24 ಕಿ.ಮೀ ಮೈಲೇಜ್.. 7 ಲಕ್ಷ, ಈ ಜನಪ್ರಿಯ TATA ಕಾರಿನ ಹೊಸ ಆನ್-ರೋಡ್ ಬೆಲೆ ಎಷ್ಟು, ಇಎಂಐ ಏನು?
ಟಾಟಾ ನೆಕ್ಸಾನ್ (Tata Nexon) ವಿಶ್ವಾಸಾರ್ಹ ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಈ ಕಾರಿನ ದರವು ರೂ.1.55 ಲಕ್ಷವರೆಗೆ ಇಳಿಕೆಯಾಗಿದೆ. ರೂ.7.32 ಲಕ್ಷದಿಂದ ರೂ.14.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ನೀವು ಹೊಚ್ಚ ಹೊಸ ಎಸ್‌ಯುವಿಯೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, 'ನೆಕ್ಸಾನ್' ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಇದೇ ಕಾರಿನ ಆನ್-ರೋಡ್ ಬೆಲೆ (On-Road Price) ಮತ್ತು ಇಎಂಐ (EMI) ಕುರಿತಂತೆ ಪ್ರಮುಖ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಈ ಎಸ್‌ಯುವಿಯು ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರ ಸ್ಮಾರ್ಟ್ (ಪೆಟ್ರೋಲ್) ರೂಪಾಂತರ ರೂ.8.74 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, ರೂ.6.74 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.13,500 ವರೆಗೆ ಇಎಂಐ ಪಾವತಿ ಮಾಡಬೇಕು.

ಇನ್ನೊಂದು ಸ್ಮಾರ್ಟ್ ಪ್ಲಸ್ ಎಸ್ (ಪೆಟ್ರೋಲ್) ರೂಪಾಂತರ ರೂ.9.89 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಖರೀದಿ ಮಾಡಿದರೆ, ರೂ.7.89 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.16,000 ವರೆಗೆ ಇಎಂಐ ಕಟ್ಟಬೇಕು.
ಮತ್ತೊಂದು ಪ್ಯೂರ್ ಪ್ಲಸ್ ಎಸ್ (ಡೀಸೆಲ್) ರೂಪಾಂತರ ರೂ.12.51 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ ರೂ.10.51 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.21,000 ವರೆಗೆ ಇಎಂಐ ಪಾವತಿಸಬೇಕು.

ಇದೇ ಕಾರಿನ ಪ್ಯೂರ್ ಪ್ಲಸ್ (ಸಿಎನ್‌ಜಿ) ರೂಪಾಂತರ ರೂ.11.65 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.9.65 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.19,500 ವರೆಗೆ ಇಎಂಐ ಕಟ್ಟಬೇಕು.
ಟಾಟಾ ನೆಕ್ಸಾನ್ ವಿಶೇಷತೆಗಳೇನು:
ಈ ಎಸ್‌ಯುವಿಯು ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಹೊಂದಿದೆ. ಪ್ಯೂರ್ ಗ್ರೇ, ಡೇಟೋನಾ ಗ್ರೇ, ಪ್ರಿಸ್ಟೈನ್ ವೈಟ್, ಕಾರ್ಬನ್ ಬ್ಲ್ಯಾಕ್, ಗ್ರಾಸ್‌ಲ್ಯಾಂಡ್ ಬೀಜ್ ಹಾಗೂ ರಾಯಲ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 5 ಆಸನಗಳನ್ನು ಒಳಗೊಂಡಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 382 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ನೂತನ ನೆಕ್ಸಾನ್ ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ & 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 17 ರಿಂದ 24 ಕಿ.ಮೀ ವರೆಗೆ ಮೈಲೇಜ್ ನೀಡಬಲ್ಲದು. 150 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.
ಇದು 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9 ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಚಾರ್ಜರ್, ಏರ್ ಪ್ಯೂರಿಫೈಯರ್ ಹಾಗೂ ಪನೋರಮಿಕ್ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.
ನಿಮ್ಮ ಗಮನಕ್ಕೆ.. ಇಲ್ಲಿ ಹೊಸ 'ನೆಕ್ಸಾನ್' ಕಾರಿನ ಕೆಲವೇ ರೂಪಾಂತರಗಳ (ವೇರಿಯೆಂಟ್) ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಹತ್ತಿರದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








