24 Km ಮೈಲೇಜ್.. 8 ಲಕ್ಷ, 5-ಸೀಟರ್.. Tata Nexon ಕಾರನ್ನು ತೆಗೆದುಕೊಳ್ಳಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ಟಾಟಾ ನೆಕ್ಸಾನ್ (Tata Nexon) ಪ್ರಮುಖ ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಕನಿಷ್ಠ ರೂ.8 ಲಕ್ಷ ಹಾಗೂ ಗರಿಷ್ಠ ರೂ.15.60 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಮನೆಗೆ ತರಲು ಆಲೋಚಿಸಿದ್ದೀರಾ.. ಹಾಗಾದರೆ, 'ನೆಕ್ಸಾನ್' ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ, ಇದೇ ಎಸ್‌ಯುವಿಯ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಈ ಎಸ್‌ಯುವಿಯು ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಇದರ ಸ್ಮಾರ್ಟ್ (ಪೆಟ್ರೋಲ್) ರೂಪಾಂತರ, ರೂ. 9.54 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.4 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.5.54 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.11,000 ವರೆಗೆ ಇಎಂಐ ಕಟ್ಟಬೇಕು.

ಇನ್ನೊಂದು ಪ್ಯೂರ್ ಪ್ಲಸ್ (ಡಿಸೇಲ್) ರೂಪಾಂತರ, ರೂ.13.51 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.4 ಲಕ್ಷ ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಂಡರೆ, ರೂ.9.51 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.19.000 ವರೆಗೆ ಇಎಂಐ ಪಾವತಿ ಮಾಡಬೇಕು.
ಮತ್ತೊಂದು ಪ್ಯೂರ್ ಪ್ಲಸ್ ಎಸ್ (ಪೆಟ್ರೋಲ್) ರೂಪಾಂತರ, ರೂ.11.90 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.4 ಲಕ್ಷ ಡೌನ್-ಪೇಮೆಂಟ್ ಪಾವತಿ ಮಾಡಿ ಮನೆಗೆ ತಂದರೆ, ರೂ.7.89 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.16,000 ವರೆಗೆ ಇಎಂಐ ಕಟ್ಟಬೇಕು.

ಈ ಕಾರಿನ ಕ್ರಿಯೇಟಿವ್ (ಸಿಎನ್‌ಜಿ) ರೂಪಾಂತರ, ರೂ.14.73 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.4 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, ರೂ.10.72 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.22,000 ವರೆಗೆ ಇಎಂಐ ಪಾವತಿಸಬೇಕು.
ಇದೇ ಎಸ್‌ಯುವಿಯ ಕ್ರಿಯೇಟಿವ್ ಪ್ಲಸ್ ಎಸ್ ಡಾರ್ಕ್ (ಪೆಟ್ರೋಲ್) ರೂಪಾಂತರ, ರೂ.14.36 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ರೂ.4 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಖರೀದಿ ಮಾಡಿದರೆ, ರೂ.10.36 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ 21,000 ವರೆಗೆ ಇಎಂಐ ಕಟ್ಟಬೇಕು.

ನೂತನ ನೆಕ್ಸಾನ್ ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಫ್ಲೇಮ್ ರೆಡ್ ಡುಯಲ್ ಟೋನ್, ರಾಯಲ್ ಬ್ಲೂ, ಪ್ಯೂರ್ ಗ್ರೇ, ಡೇಟೋನಾ ಗ್ರೇ, ಓಷನ್ ಬ್ಲೂ ಹಾಗೂ ಕಾರ್ಬನ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 5 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು.
ಈ ಕಾರು ಬಲಿಷ್ಠವಾದ ಮೂರು ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಪಡೆದಿದೆ. 17 ರಿಂದ 24 ಕಿ.ಮೀವರೆಗೂ ಮೈಲೇಜ್ ಕೊಡುತ್ತದೆ. 44 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ.
ಇದು 150 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 8.9 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.
ನಿಮ್ಮ ಗಮನಕ್ಕೆ.. ಈ ಕಾರಿನ ಕೆಲವೇ ರೂಪಾಂತರಗಳ (ವೇರಿಯೆಂಟ್) ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








