೆಕ್ಸಾನ್' ಎಸ್‌ಯುವಿಗಳನ್ನು ಮಾರಾಟ ಮಾಡಿದೆ. 2024ರ 'ಮೇ'ನಲ್ಲೂ 11,457 ಯುನಿಟ್‌ಗಳನ್ನು ಮಾರಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣದಲ್ಲಿ ವರ್ಷದಿಂದ ವರ್ಷಕ್ಕೆ (YoY) ಶೇಕಡ 14% ಬೆಳವಣಿಗೆ ಸಾಧಿಸಲಾಗಿದೆ.

Tata Nexon Suv May 2025 Sales Details

ಈ ವರ್ಷದ ಮೊದಲ 4 ತಿಂಗಳಲ್ಲೂ 'ಟಾಟಾ ನೆಕ್ಸಾನ್' ಎಸ್‌ಯುವಿಗಳು ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿವೆ. ಒಟ್ಟಾರೆ 62,569 ಯುನಿಟ್‌ಗಳನ್ನು ಮಾರಾಟವಾಗಿವೆ. ಅದರಲ್ಲಿ ಏಪ್ರಿಲ್‌ನಲ್ಲಿ 15,457 ಯುನಿಟ್, ಮಾರ್ಚ್‌ನಲ್ಲಿ 16,366 ಯುನಿಟ್, ಫೆಬ್ರವರಿಯಲ್ಲಿ 15,349 ಯುನಿಟ್ ಹಾಗೂ ಜನವರಿಯಲ್ಲಿ 15,397 ಯುನಿಟ್‌ಗಳನ್ನು ಯಶಸ್ವಿಯಾಗಿ ಕಂಪನಿಯು ಮಾರಾಟ ಮಾಡಿದೆ.

ಈ ಅಂಕಿ ಸಂಖ್ಯೆಯನ್ನು ಲೆಕ್ಕ ಹಾಕಿದಾಗ ಪ್ರತಿ ತಿಂಗಳು 15,000 ಯುನಿಟ್ 'ಟಾಟಾ ನೆಕ್ಸಾನ್' ಎಸ್‌ಯುವಿಗಳು ಮಾರಾಟವಾಗಿವೆ. ಈ ಕಾರಿನ ಮಾರಾಟ ಸಂಖ್ಯೆ ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ 'ನೆಕ್ಸಾನ್' ಹೆಚ್ಚು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತಿರುವುದರಿಂದ ಗ್ರಾಹಕರು ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Tata Nexon Suv May 2025 Sales Details

ಟಾಟಾ ನೆಕ್ಸಾನ್ ವಿಶೇಷತೆಗಳೇನು..

ಇದೊಂದು ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ರೂ.8 ಲಕ್ಷದಿಂದ ರೂ.15.60 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಈ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಪ್ರಿಸ್ಟೈನ್ ವೈಟ್, ಡೇಟೋನಾ ಗ್ರೇ, ಗ್ರಾಸ್‌ಲ್ಯಾಂಡ್ ಬೀಜ್, ಪ್ಯೂರ್ ಗ್ರೇ ಹಾಗೂ ಓಷನ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಈ ನೂತನ ಕಾರಿನಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 382 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 17 ರಿಂದ 24 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Tata Nexon Suv May 2025 Sales Details

ಟಾಟಾ ನೆಕ್ಸಾನ್ ಇವಿಯೂ ಸಿಗುತ್ತದೆ..

ಇದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ರೂ.12 ಲಕ್ಷದಿಂದ ರೂ.17 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 45 ಮತ್ತು 46.08 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 275 ರಿಂದ 489 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 12.3-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, June 9, 2025, 8:29 [IST]
English summary
Tata nexon suv may 2025 sales details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+