6 ಲಕ್ಷ.. 26 ಕಿ.ಮೀ ಮೈಲೇಜ್, ಇದೇ ಕಾರಣಕ್ಕೆ ಟಾಟಾ ಪಂಚ್ & ಹ್ಯುಂಡೈ ಎಕ್ಸ್‌ಟರ್‌ಗಾಗಿ ಮುಗಿಬಿದ್ದ ಗ್ರಾಹಕರು!
ಟಾಟಾ ಪಂಚ್ (Tata Punch) ಹಾಗೂ ಹ್ಯುಂಡೈ ಎಕ್ಸ್‌ಟರ್ (Hyundai Exter) ಜನಪ್ರಿಯ ಮೈಕ್ರೋ ಎಸ್‌ಯುವಿಯಾಗಿ ಹೊರಹೊಮ್ಮಿವೆ. ಈ ವಿಭಾಗದಲ್ಲಿ ಅತಿ ಕಡಿಮೆ ಬೆಲೆಯೊಂದಿಗೆ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವುದರಿಂದ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗಿತ್ತವೆ. ಸದ್ಯ ಇವೆರೆಡು ಎಸ್‌ಯುವಿಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದ್ದು, ಅದಕ್ಕೆ ಸಂಬಂಧಿಸಿದ ಕೆಲವು ಕಾರಣಗಳನ್ನು ಪಟ್ಟಿ ಮಾಡಿದ್ದೇವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಟಾಟಾ ಮೋಟಾರ್ಸ್, ದೇಶೀಯ ಮಾರುಕಟ್ಟೆಯಲ್ಲಿ 2021ರ ಅಕ್ಟೋಬರ್‌ನಲ್ಲಿ 'ಪಂಚ್' ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಆ ವರ್ಷ ಬರೋಬ್ಬರಿ 22,571 ಯುನಿಟ್ ಕಾರುಗಳನ್ನು ಮಾರಾಟಗೊಳಿಸಲಾಗಿತ್ತು. ಮರುವರ್ಷ ಅಂದರೆ 2022ರಲ್ಲಿ 1,29,895 ಯುನಿಟ್, 2023ರಲ್ಲಿ 1,50,182 ಯುನಿಟ್ ಎಸ್‌ಯುವಿಗಳು ಮಾರಾಟವಾಗಿದ್ದವು. 2024ರಲ್ಲಿ ಸರಿ ಸುಮಾರು 2,02,031 ಯುನಿಟ್ ಪಂಚ್ ಕಾರುಗಳನ್ನು ಯಶಸ್ವಿಯಾಗಿ ಮಾರಾಟ ಮಾಡಲಾಗಿತ್ತು.

ಇದರೊಂದಿಗೆ ಕಳೆದ ವರ್ಷ ಭಾರತದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾದ ಕಾರು ಎಂಬ ಹೆಗ್ಗಳಿಕೆಗೂ ಇದೇ 'ಟಾಟಾ ಪಂಚ್' ಎಸ್‌ಯುವಿ ಪಾತ್ರವಾಗಿತ್ತು. 2023 ಜುಲೈನಲ್ಲಿ 'ಹ್ಯುಂಡೈ ಎಕ್ಸ್‌ಟರ್' ಎಸ್‌ಯುವಿಯನ್ನು ಮಾರಾಟಕ್ಕೆ ತರಲಾಗಿತ್ತು. ಆ ವರ್ಷ 47,013 ಯುನಿಟ್ ಮಾರಾಟವಾಗಿದ್ದವು. 2024ರಲ್ಲಿ 84,368 ಯುನಿಟ್ 'ಎಕ್ಸ್‌ಟರ್' ಎಸ್‌ಯುವಿಗಳನ್ನು ಮಾರಾಟಗೊಳಿಸಲಾಗಿತ್ತು.

ಟಾಟಾ ಪಂಚ್ & ಹ್ಯುಂಡೈ ಎಕ್ಸ್‌ಟರ್ ಎಸ್‌ಯುವಿಗಳಿಗೆ ಬೇಡಿಕೆ ಹೆಚ್ಚಾಗಲು ಕಾರಣವೇನು..
ಕೈಗೆಟುಕುವ ಬೆಲೆ: ಈ ಟಾಟಾ ಪಂಚ್ ಹಾಗೂ ಹ್ಯುಂಡೈ ಎಕ್ಸ್‌ಟರ್ ಕಾರುಗಳು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವುದರಿಂದ ಬೇಡಿಕೆ ಹೆಚ್ಚಾಗಿದೆ ಎಂದು ಹೇಳಬಹುದು. ಸಾಮಾನ್ಯ ಪಂಚ್ ರೂ.6.20 ರಿಂದ ರೂ.10.32 ಲಕ್ಷ ಹಾಗೂ ಎಲೆಕ್ಟ್ರಿಕ್ ಚಾಲಿತ ಮಾಡೆಲ್ ರೂ.9.99 ರಿಂದ ರೂ.14.44 ಲಕ್ಷ ದರವನ್ನು ಪಡೆದಿದೆ. ಅದೇ ರೀತಿಯಲ್ಲಿ ಹ್ಯುಂಡೈ ಎಕ್ಸ್‌ಟರ್ ರೂ.6.21 ಲಕ್ಷದಿಂದ ರೂ.10.51 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.
ಅತ್ಯತ್ತಮ ಕಾರ್ಯಕ್ಷಮತೆ: ಇವೆರೆಡು ಕಾರುಗಳು ಸಾಕಷ್ಟು ಶಕ್ತಿಯುತವಾಗಿವೆ. ನೂತನ ಟಾಟಾ ಪಂಚ್ 1.2-ಲೀ. ರೆವೊಟ್ರಾನ್ ಪೆಟ್ರೋಲ್ ಎಂಜಿನ್ ಹಾಗೂ ಸಿಎನ್‌ಜಿ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಪೆಟ್ರೋಲ್ ಮಾಡೆಲ್ 18.8 ರಿಂದ 19-20 ಕೆಎಂಪಿಎಲ್ ಹಾಗೂ ಸಿಎನ್‌ಜಿ ಮಾಡೆಲ್ 26.99 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ.

ಅದೇ ರೀತಿಯಲ್ಲಿ ಪಂಚ್ ಎಲೆಕ್ಟ್ರಿಕ್ ಕಾರಿನ 25 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿರುವ ಮಾಡೆಲ್, ಸಂಪೂರ್ಣ ಚಾರ್ಜ್‌ನಲ್ಲಿ 315 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಮತ್ತೊಂದು 35 ಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಪಡೆದಿರುವ ಮಾಡೆಲ್, ಭರ್ತಿ ಚಾರ್ಜ್‌ನಲ್ಲಿ 421 ಕಿಲೋಮೀಟರ್ ಓಡುತ್ತದೆ.
ಹ್ಯುಂಡೈ ಎಕ್ಸ್‌ಟರ್ ಎಸ್‌ಯುವಿ 1.2-ಲೀ. 4-ಸಿಲಿಂಡರ್ ಎಂಜಿನ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಪೆಟ್ರೋಲ್ ಮಾಡೆಲ್ 19.2 ರಿಂದ 19.4 ಕೆಎಂಪಿಎಲ್ ಹಾಗೂ ಸಿಎನ್‌ಜಿ ಮಾಡೆಲ್ 27.1 ಕೆಎಂ/ಕೆಜಿವರೆಗೆ ಮೈಲೇಜ್ ನೀಡುತ್ತದೆ.
ಹತ್ತಾರು ವೈಶಿಷ್ಟ್ಯಗಳು: ಈ ಕಾರುಗಳು ಗ್ರಾಹಕ ಸ್ನೇಹಿ ವೈಶಿಷ್ಟ್ಯಗಳನ್ನು ಹೊಂದಿವೆ. ಸಾಮಾನ್ಯ ಟಾಟಾ ಪಂಚ್ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಚಾರ್ಜರ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಎರಡು ಏರ್‌ಬ್ಯಾಗ್‌ಗಳನ್ನು ಹೊಂದಿದೆ.
ಟಾಟಾ ಪಂಚ್ ಎಲೆಕ್ಟ್ರಿಕ್ ಎಸ್‌ಯುವಿಯೂ 5 ಆಸನಗಳನ್ನು ಪಡೆದಿದೆ. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 366 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. ಡುಯಲ್ ಡಿಸ್ಪ್ಲೇಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 6-ಸ್ಪೀಕರ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್ & ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಹ್ಯುಂಡೈ ಎಕ್ಸ್‌ಟರ್ ಕಾರಿನಲ್ಲಿಯೂ 5 ಜನರು ಓಡಾಟ ನಡೆಸಬಹುದು. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಕ್ರೂಸ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋ ಎಸಿ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ ಸೀಟ್ ಬೆಲ್ಟ್ ರಿಮೈಂಡರ್ ಅನ್ನು ಹೊಂದಿದೆ.


Click it and Unblock the Notifications