TATA: ಮಾರುಕಟ್ಟೆ ಶೇಕ್.. ಬರೀ 7 ಲಕ್ಷ, ಈ ಜನಪ್ರಿಯ ಟಾಟಾ ಕಾರೇ ನಂಬರ್ 1.. ಮಾರಾಟವು ಜೋರು!

ಟಾಟಾ ನೆಕ್ಸಾನ್ (Tata Nexon) ಜಗಮೆಚ್ಚಿದ ಎಸ್‌ಯುವಿಯಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಅಕ್ಟೋಬರ್ ತಿಂಗಳಲ್ಲೂ 'ನೆಕ್ಸಾನ್' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 22,083 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 14,759 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 49.62% ಬೆಳವಣಿಗೆಯಾಗಿದೆ.

ಇದೇ ಅಕ್ಟೋಬರ್‌ನಲ್ಲಿ 'ಟಾಟಾ ನೆಕ್ಸಾನ್' ಎಸ್‌ಯುವಿ ಮಾರಾಟ ಸಂಖ್ಯೆ ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಸೆ.22 ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದ್ದು, ಈ ಕಾರಿನ ಬೆಲೆ ದೊಡ್ಡ ಮಟ್ಟದಲ್ಲಿ ಇಳಿಕೆಯಾಗಿದೆ. ಜೊತೆಗೆ ದೀಪಾವಳಿ ಹಬ್ಬದ ಹಿನ್ನೆಲೆ, ಭಾರೀ ಪ್ರಮಾಣದಲ್ಲಿ ಮಾರಾಟಗೊಂಡಿದೆ ಎಂಬ ಲೆಕ್ಕಾಚಾರಗಳು ಕೇಳಿಬಂದಿವೆ.

Tata Nexon Suv October 2025 Sales Report

ಸ್ಟ್ಯಾಂಡರ್ಡ್ 'ಟಾಟಾ ನೆಕ್ಸಾನ್' ವಿಶೇಷತೆಗಳೇನು:

ಈ ಕಾರು ಬಜೆಟ್ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.7.32 ಲಕ್ಷದಿಂದ ರೂ.14.05 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಮಾರ್ಟ್, ಸ್ಮಾರ್ಟ್ ಪ್ಲಸ್, ಪ್ಯೂರ್, ಕ್ರಿಯೇಟಿವ್, ಫಿಯರ್‌ಲೆಸ್ ಮತ್ತು ಫಿಯರ್‌ಲೆಸ್ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ಪ್ಯೂರ್ ಗ್ರೇ, ಡೇಟೋನಾ ಗ್ರೇ, ಪ್ರಿಸ್ಟೈನ್ ವೈಟ್, ಓಷನ್ ಬ್ಲೂ, ರಾಯಲ್ ಬ್ಲೂ, ಕಾರ್ಬನ್ ಬ್ಲ್ಯಾಕ್ ಮತ್ತು ಅಟ್ಲಾಸ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ 'ನೆಕ್ಸಾನ್' 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 350 ಲೀಟರ್‌ನಷ್ಟು ಬೂಟ್ ಸ್ಪೇನ್‌ನ್ನು ಪಡೆದಿದೆ. 208 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,498 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

Tata Nexon Suv October 2025 Sales Report

ಇದು ಬಲಿಷ್ಠವಾದ 3 ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್, 1.5 ಲೀಟರ್ ಡೀಸೆಲ್ ಹಾಗೂ 1.2-ಲೀಟರ್ ಪೆಟ್ರೋಲ್+ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 17 ರಿಂದ 24 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ಈ ಎಸ್‌ಯುವಿಯು 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 11 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.3 ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಮತ್ತು ಸನ್‌ರೂಫ್‌ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) 360 ಡಿಗ್ರಿ ಕ್ಯಾಮೆರಾನ್ನು ಒಳಗೊಂಡಿದೆ.

ಟಾಟಾ ನೆಕ್ಸಾನ್ ಇವಿ (Tata Nexon EV) ಕೂಡ ಖರೀದಿಗೆ ಲಭ್ಯ:

ಇದು ಕನಿಷ್ಠ ರೂ.12.49 ಲಕ್ಷ ಹಾಗೂ ಗರಿಷ್ಠ ರೂ.17.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಎಂಪವರ್ಡ್ ಡಾರ್ಕ್, ಓನಿಕ್ಸ್ ಬ್ಲ್ಯಾಕ್, ಕಾರ್ಬನ್ ಬ್ಲ್ಯಾಕ್, ಇಂಟೆನ್ಸಿ ಟೀಲ್, ಫ್ಲೇಮ್ ರೆಡ್ ಹಾಗೂ ಎಂಪವರ್ಡ್ ಆಕ್ಸೈಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ.

ಹೊಸ 'ನೆಕ್ಸಾನ್ ಇವಿ' 30 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 275 ರಿಂದ 489 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 9-ಸ್ಪೀಕರ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

More from DriveSpark

Article Published On: Monday, November 10, 2025, 13:22 [IST]
English summary
Tata nexon suv october 2025 sales report
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+